ಕಲಬುರಗಿ: ಮರಕ್ಕೆ ಕಾರು ಡಿಕ್ಕಿ; ಸ್ಥಳದಲ್ಲೇ ಐವರ ದುರ್ಮರಣ

ಮೃತರು ಮಹಾರಾಷ್ಟ್ರ ಅಹ್ಮದನಗರದ ನಿವಾಸಿಗಳು. ಚಾಲಕ ನಿದ್ರೆ ಮಂಪರಿನಲ್ಲಿದ್ದರಿಂದ ಅಪಘಾತವಾಗಿರುವ ಶಂಕೆ ವ್ಯಕ್ತವಾಗಿದೆ. ಅಫಜಲಪುರ ಪೊಲೀಸ್​ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಕಲಬುರಗಿ: ಮರಕ್ಕೆ ಕಾರು ಡಿಕ್ಕಿ; ಸ್ಥಳದಲ್ಲೇ ಐವರ ದುರ್ಮರಣ
ಮರಕ್ಕೆ ಕಾರು ಡಿಕ್ಕಿ
Follow us
TV9 Web
| Updated By: preethi shettigar

Updated on:Mar 11, 2022 | 5:57 PM

ಕಲಬುರಗಿ: ಮರಕ್ಕೆ ಕಾರು(Car) ಡಿಕ್ಕಿಯಾಗಿ ಸ್ಥಳದಲ್ಲೇ ಐವರು ಸಾವನ್ನಪ್ಪಿದೆ ಘಟನೆ ಕಲಬುರಗಿ ಜಿಲ್ಲೆ ಅಫಜಲಪುರ ಹೊರವಲಯದಲ್ಲಿ ನಡೆದಿದೆ. ಕಾರಿನಲ್ಲಿದ್ದ ಚಾಲಕ ಹಾಗೂ ನಾಲ್ವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಗಾಣಗಾಪುರ ದತ್ತಾತ್ರೇಯ ದೇಗುಲದಿಂದ ವಾಪಸಾಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಅಫಜಲಪುರದಿಂದ ಮಹಾರಾಷ್ಟ್ರ ಕಡೆಗೆ ಹೊರಟಿದ್ದ ಕಾರು ಮರಕ್ಕೆ( Tree) ಡಿಕ್ಕಿ ಹೊಡೆದಿದೆ. ಮೃತರು ಮಹಾರಾಷ್ಟ್ರ ಅಹ್ಮದನಗರದ ನಿವಾಸಿಗಳು. ಚಾಲಕ ನಿದ್ರೆ ಮಂಪರಿನಲ್ಲಿದ್ದರಿಂದ ಅಪಘಾತವಾಗಿರುವ( Accident) ಶಂಕೆ ವ್ಯಕ್ತವಾಗಿದೆ. ಅಫಜಲಪುರ ಪೊಲೀಸ್​ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಕೊಪ್ಪಳ: ಟ್ರ್ಯಾಕ್ಟರ್ ಪಲ್ಟಿಯಾಗಿ ನಾಲ್ವರು ಸಾವು ಪ್ರಕರಣ; ಗಂಗಾವತಿ ಉಪವಿಭಾಗ ಆಸ್ಪತ್ರೆಗೆ ಕನಕಗಿರಿ ಶಾಸಕ ಭೇಟಿ

ಕೊಪ್ಪಳ ಜಿಲ್ಲೆ ನವಲಿ ರೈಸ್ ಪಾರ್ಕ್ ಬಳಿ ಟ್ರ್ಯಾಕ್ಟರ್ ಪಲ್ಟಿಯಾಗಿ ನಾಲ್ವರು ಮೃತಪಟ್ಟಿದ್ದರು. ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಹೋಗೋ ವೇಳೆ ಟ್ರ್ಯಾಕ್ಟರ್ ಪಲ್ಟಿಯಾಗಿತ್ತು. ಅಪಘಾತದಲ್ಲಿ 10 ಕ್ಕೂ ಹೆಚ್ಚು ಜನರಿಗೆ ಗಾಯ‌‌ವಾಗಿದೆ. ಗಂಗಾವತಿ ಉಪವಿಭಾಗ ಆಸ್ಪತ್ರೆಯಲ್ಲಿ ಸದ್ಯ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಾಳುಗಳ ಆರೋಗ್ಯ ವಿಚಾರಿಸಲು ಇಂದು ಕನಕಗಿರಿ ಶಾಸಕ ಬಸವರಾಜ್ ದಡೇಸಗೂರು ಭೇಟಿಯಾಗಿದ್ದಾರೆ. ಮೃತರ ಕುಟುಂಬಕ್ಕೆ ಪರಿಹಾರ ನೀಡಲು ಚಿಂತನೆ ನಡೆಸಿದ್ದು, ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿ ಪರಿಹಾರ ಕೊಡೋದಾಗಿ ಭರವಸೆ ನೀಡಿದ್ದಾರೆ.

ಅನುಮಾನಾಸ್ಪದ ರೀತಿಯಲ್ಲಿ 7 ನವಿಲುಗಳು ಸಾವು; ತೋಟದ ಬೆಳೆ ತಿನ್ನಲು ಬಂದಾಗ ವಿಷ ಇಟ್ಟಿರುವ ಶಂಕೆ

ಚಿಕ್ಕಬಳ್ಳಾಪುರ: ಅನುಮಾನಾಸ್ಪದ ರೀತಿಯಲ್ಲಿ 7 ನವಿಲುಗಳು ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬೈರಗಾನಹಳ್ಳಿ ಬಳಿ ನಡೆದಿದೆ. ಗ್ರಾಮದ ಸರ್ವೆ ನಂಬರ್ ಜಮೀನಿನಲ್ಲಿ ನವಿಲುಗಳು ಮೃತಪಟ್ಟಿವೆ. ತೋಟದ ಬೆಳೆ ತಿನ್ನಲು ಬಂದಾಗ ವಿಷ ಇಟ್ಟು 7 ನವಿಲುಗಳನ್ನು ಕೊಂದಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಸ್ಥಳಕ್ಕೆ ಶಿಡ್ಲಘಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಕೇಸ್‌ ದಾಖಲಿಸಿಕೊಂಡ ಅರಣ್ಯ ಇಲಾಖೆ ಅಧಿಕಾರಿಗಳು ಈ ಬಗ್ಗೆ ತನಿಖೆಗೆ ಮುಂದಾಗಿದ್ದಾರೆ.

ಅಪರಿಚಿತ ವಾಹನ ಹರಿದು ಎರಡು ವರ್ಷದ ಚಿರತೆ ದಾರುಣ ಸಾವು

ಚಿಕ್ಕಬಳ್ಳಾಪುರ ತಾಲೂಕಿನ ಬಂಡಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 44ರ ಬಳಿ ಚಿರತೆ ರಸ್ತೆ ದಾಟುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಎರಡು ವರ್ಷದ ಹೆಣ್ಣು ಚಿರತೆ ಮೃತಪಟ್ಟಿದೆ. ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಕಾಡಿನಲ್ಲಿ ಅನ್ನ, ಆಹಾರ ಇಲ್ಲದೆ ರಸ್ತೆಗೆ ಬಂದಿದ್ದ ಚಿರತೆ ಸಾವನ್ನಪ್ಪಿದೆ. ಚಿರತೆ ಮೃತಪಟ್ಟ ಜಾಗದಲ್ಲಿ ಹಲವಾರು ಕಾಡು ಪ್ರಾಣಿಗಳು ಸಾವನಪ್ಪಿವೆ. ಕಳೆದ ಎರಡು ವರ್ಷದಲ್ಲಿ 6 ಕಾಡು ಪ್ರಾಣಿಗಳು ಸಾವನ್ನಪ್ಪಿವೆ.

ಒಂದು ಕಡೆಯಿಂದ ಇನ್ನೊಂದು ಕಡೆ ಸಂಚರಿಸುವ ಕಾಡು ಪ್ರಾಣಿಗಳು ಸಾವನ್ನಪ್ಪುತ್ತವೆ. ಈಗಾಗಲೇ ಇದೇ ಜಾಗದಲ್ಲಿ ಜಿಂಕೆ, ಸಾರಂಗ, ಕರಡಿ ಹಾಗೂ ಚಿರತೆ ಮೃತಪಟ್ಟಿವೆ. ಹೀಗಾಗಿ ಅರಣ್ಯದಲ್ಲಿ ರಾಷ್ಟ್ರೀಯ ಹೆದ್ದಾರಿ 44 ಹಾದು ಹೋಗಿದ್ದು, ಹೆದ್ದಾರಿಗೆ ಅಂಡರ್ ಪಾಸ್ ಮಾಡಿಕೊಡುವಂತೆ ಅರಸಲನ್ ಚಿಕ್ಕಬಳ್ಳಾಪುರ ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಹೆದ್ದಾರಿ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: Dabaspet: ದಾಬಸ್ ​ಪೇಟೆ ಬಳಿ ಭೀಕರ ರಸ್ತೆ ಅಪಘಾತ: ಲಾರಿಗೆ ಹಿಂದಿನಿಂದ ಬೈಕ್ ಡಿಕ್ಕಿ, ತಂದೆ-ಮಗಳು ಸಾವು

ಅನುಮಾನಾಸ್ಪದ ರೀತಿಯಲ್ಲಿ 7 ನವಿಲುಗಳು ಸಾವು; ತೋಟದ ಬೆಳೆ ತಿನ್ನಲು ಬಂದಾಗ ವಿಷ ಇಟ್ಟಿರುವ ಶಂಕೆ

Published On - 5:16 pm, Fri, 11 March 22

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?