ಕಲಬುರಗಿ: 13 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ತಂದೆಯಿಂದಲೇ ಅತ್ಯಾಚಾರ

ಸ್ವತಃ ತಂದೆಯೇ 13 ವರ್ಷದ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಇದಾದ ಕೆಲ ದಿನಗಳ ಬಳಿಕ ಬಾಲಕಿಗೆ ವಾಂತಿಯಾಗಿ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದೆ.

ಕಲಬುರಗಿ: 13 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ತಂದೆಯಿಂದಲೇ ಅತ್ಯಾಚಾರ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on:Feb 01, 2023 | 8:25 AM

ಕಲಬುರಗಿ: 13 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ತಂದೆಯಿಂದಲೇ ಅತ್ಯಾಚಾರ ನಡೆದಿರುವ ಘಟನೆ ಕಲಬುರಗಿ ಜಿಲ್ಲೆ ಜೇವರ್ಗಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಾಲಕಿ 2 ತಿಂಗಳ ಗರ್ಭಿಣಿಯಾದ ಮೇಲೆ ಘಟನೆ ಬೆಳಕಿಗೆ ಬಂದಿದೆ. ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮನೆಯಲ್ಲಿ ಹೆಂಡತಿ ಇಲ್ಲದ ಸಮಯ ನೋಡಿಕೊಂಡು ಸ್ವತಃ ತಂದೆಯೇ 13 ವರ್ಷದ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಇದಾದ ಕೆಲ ದಿನಗಳ ಬಳಿಕ ಬಾಲಕಿಗೆ ವಾಂತಿಯಾಗಿ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದೆ. ಇದರಿಂದ ಚಿಂತೆಗೀಡಾದ ಕುಟುಂಬಸ್ಥರು ನಿನ್ನೆ ಆಸ್ಪತ್ರೆಯಲ್ಲಿ ಬಾಲಕಿ ತಪಾಸಣೆ ಮಾಡಿಸಿದ್ದಾರೆ. ಈ ವೇಳೆ ಸತ್ಯ ಬಯಲಾಗಿದೆ. ಬಳಿಕ ಬಾಲಕಿ ತಂದೆಯಿಂದಲೇ ಅತ್ಯಾಚಾರಕ್ಕೊಳಗಾಗಿದ್ದ ವಿಷಯ ಹೇಳಿದ್ದಾಳೆ. ಘಟನೆ ಸಂಬಂಧ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಬಾಲಕಿಯ ತಂದೆ ನಾಪತ್ತೆಯಾಗಿದ್ದು ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಕೆಳ ಮನೆ ಆಂಟಿ ಜೊತೆ ಅಂಕಲ್ ಎಸ್ಕೇಪ್ ಕೇಸ್; ಇತ್ತ ಠಾಣೆಯಲ್ಲಿ ನವೀದ್ ಪ್ರತ್ಯಕ್ಷ, ಅತ್ತ ಗಂಡನಿಗೆ ಡಿವೋರ್ಸ್ ಕಳಿಸಿದ ಪತ್ನಿ

ವಿಚ್ಛೇದಿತ ಪತಿಯನ್ನು ಹತ್ಯೆಗೈಯಲು ಮಾಜಿ ಪತ್ನಿ ಸುಪಾರಿ ನೀಡಿದ ಆರೋಪ, ದೂರು ದಾಖಲು

ಬೆಂಗಳೂರು: ವಿಚ್ಛೇದಿತ ಪತಿಯನ್ನ ಅಪಹರಿಸಿ ಹತ್ಯೆ ಮಾಡಲು ಸುಪಾರಿ ನೀಡಿದ್ದಾಳೆ ಎಂದು ಆರೋಪಿಸಿ ಮಾಜಿ ಪತ್ನಿಯ ಮೇಲೆ ಬೆಂಗಳೂರಿನ ಆರ್.ಟಿ.ನಗರ ಠಾಣೆಗೆ ವಿಚ್ಛೇದಿತ ಪತಿ ಪ್ರವೀಣ್​ ದೂರು ನೀಡಿರುವ ಘಟನೆ ನಡೆದಿದೆ. ಪ್ರವೀಣ್​ ಮಾಜಿ ಪತ್ನಿ ಸಂಧ್ಯಾ, ತಂದೆ ಸೇರಿದಂತೆ 8 ಜನರ ವಿರುದ್ಧ FIR ಹಾಕಲಾಗಿದ್ದು, ಮನ್ಸೂರ್ ಅಲಿಯಾಸ್ ದೂನ್​ ಎಂಬಾತನಿಗೆ10 ಲಕ್ಷ ರೂಪಾಯಿಗೆ ಸುಪಾರಿ ನೀಡಿದ್ದಾರೆ. ಒಂದು ದಿನ ಕಾರಿನಲ್ಲಿ ಬೆಂಗಳೂರು, ಚನ್ನಪಟ್ಟಣದಲ್ಲಿ ಸುತ್ತಾಡಿಸಿ ಐದಾರು ಜನರು ಸೇರಿ ಪ್ರವೀಣ್​ ಮೇಲೆ ಹಲ್ಲೆ ಮಾಡಿದ್ದು, ನಿಮ್ಮ ಮಾಜಿ ಪತ್ನಿ 10 ಲಕ್ಷಕ್ಕೆ ನಿನಗೆ ಸುಪಾರಿ ನೀಡಿದ್ದಾರೆ, ನೀನು 15 ಲಕ್ಷ ನೀಡಿದರೆ ನಿಮ್ಮನ್ನು ಬಿಡುತ್ತೇವೆಂದು ಹೇಳಿ 2.75 ಲಕ್ಷ ರೂ ಪಡೆದು ಬಿಡುಗಡೆ ಮಾಡಿದ್ದಾರೆ ಎಂದು ಪ್ರವೀಣ್​ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:25 am, Wed, 1 February 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ