ಕಲಬುರಗಿ: ಮಿಸ್ಬಾನಗರದಲ್ಲಿ ಐದು ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ!

ಕಲಬುರಗಿಯ ಮಿಸ್ಬಾನಗರದಲ್ಲಿ ಬಾಲಕನೊಬ್ಬನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ ಘಟನೆ ನಡೆದಿದೆ. ಇದು ಒಂದು ವಾರದಲ್ಲಿ ನಡೆದ ಎಡರನೇ ಪ್ರಕರಣ ಆಗಿದ್ದು, ಅಧಿಕಾರಿಗಳು ಮಾತ್ರ ಇನ್ನೂ ಎಚ್ಚೆತ್ತುಕೊಂಡಿಲ್ಲ. ಸ್ಥಳೀಯರು ನಗರ ಪಾಲಿಕೆ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.

ಕಲಬುರಗಿ: ಮಿಸ್ಬಾನಗರದಲ್ಲಿ ಐದು ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ!
ಕಲಬುರಗಿಯ ಮಿಸ್ಬಾನಗರದಲ್ಲಿ ಐದು ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ! (ಸಾಂದರ್ಭಿಕ ಚಿತ್ರ)
Edited By:

Updated on: Jan 07, 2024 | 10:51 PM

ಕಲಬುರಗಿ, ಜ.7: ಬಾಲಕನೊಬ್ಬನ ಮೇಲೆ ಬೀದಿ ನಾಯಿಗಳು ದಾಳಿ (Dog Attack) ನಡೆಸಿ ಗಾಯಗೊಳಿಸಿದ ಘಟನೆ ಕಲಬುರಗಿಯ (Kalaburagi) ಮಿಸ್ಬಾನಗರದಲ್ಲಿ ನಡೆದಿದೆ. ರಶೀದ್ ಅಶ್ಫಕ್ (5) ಗಾಯಗೊಂಡ ಬಾಲಕನಾಗಿದ್ದು, ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಹಾಲು ತರುವಂತೆ ರಶೀದ್ ಅಶ್ಫಕ್​ನನ್ನು ಪೋಷಕರು ಅಂಗಡಿಗೆ ಕಳುಹಿಸಿದ್ದರು. ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಬೀದಿನಾಯಿಗಳು ಏಕಾಏಕಿಯಾಗಿ ರಶೀದ್ ಮೇಲೆ ದಾಳಿ ನಡೆಸಿ ಗಾಯಗೊಳಿಸಿವೆ. ಕಳೆದ ವಾರ ಬಾಲಕಿಯ ಮೇಲೆ ಬೀದಿ ನಾಯಿಗಳ ದಾಳಿ ನಡೆದಿತ್ತು. ವಾರದಲ್ಲಿ ಎರಡು ಪ್ರಕರಣಗಳು ನಡೆದಿದ್ದರೂ ನಗರ ಪಾಲಿಕೆ ಅಧಿಕಾರಿಗಳು ಇನ್ನೂ ಎಚ್ಚೆತ್ತುಕೊಂಡಿಲ್ಲ ಎಂದು ಮಿಸ್ಬಾನಗರ ನಿವಾಸಿಗಳು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ರಾಯಚೂರು: ತಾಯಿ, ಮಗನ ಮೇಲೆ ಬೀದಿ ನಾಯಿ ದಾಳಿ; ಭಯ ಹುಟ್ಟಿಸುತ್ತೆ ಸಿಸಿಟಿವಿ ದೃಶ್ಯ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ