Kalaburagi News: ಫಾದರ್ಸ್ ಡೇ ದಿನವೇ ಇಬ್ಬರು ಮಕ್ಕಳನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿದ ತಂದೆ

|

Updated on: Jun 18, 2023 | 6:57 PM

ಕೌಟುಂಬಿಕ ಕಲಹ ಶಂಕೆ ಹಿನ್ನೆಲೆ ಮಕ್ಕಳಿಬ್ಬರನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿ ತಂದೆ ಆತ್ಮಹತ್ಯೆ ಮಾಡಿಕೊಂಡಿರುವಂತಹ ದಾರುಣ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.

Kalaburagi News: ಫಾದರ್ಸ್ ಡೇ ದಿನವೇ ಇಬ್ಬರು ಮಕ್ಕಳನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿದ ತಂದೆ
ಹಣಮಂತ(36), ಅಕ್ಷತಾ(6), ಓಂಕಾರ(9) ಮೃತ ದುರ್ದೈವಿಗಳು
Follow us on

ಕಲಬುರಗಿ: ಇಂದು ವಿಶ್ವ ಅಪ್ಪಂದಿರ ದಿನಾಚರಣೆ (Father’s Day). ಮಕ್ಕಳು ತಮ್ಮ ತಂದೆ ಬಗೆಬಗೆಯ ಉಡುಗೊರೆಗಳನ್ನು ನೀಡುವ ಮೂಲಕ ಶುಭಕೋರುತ್ತಿದ್ದಾರೆ. ಪ್ರೀತಿ, ತ್ಯಾಗ ಸ್ಮರಿಸುವ ಈ ದಿನದಂದೇ ಮಕ್ಕಳಿಬ್ಬರನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿ ಓರ್ವ ತಂದೆ ಆತ್ಮಹತ್ಯೆ ಮಾಡಿಕೊಂಡಿರುವಂತಹ ದಾರುಣ ಘಟನೆ ಜಿಲ್ಲೆಯ ಚಿಂಚೋಳಿ ತಾಲೂಕಿನ ಪೋಚಾವರಂನಲ್ಲಿ ನಡೆದಿದೆ. ತಂದೆ ಹಣಮಂತ(36), ಮಗಳು ಅಕ್ಷತಾ(6), ಮಗ ಓಂಕಾರ(9) ಮೃತ ದುರ್ದೈವಿಗಳು. ಮೃತ ಹಣಮಂತ ಹೈದರಾಬಾದ್​​ನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು. ಜೂನ್ 16ರಂದು ಪತ್ನಿ ಬಿಟ್ಟು ಸ್ವಗ್ರಾಮಕ್ಕೆ ಬಂದಿದ್ದರು. ಕೌಟುಂಬಿಕ ಕಲಹ ಹಿನ್ನೆಲೆ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕುಂಚಾವರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್ ಡಿಕ್ಕಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬಸ್: 40ಕ್ಕೂ ಹೆಚ್ಚು ಪ್ರಯಾಣಿಕರು ಸುರಕ್ಷಿತ

ಕೋಲಾರ: ಬೈಕ್ ಡಿಕ್ಕಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿ ಹೊಡೆದಿದ್ದು, ಭಾರಿ ಅನಾಹುತ ತಪ್ಪಿರುವಂತಹ ಘಟನೆ ಕೋಲಾರ ತಾಲೂಕಿನ ಭಟ್ರಹಳ್ಳಿ ಗ್ರಾಮದ ಬಳಿ ನಡೆದಿದೆ. ಅದೃಷ್ಟವಶಾತ್ ಬಸ್​ನಲ್ಲಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ. ಇದೇ ವೇಳೆ ಓವರ್​​ಟೇಕ್​ ಮಾಡುವಾಗ ಬಸ್​ಗೆ  ಬೈಕ್ ಡಿಕ್ಕಿ ಹೊಡೆದಿದೆ.

ಇದನ್ನೂ ಓದಿ: Bengaluru News: ದರೋಡೆಗೆ ಸಂಚು ರೂಪಿಸಿದ್ದ ರೌಡಿಶೀಟರ್​ನ ಐವರು ಸಹಚರರ ಸೆರೆ

ಬೈಕ್​ನಲ್ಲಿದ್ದ ಓರ್ವ ಯುವಕ, ಇಬ್ಬರು ಯುವತಿಯರಿಗೆ ಗಂಭೀರ ಗಾಯಗಳಾಗಿವೆ. ಬೇತಮಂಗಲ ಕಡೆಯಿಂದ ಬೈಕ್​​ನಲ್ಲಿ ಕೋಲಾರಕ್ಕೆ ಮೂವರು ಹೊರಟಿದ್ದರು ಎನ್ನಲಾಗಿದೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಈಜಲು ತೆರಳಿದ್ದ ಯುವಕ ನೀರು ಪಾಲು: ಮೃತದೇಹ ಪತ್ತೆಗೆ ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ

ತುಂಗಾ ನದಿಯಲ್ಲಿ ಮುಳುಗಿ ಇಬ್ಬರು ಉಪನ್ಯಾಸಕರು ಸಾವು

ಶಿವಮೊಗ್ಗ: ಪ್ರವಾಸಕ್ಕೆ ಬಂದಿದ್ದ ಇಬ್ಬರು ಉಪನ್ಯಾಸಕರು ತುಂಗಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವಂತಹ ಘಟನೆ ತೀರ್ಥಹಳ್ಳಿ ತಾಲೂಕಿನ ತೀರ್ಥಮುತ್ತೂರು ಮಠದ ಬಳಿ ನಡೆದಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆ ಕಾಲೇಜಿನ ಉಪನ್ಯಾಸಕರಾದ ಪುನೀತ್(38), ಬಾಲಾಜಿ(36) ಮೃತರು. ತುಂಗಾ ನದಿಗೆ ಈಜಲು ಹೋಗಿದ್ದಾಗ ಅವಘಡ ಸಂಭವಿಸಿದೆ. ತೀರ್ಥಹಳ್ಳಿಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:47 pm, Sun, 18 June 23