ಕೆಇಎ ಪರೀಕ್ಷೆ ಅಕ್ರಮದ ಕಿಂಗ್ಪಿನ್ RD ಪಾಟೀಲ್ನ ಅರೆಸ್ಟ್ ಮಾಡುವಲ್ಲಿ ನಿರ್ಲಕ್ಷ್ಯ: ಸಿಪಿಐ ಸಸ್ಪೆಂಡ್
ಕೆಇಎ ನಡೆಸಿದ ಎಫ್ಡಿಎ ನೇಮಕಾತಿ ಪರೀಕ್ಷಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಪ್ರಮುಖ ಆರೋಪಿ ಆರ್ಡಿ ಪಾಟೀಲ್ನನ್ನು ಬಂಧಿಸುವಲ್ಲಿ ಪೊಲೀಸರು ನಿರ್ಲಕ್ಷ್ಯ ವಹಿಸಿದರು ಎಂಬ ಆರೋಪದ ಮೇಲೆ ಅಫಜಲಪುರದ ಸಿಪಿಐ ಪಂಡಿತ ಸಗರ ಅವರನ್ನು ಅಮಾನತು ಮಾಡಲಾಗಿದೆ.
ಕಲಬುರಗಿ ನ.22: ಕೆಇಎ(KEA) ನಡೆಸಿದ ಎಫ್ಡಿಎ (FDA) ನೇಮಕಾತಿ ಪರೀಕ್ಷಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಪ್ರಮುಖ ಆರೋಪಿ ಆರ್ಡಿ ಪಾಟೀಲ್ನನ್ನು ಬಂಧಿಸುವಲ್ಲಿ ಪೊಲೀಸರು ನಿರ್ಲಕ್ಷ್ಯ ವಹಿಸಿದರು ಎಂಬ ಆರೋಪದ ಮೇಲೆ ಅಫಜಲಪುರದ ಸಿಪಿಐ ಪಂಡಿತ ಸಗರ ಅವರನ್ನು ಅಮಾನತು ಮಾಡಲಾಗಿದೆ. ನವೆಂಬರ್ 6ರಂದು ಪ್ರಕರಣದ ಪ್ರಮುಖ ಆರೋಪಿ ಆರ್.ಡಿ.ಪಾಟೀಲ್ನನ್ನು ಪೊಲೀಸರು ಬಂಧಿಸಲು ತೆರಳಿದ್ದರು. ಈ ವೇಳೆ ಆರ್ಡಿ ಪಾಟೀಲ್ ತಾನು ಇದ್ದ ವಸತಿ ಸಮುಚ್ಚಯದಿಂದ ಪರಾರಿಯಾಗಿದ್ದನು. ಹೀಗಾಗಿ ಪೊಲೀಸರು ಸರಿಯಾದ ಪ್ಲ್ಯಾನ್ ಮಾಡದೆ ನಿರ್ಲಕ್ಷ್ಯ ವಹಿಸಿದ್ದಾರೆಂದು ಸಿಪಿಐ ಪಂಡಿತ ಸಗರ ಅವರನ್ನು ಅಮಾನತು ಮಾಡಿ ಐಜಿಪಿ ಆದೇಶ ಹೊರಡಿಸಿದ್ದಾರೆ.
ಯುವಕ ಆತ್ಮಹತ್ಯೆ ಪ್ರಕರಣ: ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು
ಮೈಸೂರು: ಯುವಕ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು ಮಾಡಿ ಎಸ್ಪಿ ಸೀಮಾ ಲಾಟ್ಕರ್ ಆದೇಶ ಹೊರಡಿಸಿದ್ದಾರೆ. ನವೆಂಬರ್ 12 ರಂದು ಬಿಳಿಗೆರೆ ಗ್ರಾಮದಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಿಳಿಗೆರೆ ಪೊಲೀಸ್ ಠಾಣೆಗೆ ಕರೆ ತರಲಾಗಿತ್ತು. ಈ ವೇಳೆ ಹೆಡ್ ಕಾನ್ಸಟೇಬಲ್ ನಂಜೇಶ್, ಕಾನ್ಸಟೇಬಲ್ ಪ್ರಸನ್ನ ಕುಮಾರ್ ಕರ್ತವ್ಯದಲ್ಲಿದ್ದರು. ಇಬ್ಬರು ಆರೋಪಿಗಳಲ್ಲಿ, ಓರ್ವ ಆರೋಪಿ ಕಿರಣ್ ಕುಮಾರ್ (22) ಪೊಲೀಸರ ವಿಚಾರಣೆಗೆ ಹೆದರಿ ಠಾಣೆಯಿಂದ ತಪ್ಪಿಸಿಕೊಂಡಿದ್ದನು. ಬಳಿಕ ತನ್ನ ಸ್ವಗ್ರಾಮಕ್ಕೆ ಹೋಗಿ ಬೆಂಕಿಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದನು.
ಈ ಸಂಬಧ ನಂಜನಗೂಡಿನ ಡಿವೈಎಸ್‌ಪಿ ಗೋವಿಂದರಾಜು ನೀಡಿದ ವರದಿ ಆಧರಿಸಿ ಬಿಳಿಗೆರೆ ಪೊಲೀಸ್ ಠಾಣೆಯ ಹೆಡ್ ಕಾನ್ಸಟೇಬಲ್ ನಂಜೇಶ್, ಕಾನ್ಸಟೇಬಲ್ ಪ್ರಸನ್ನ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:48 pm, Wed, 22 November 23