AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಅಂಕಪಟ್ಟಿ ತಯಾರಿಸಿ ನಿರುದ್ಯೋಗಿಗಳಿಗೆ ಮಾರಾಟ: ಕಿಂಗ್​​ಪಿನ್ ಬಂಧನ

ಕಲಬುರಗಿಯ ಸೈಬರ್ ಕ್ರೈಮ್ ಪೊಲೀಸರು ದೇಶಾದ್ಯಂತ ನಕಲಿ ಪದವಿಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ದೊಡ್ಡ ದಂಧೆಯನ್ನು ಪತ್ತೆ ಹಚ್ಚಿದ್ದಾರೆ. ದೆಹಲಿ ಮೂಲದ ವ್ಯಕ್ತಿಯನ್ನ ಬಂಧಿಸಲಾಗಿದ್ದು, 500ಕ್ಕೂ ಹೆಚ್ಚು ನಕಲಿ ಪದವಿ ಪ್ರಮಾಣಪತ್ರಗಳು, ಖಾಲಿ ಪ್ರಮಾಣಪತ್ರಗಳು, ನಕಲಿ ಸೀಲುಗಳು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ನಕಲಿ ಅಂಕಪಟ್ಟಿ ತಯಾರಿಸಿ ನಿರುದ್ಯೋಗಿಗಳಿಗೆ ಮಾರಾಟ: ಕಿಂಗ್​​ಪಿನ್ ಬಂಧನ
ನಕಲಿ ಅಂಕಪಟ್ಟಿ ತಯಾರಿಸಿ ನಿರುದ್ಯೋಗಿಗಳಿಗೆ ಮಾರಾಟ: ಕಿಂಗ್​​ಪಿನ್ ಬಂಧನ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Feb 27, 2025 | 3:15 PM

Share

ಕಲಬುರಗಿ, ಫೆಬ್ರವರಿ 27: ದೇಶದ 28 ವಿಶ್ವವಿದ್ಯಾಲಯಗಳ ನಕಲಿ ಅಂಕಪಟ್ಟಿ (Fake Certificates) ತಯಾರಿಸಿ ನಿರುದ್ಯೋಗಿ ಯುವಕರಿಗೆ ಮಾರಾಟ ಮಾಡುತ್ತಿದ್ದ ಕಿಂಗ್ ಪಿನ್​​ನನ್ನು ಕಲಬುರಗಿಯ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ದೇಹಲಿ ಮೂಲದ ರಾಜೀವ ಸಿಂಗ್ ಆರೋರಾ ಬಂಧಿತ ಆರೋಪಿ. ನವದೆಹಲಿಯ ರಾಮಪಾರ್ಕ್ ಅಪಾರ್ಟ್ಮೆಂಟ್ ದ್ವಾರಕ್ ಮೋಡ್​ನಲ್ಲಿ ಬಂಧಿಸಲಾಗಿದೆ.

ನಕಲಿ ಅಂಕಪಟ್ಟಿ ಜೊತೆಗೆ ನಕಲಿ ವಿಶ್ವವಿದ್ಯಾಲಯ ಸೃಷ್ಟಿ ಮಾಡಿ ಅದರ ಹೆಸರಲ್ಲಿ ನಕಲಿ ಅಂಕಪಟ್ಟಿ ಮಾರಾಟ ಮಾಡುತ್ತಿದ್ದ. ಕರ್ನಾಟಕದ ಬೆಂಗಳೂರು, ಮೈಸೂರು, ಕರ್ನಾಟಕ ಮುಕ್ತ ವಿಶ್ವವಿದ್ಯಾಲಯ ಹೆಸರಲ್ಲಿ ನಕಲಿ ಅಂಕಪಟ್ಟಿ ತಯಾರಿ ಮಾಡುತ್ತಿದ್ದ.

ಇದನ್ನೂ ಓದಿ: ಹುಡ್ಗಿ ಸಲುವಾಗಿ ಯುವಕನ ಮೇಲೆ ಕ್ರೌರ್ಯ: ಫೇಸ್​ಬುಕ್ ಲೈವ್​​ನಲ್ಲೇ ಮನಸ್ಸೋ ಇಚ್ಛೆ ಹಲ್ಲೆ

ಬಂಧಿತ ಆರೋಪಿ ರಾಜೀವ ಸಿಂಗ್ ಆರೋರಾ ಕಳೆದ ಏಳೆಂಟು ವರ್ಷಗಳಿಂದ ನಕಲಿ ಅಂಕ ಪಟ್ಟಿ ತಯಾರಿ ಮಾಡುತ್ತಿದ್ದ. ಪಿಯುಸಿ, ಡಿಪ್ಲೋಮಾ ಇನ್ ಎಜುಕೇಶನ್, ಡಿಪ್ಲೋಮಾ ಆಫ್ ಮೆಡಿಕಲ್ ಲ್ಯಾಬೋರೇಟರಿ ಟೆಕ್ನಾಲಜಿ, ಡಿಪ್ಲೋಮಾ ಇನ್ ಮೆಕ್ಯಾನಿಕಲ್ ಇಂಜಿನಿಯರಿಂಗ್, ಡಾಕ್ಟರ್ ಆಫ್ ಫಿಲಾಸಫಿ, ಬಿ ಟೇಕ್ ಸೇರಿ ವಿವಿಧ ಕೋರ್ಸ್​​ಗಳ ನಕಲಿ ಅಂಕಪಟ್ಟಿ ತಯಾರಿಸಿ ಮಾರಾಟ ಮಾಡುತ್ತಿದ್ದ.

ಸದ್ಯ ಬಂಧಿತನಿಂದ ಬರೋಬ್ಬರಿ 522 ನಕಲಿ ಅಂಕಪಟ್ಟಿಗಳು, 1626 ಖಾಲಿ ಅಂಕಪಟ್ಟಿಗಳು, 36 ಮೊಬೈಲ್, 2 ಲ್ಯಾಪ್‌ ಟಾಪ್, 1 ಪ್ರಿಂಟರ್​​, ವಿವಿಧ ವಿಶ್ವವಿದ್ಯಾಲಯಗಳ 122 ನಕಲಿ ಸೀಲ್​​ಗಳು, ಎಟಿಎಂ ಕಾರ್ಡ್ ಮತ್ತು ಆರೋಪಿಯ 123 ನಕಲಿ ಐಡಿಗಳು, ಆರೋಪಿಯ 85 ಬ್ಯಾಂಕ್ ಅಕೌಂಟ್​​​ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮನೆ ಬೀಗ ಮುರಿದು ಮನೆ ಕಳ್ಳತನ: 90 ಗ್ರಾಂ ಚಿನ್ನಾಭರಣ, 2 ಲಕ್ಷ ನಗದು ದೋಚಿದ ಖದೀಮರು

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಪೋತ್ನಾಳ ಗ್ರಾಮದ ವಿದ್ಯಾನಗರ ಕಾಲೋನಿಯಲ್ಲಿ ಲಕ್ಷ್ಮೀಕಾಂತ ರೆಡ್ಡಿ‌ ಎಂಬುವವರ ಮನೆ ಬೀಗ ಮುರಿದು ಚಿನ್ನಾಭರಣ, ನಗದು ಕಳವು ಮಾಡಿರುವಂತಹ ಘಟನೆ ನಡೆದಿದೆ. ಮನೆಯಲ್ಲಿದ್ದ 90 ಗ್ರಾಂ ಚಿನ್ನಾಭರಣ, 2 ಲಕ್ಷ ನಗದು ಕಳ್ಳರು ದೋಚಿದ್ದಾರೆ.

ಇದನ್ನೂ ಓದಿ: ಚೆಕ್​ಬೌನ್ಸ್​ ಪ್ರಕರಣ: ಕೋರ್ಟ್​ ಆದೇಶವನ್ನೇ ಧಿಕ್ಕರಿಸಿದ ಆರೋಪಿ ಜೈಲು ಪಾಲು

ಜಾತ್ರೆ ಹಿನ್ನೆಲೆ ಮನೆಗೆ ಬೀಗ ಹಾಕಿ ಕುಟುಂಬ ಸಮೇತ ಬೇರೆ ಊರಿಗೆ ಲಕ್ಷ್ಮೀಕಾಂತ ರೆಡ್ಡಿ ಹೋಗಿದ್ದರು. ರಾತ್ರಿ ವೇಳೆ ಮನೆಯಲ್ಲಿ ಯಾರೂ ಇಲ್ಲದನ್ನು ಗಮನಿಸಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್