Kalaburagi Railway Station: ಕಲಬುರಗಿ ರೈಲ್ವೆ ನಿಲ್ದಾಣದಲ್ಲಿ ಅಗ್ನಿ ಅವಘಡ!

Fire In kalaburagi Railway Station: ಕಲಬುರಗಿ ರೈಲ್ವೇ ನಿಲ್ದಾಣದಲ್ಲಿ ಅಗ್ನಿ ಅವಘಡ ಸಂಭವಿಸಿದೆ. 

Kalaburagi Railway Station: ಕಲಬುರಗಿ ರೈಲ್ವೆ ನಿಲ್ದಾಣದಲ್ಲಿ ಅಗ್ನಿ ಅವಘಡ!
Edited By:

Updated on: Dec 12, 2023 | 8:35 PM

ಕಲಬುರಗಿ, (ಡಿಸೆಂಬರ್ 12): ಕಲಬುರಗಿ ರೈಲ್ವೇ ನಿಲ್ದಾಣದಲ್ಲಿ (kalaburagi railway station) ಅಗ್ನಿ(Fire)  ಅವಘಡ ಸಂಭವಿಸಿದೆ.  ರೈಲ್ವೆ ಪ್ಲಾಟ್ ಫಾರಂ ನಲ್ಲಿರುವ ಅಮುಲ್ ಸ್ಟಾಲ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಂಗಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ಮಾಹಿತಿ ತಿಳಿದು ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕ ದಳ, ಬೆಂಕಿ ನಂದಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಅಂಗಡಿಯಲ್ಲಿ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದುಬಂದಿದ್ದು, ಈ ಬಗ್ಗೆ ವಾಡಿ ರೈಲ್ವೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.