ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ನಿಂದನೆ ಆರೋಪ; ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲು

ಕಲಬುರಗಿ ಜಿಲ್ಲಾ ಘಟಕದ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ್​ ಅವರು ಕಲಬುರಗಿ ಪೊಲೀಸ್ ಆಯುಕ್ತ ಆರ್​.ಚೇತನ್​ಗೆ ದೂರು ಸಲ್ಲಿಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆರನ್ನು ಚಕ್ರವರ್ತಿ ಸೂಲಿಬೆಲೆ ಅವಾಚ್ಯ ಶಬ್ದದಿಂದ ನಿಂದಿಸಿದ್ದಾರೆ. ಸೂಲಿಬೆಲೆ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ನಿಂದನೆ ಆರೋಪ; ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲು
ಚಕ್ರವರ್ತಿ ಸೂಲಿಬೆಲೆ
Follow us
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: ಆಯೇಷಾ ಬಾನು

Updated on: Jan 20, 2024 | 10:11 AM

ಕಲಬುರಗಿ, ಜ.20: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ (Mallikarjun Kharge) ನಿಂದನೆ ಆರೋಪದ ಮೇಲೆ ನಮೋ ಬ್ರಿಗೇಡ್ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ (Chakravarti Sulibele) ವಿರುದ್ಧ ದೂರು ದಾಖಲಾಗಿದೆ. ಕಲಬುರಗಿ ಜಿಲ್ಲಾ ಘಟಕದ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ್​ ಅವರು ಕಲಬುರಗಿ ಪೊಲೀಸ್ ಆಯುಕ್ತ ಆರ್​.ಚೇತನ್​ಗೆ ದೂರು ಸಲ್ಲಿಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆರನ್ನು ಚಕ್ರವರ್ತಿ ಸೂಲಿಬೆಲೆ ಅವಾಚ್ಯ ಶಬ್ದದಿಂದ ನಿಂದಿಸಿದ್ದಾರೆ. ಸೂಲಿಬೆಲೆ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ರಾಯಚೂರಿನ ಶಿರವಾದಲ್ಲಿ ನಡೆದ ‘ನಮೋ ಭಾರತ’ ಎಂಬ ಕಾರ್ಯಕ್ರಮದಲ್ಲಿ ಚಕ್ರವರ್ತಿ ಸೂಲಿಬೆಲೆ ಅವರು ಖರ್ಗೆ ಫ್ಯಾಮಿಲಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ಕಲಬುರಗಿಯ ESI ಆಸ್ಪತ್ರೆ ನಿರ್ಮಾಣದ ವಿಚಾರವಾಗಿ ಖರ್ಗೆ ಕುಟುಂಬದ ವಿರುದ್ಧ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದರು. ಖರ್ಗೆ ಸಾಹೇಬರ ಕಾಲದಲ್ಲಿ ESI ಆಸ್ಪತ್ರೆ ನಿರ್ಮಾಣ‌ ಮಾಡಲಾಯಿತು. ಆಸ್ಪತ್ರೆ ಮೇಲ್ಭಾಗದಲ್ಲಿ ಡ್ರೋನ್ ಕ್ಯಾಮರಾದಿಂದ ನೋಡಿದರೆ ಈ ಚಿತ್ರ ಕಾಣುತ್ತದೆ. ಮೊದಲ ಅಕ್ಷರ ಖ, ಎರಡನೇ ಅಕ್ಷರ ಗೆ, ಆ ಮೇಲೆ ಅರ್ಧ ಅಕ್ಷರ ಖರ್ಗೆ ಅಂತಾ. ಅವರು ಕಟ್ಟಿದ ಬಿಲ್ಡಿಂಗ್ ಮೇಲೆ ಖರ್ಗೆ ಅಂತಾ ಕಾಣಬೇಕು. ಕಟ್ಟಡ ಇರೋವರೆಗೆ ಅವರ ಹೆಸರು ಉಳಿಬೇಕು ಅಂತಾ ಈ ರೀತಿ ಮಾಡಲಾಗಿದೆ. ಇದು ಅವರ ಸ್ವಂತ ದುಡ್ಡಲ್ಲ, ಪಾರ್ಟಿ ದುಡ್ಡಲ್ಲ ಜನರ ತೆರಿಗೆ ದುಡ್ಡಲ್ಲಿ ತಮ್ಮ ಹೆಸರು ಶಾಶ್ವತಗೊಳಿಸುವಂತ ಅಯೋಗ್ಯರಿದ್ದಾರೆ ಎಂದು ಕಿಡಿಕಾರಿದ್ದರು. ಸದ್ಯ ಈ ಸಂಬಂದ ದೂರು ದಾಖಲಾಗಿದೆ.

ಇದನ್ನೂ ಓದಿ: ಪ್ರಿಯಾಂಕ ಖರ್ಗೆಯವರ ಪುಸ್ತಕ ಪ್ರೀತಿ ಅಭಿನಂದನಾರ್ಹವಾದುದು, ಇದೊಂದು ಮಾದರಿ ನಡೆ

ಸೂಲಿಬೆಲೆ ಗಡಿಪಾರಿಗೆ ಕಾಂಗ್ರೆಸ್ ಆಗ್ರಹ

ಮತ್ತೊಂದೆಡೆ ಚಕ್ರವರ್ತಿ ಸೂಲಿಬೆಲೆ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿ ಗಡಿಪಾರು ಮಾಡಲು ಆಗ್ರಹಿಸಿದೆ.

ಅಯೋಗ್ಯ ಎನ್ನುವ ಸಮಾಜದ ಕೊಳಕು ಕ್ರಿಮಿಯೊಂದು ಎಐಸಿಸಿ ಅಧ್ಯಕ್ಷರಾದ ಖರ್ಗೆ ಅವರ ಬಗ್ಗೆ ಹಗುರವಾಗಿ ಮಾತನಾಡಿರುವುದು ಖಂಡನೀಯ. ಬಾಡಿಗೆ ಭಾಷಣ ಮಾಡಿಕೊಂಡು ಬದುಕುವ ಪರಾವಲಂಬಿ ಜೀವಿಗಳಿಗೆ ಶೋಷಿತ ಸಮುದಾಯದ ನಾಯಕರೊಬ್ಬರು ಅತ್ಯುನ್ನತ ಸ್ಥಾನಕ್ಕೆ ಏರುವುದನ್ನು ಸಹಿಸಲು ಸಾಧ್ಯವಾಗುತ್ತಿಲ್ಲ ಎನ್ನುವುದು ಇದರಿಂದ ಸ್ಪಷ್ಟವಾಗುತ್ತದೆ. ಸುಳ್ಳುಗಳನ್ನು ಹಬ್ಬಿಸುತ್ತಾ ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿರುವ ಇಂತಹ ಕ್ರಿಮಿಗಳನ್ನು ಗಡಿಪಾರು ಮಾಡಲು ಕ್ರಮ ಕೈಗೊಳ್ಳಬೇಕೆಂದು ಗೃಹಸಚಿವರಿಗೆ ಮನವಿ ಮಾಡುತ್ತೇವೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ