ಅಫಜಲಪುರ-ಕಲಬುರಗಿ ಹೆದ್ದಾರಿಯಲ್ಲಿ ಭೀಕರ ಅಪಘಾತ: ನಾಲ್ವರು ಸ್ಥಳದಲ್ಲೇ ಸಾವು

| Updated By: Rakesh Nayak Manchi

Updated on: Dec 21, 2023 | 7:40 AM

ಕಲಬುಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಹೊರವಲಯದ ನೀರಾವರಿ ಕಚೇರಿ ಬಳಿ ಘಟನೆ ಭೀಕರ ಅಪಘಾತ ಸಂಭವಿಸಿದೆ. ತಡರಾತ್ರಿ ಸಂಭವಿಸಿದ ಈ ಅಪಘಾತದಲ್ಲಿ ಮಾಡ್ಯಾಳ ಗ್ರಾಮದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಲಬುರಗಿ ಕಡೆಯಿಂದ ಹೊರಟಿದ್ದ ಲಾರಿಗೆ ಜೀಪು ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ.

ಅಫಜಲಪುರ-ಕಲಬುರಗಿ ಹೆದ್ದಾರಿಯಲ್ಲಿ ಭೀಕರ ಅಪಘಾತ: ನಾಲ್ವರು ಸ್ಥಳದಲ್ಲೇ ಸಾವು
ಅಫಜಲಪುರ-ಕಲಬುರಗಿ ಹೆದ್ದಾರಿಯಲ್ಲಿ ಭೀಕರ ಅಪಘಾತಕ್ಕೆ ಐವರು ಸಾವು
Follow us on

ಕಲಬುರಗಿ, ಡಿ.21: ಜಿಲ್ಲೆಯ (Kalaburagi) ಅಫಜಲಪುರ ತಾಲೂಕಿನ ಹೊರವಲಯದ ನೀರಾವರಿ ಕಚೇರಿ ಬಳಿ ತಡರಾತ್ರಿ ನಡೆದ ಭೀಕರ ಅಪಘಾತದಲ್ಲಿ (Accident) ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಲಬುರಗಿ ಕಡೆಯಿಂದ ಹೊರಟಿದ್ದ ಲಾರಿಗೆ ಜೀಪು ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ.

ಸಂತೋಷ್ (40), ಶಂಕರ್ (55), ಸಿದ್ದಮ್ಮ (50), ಹುಚ್ಚಪ್ಪ (5) ಮೃತ ದುರ್ದೈವಿಗಳಾಗಿದ್ದಾರೆ. ಮೃತರೆಲ್ಲಾರು ಅಫಜಲಪುರ ಮಾಡ್ಯಾಳ ಗ್ರಾಮದ ನಿವಾಸಿಗಳಾಗಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಪೂಜಾ ದೊಡ್ಡಮನಿ (30) ಪ್ರಾಣಾಪಾಯದಿಂದ ಪಾರಾಗಿದ್ದು, ಲಬುರಗಿ ಖಸಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.  ಅಫಜಲಪುರ ಕಡೆಯಿಂದ ಮಲ್ಲಾಬಾದ್ ಕಡೆ ಹೊರಟಿದ್ದ ಕಮಾಂಡೋ‌ ಜೀಪ್ ಕಲಬುರಗಿ ಕಡೆಯಿಂದ ಹೊರಟಿದ್ದ ಲಾರಿಗೆ ಡಿಕ್ಕಿ ಹೊಡೆದು ಜೀಪ್​ನಲ್ಲಿದ್ದ ಎಲ್ಲರೂ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಕಲಬುರಗಿಯಲ್ಲಿ ಅಪರಿಚಿತ ಬೈಕ್​ ಡಿಕ್ಕಿ: ಕಾಂಗ್ರೆಸ್ ಎಂಎಲ್​ಸಿ ತಾಯಿ ಸಾವು

ಸಾವಿನಲ್ಲೂ ಒಂದಾದ ಗೆಳೆಯರು

ಮೈಸೂರು: ಜಿಲ್ಲೆಯ ನಂಜನಗೂಡು ತಾಲೂಕಿ‌ನ ಮಲ್ಲೂಪುರ ಗ್ರಾಮದ ಬಳಿ ಲಾರಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಸ್ನೇಹಿತರಿಬ್ಬರು ಸಾವನ್ನಪ್ಪಿದ್ದಾರೆ. ಮಹೇಶ (23) ಹಾಗೂ ಮಹೇಶ (24) ಮೃತ ದುರ್ದೈವಿಗಳು. ಬಾಲ್ಯದ ಗೆಳೆಯರಾಗಿದ್ದ ಇಬ್ಬರು ಅಳಗಂಚಿ ಗ್ರಾಮದ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯಲ್ಲಿ ಕಾರ್ಮಿಕರಾಗಿ ಕೆಲಸಕ್ಕೆ ಸೇರಿದ್ದರು.

ನಿನ್ನೆ ಬೆಳಗ್ಗೆ ಕಾರ್ಖಾನೆಗೆ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ತಗಡೂರು ಗ್ರಾಮದ ಶಿವಮಲ್ಲೇಗೌಡ ಎಂಬುವರ ಪುತ್ರ ಮಹೇಶ್, ಅದೇ ಗ್ರಾಮದ ನಾಗರಾಜು ಎಂಬುವವರ ಪುತ್ರ ಮಹೇಶ್ ಸಾವನ್ನಪ್ಪಿದ್ದಾರೆ. ಘಟನೆ ನಂತರ ಲಾರಿ‌ ಬಿಟ್ಟು ಚಾಲಕ ಪರಾರಿಯಾಗಿದ್ದು, ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:30 am, Thu, 21 December 23