ಅಂಬೇಡ್ಕರ್ ಮೂರ್ತಿಗೆ ಅಪಮಾನ ಪ್ರಕರಣ; ಸಿಐಡಿಗೆ ನೀಡಲು ತೀರ್ಮಾನ-ಡಾ.ಜಿ ಪರಮೇಶ್ವರ

ಕಳೆದ ಜನವರಿಯಲ್ಲಿ ಕಲಬುರಗಿ ನಗರದಲ್ಲಿರುವ ಅಂಬೇಡ್ಕರ್ ಮೂರ್ತಿ(Ambedkar statue)ಗೆ ಅಪಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ಮೇಲೆ ಹೊರಬಂದಿದ್ದ ಆರೋಪಿ ಮನೆ ಮೇಲೆ 50 ರಿಂದ 60 ಜನರ ಗುಂಪೊಂದು ದಾಳಿ ಮಾಡಿತ್ತು. ಈ ಹಿನ್ನಲೆ ಈ ಪ್ರಕರಣವನ್ನು ಸಿಐಡಿಗೆ ವಹಿಸಲು ತೀರ್ಮಾನ ಮಾಡಿದ್ದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ ಅವರು ಹೇಳಿದ್ದಾರೆ.

ಅಂಬೇಡ್ಕರ್ ಮೂರ್ತಿಗೆ ಅಪಮಾನ ಪ್ರಕರಣ; ಸಿಐಡಿಗೆ ನೀಡಲು ತೀರ್ಮಾನ-ಡಾ.ಜಿ ಪರಮೇಶ್ವರ
ಅಂಬೇಡ್ಕರ್ ಮೂರ್ತಿಗೆ ಅಪಮಾನ ಪ್ರಕರಣ ಸಿಐಡಿಗೆ ವಹಿಸಲು ಜಿ ಪರಮೇಶ್ವರ ತೀರ್ಮಾನ
Edited By:

Updated on: May 02, 2024 | 4:31 PM

ಕಲಬುರಗಿ, ಮೇ.02: ಅಂಬೇಡ್ಕರ್ ಮೂರ್ತಿ(Ambedkar statue)ಗೆ ಅಪಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಜಾಮೀನಿನ ಮೇಲೆ ಹೊರಬಂದಿದ್ದನು. ಈ ಹಿನ್ನಲೆ 50 ರಿಂದ 60 ಜನರ ಗುಂಪೊಂದು ಆತನ ಮನೆ ಮೇಲೆ ದಾಳಿ ಮಾಡಿತ್ತು. ಇದೀಗ ಹಲ್ಲೆ ನಡೆದ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ ಸರ್ಕಾರ, ಸಂಪೂರ್ಣ ಸತ್ಯಾಂಶ ಹೊರಬರಬೇಕು ಎಂದು ಸಿಐಡಿಗೆ ನೀಡಲು ತೀರ್ಮಾನ ಮಾಡಿದ್ದೆವೆ. ಬಿಜೆಪಿಯವರು ಇದನ್ನ ರಾಜಕೀಯ ಅಸ್ತ್ರ ಮಾಡಿಕೊಳ್ಳೊಕೆ ಬಿಡೋದಿಲ್ಲ ಎಂದು ಕಲಬುರಗಿಯಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ ಅವರು ಹೇಳಿದ್ದಾರೆ.

ಘಟನೆ ವಿವರ

ಕಲಬುರಗಿ ನಗರದ ಹೊರವಲಯದ ಕೊಟನೂರು ಡಿ ಗ್ರಾಮದ ಬಳಿ ಕಳೆದ ಜನವರಿ 22ರ ರಾತ್ರಿ ಅಂಬೇಡ್ಕರ್ ಪ್ರತಿಮೆಗೆ ದುಷ್ಕರ್ಮಿಗಳು ಚಪ್ಪಲಿ ಹಾರ ಹಾಕಿ ಅಪಮಾನ ಮಾಡಿದ್ದರು. ಈ ಹಿನ್ನಲೆ ಆ ಭಾಗದಲ್ಲಿ ಆಕ್ರೋಶ ಭುಗಿಲೆದಿತ್ತು. ಅಂಬೇಡ್ಕರ್‌ ಪ್ರತಿಮೆಗೆ ಚಪ್ಪಲಿ ಹಾರ ಹಾಕಿದ್ದರಿಂದ ಆಕ್ರೋಶಗೊಂಡಿದ್ದ ವಿವಿಧ ದಲಿತ ಸಮುದಾಯದವರು ರಸ್ತೆ ತಡೆದು ನಗರದಲ್ಲಿ ಪ್ರತಿಭಟನೆ ನಡೆಸಿದ್ದರು.

ಇದನ್ನೂ ಓದಿ:ಕಲಬುರಗಿ: ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿದ ಆರೋಪಿ ಜೊತೆಗಿನ ಕಾಂಗ್ರೆಸ್ ಶಾಸಕನ ಫೋಟೋ ವೈರಲ್

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯ ಠಾಣೆ ಪೊಲೀಸರು ಆರೋಪಿ ಸಂಗಮೇಶ್​ನನ್ನು ಬಂಧಿಸಿದ್ದರು. ಇದೇ ಮಂಗಳವಾರ ಪ್ರತಿಮೆಗೆ ಅಪಮಾನ ಮಾಡಿದ ಆರೋಪಿ ಸಂಗಮೇಶ್‌ ಕೋರ್ಟ್‌ನಿಂದ ಜಾಮೀನು ಮಂಜೂರು ಆಗಿತ್ತು. ಜಾಮೀನಿನ‌ ಮೇಲೆ ಹೊರ ಬಂದಿದ್ದ ಸಂಗಮೇಶ್‌ ಮನೆ ಮೇಲೆ ಮಂಗಳವಾರ ರಾತ್ರಿ 12 ಗಂಟೆಗೆ ಸುಮಾರು 50 ರಿಂದ 60 ಜನರ ತಂಡವೊಂದು ದಿಢೀರ್‌ ದಾಳಿ ಮಾಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
Follow Us