ಗಣೇಶ ವಿಸರ್ಜನೆ: ಕಲಬುರಗಿಯಲ್ಲಿ ಮೂರು ದಿನ ಮದ್ಯ ಮಾರಾಟ ನಿಷೇಧ

ರಾಜ್ಯಾದ್ಯಂತ ಗಣೇಶ ಚತುರ್ಥಿ ಹಬ್ಬ ಜೋರಾಗಿಯೇ ನಡೆಯುತ್ತಿದೆ. ಕಲಬುರಗಿಯಲ್ಲಿ ಮೊನ್ನೆಯಿಂದ ಗಣೇಶೋತ್ಸವ ನಡೆಯುತ್ತಿದ್ದು, ನಾಳೆ ವಿಗ್ರಹಗಳನ್ನು ವಿಸರ್ಜನೆ ಮಾಡಲಾಗುತ್ತಿದೆ. ಹೀಗಾಗಿ ಜಿಲ್ಲಾದ್ಯಂತ ನಾಳೆಯಿಂದ ಮೂರು ದಿನಗಳ ಕಲಾ ಮದ್ಯ ಮಾರಾಟ ನಿಷೇಧ ಮಾಡಿ ಜಿಲ್ಲಾಧಿಕಾರಿ ಜಿ.ಫೌಜಿಯಾ ತರನ್ನುಮ್ ಆದೇಶ ಹೊರಡಿಸಿದ್ದಾರೆ.

ಗಣೇಶ ವಿಸರ್ಜನೆ: ಕಲಬುರಗಿಯಲ್ಲಿ ಮೂರು ದಿನ ಮದ್ಯ ಮಾರಾಟ ನಿಷೇಧ
ಗಣೇಶ ವಿಸರ್ಜನೆ ಹಿನ್ನೆಲೆ ಕಲಬುರಗಿಯಲ್ಲಿ ಮೂರು ದಿನ ಮದ್ಯ ಮಾರಾಟ ನಿಷೇಧ (ಸಾಂದರ್ಭಿಕ ಚಿತ್ರ)
Follow us
| Updated By: Rakesh Nayak Manchi

Updated on:Sep 26, 2023 | 11:01 PM

ಕಲಬುರಗಿ, ಸೆ26: ರಾಜ್ಯಾದ್ಯಂತ ಗಣೇಶ ಚತುರ್ಥಿ (Ganesha Chaturthi) ಹಬ್ಬ ಜೋರಾಗಿಯೇ ನಡೆಯುತ್ತಿದೆ. ಕಲಬುರಗಿಯಲ್ಲಿ (Kalaburagi) ಮೊನ್ನೆಯಿಂದ ಗಣೇಶೋತ್ಸವ ನಡೆಯುತ್ತಿದ್ದು, ನಾಳೆ ವಿಗ್ರಹಗಳ ಸಾಮೂಹಿಕ ವಿಸರ್ಜನೆ ಮಾಡಲಾಗುತ್ತಿದೆ. ಹೀಗಾಗಿ ಜಿಲ್ಲಾದ್ಯಂತ ನಾಳೆಯಿಂದ ಮೂರು ದಿನಗಳ ಕಲಾ ಮದ್ಯ ಮಾರಾಟ ನಿಷೇಧ ಮಾಡಿ ಜಿಲ್ಲಾಧಿಕಾರಿ ಜಿ.ಫೌಜಿಯಾ ತರನ್ನುಮ್ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ ಕಳೆದ ಒಂಬತ್ತು ಹತ್ತು ದಿನಗಳ ಅವಧಿಯವರೆಗೆ ಕೂರಿಸಿದ್ದ ಗಣೇಶ ಮೂರ್ತಿಗಳ ಸಾಮೂಹಿಕ ವಿಸರ್ಜನೆ ನಾಳೆ ನಡೆಯಲಿದೆ. ಹೀಗಾಗಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ. ಸೆ.27 ರ ಬೆಳಗ್ಗೆ 6 ರಿಂದ ಸೆ.30 ರ ಬೆಳಗ್ಗೆ 6 ರ ವರೆಗೆ ಮದ್ಯ ಮಾರಾಟ ನಿಷೇಧ ಮಾಡಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಇದನ್ನೂ ಓದಿ: ಕಲಬುರಗಿ: ಮಿಲಾದ್ ಉನ್ ನಬಿ ಅಂಗವಾಗಿ ಸೆ.27 ರಿಂದ ಇಸ್ಲಾಮಿಕ್ ಚಿತ್ರಕಲಾ ಪ್ರದರ್ಶನ

ಗಣೇಶ ಮೂರ್ತಿಗಳ ವಿಸರ್ಜನೆ ದಿನಗಳಂದ ಮದ್ಯ, ಮಾಂಸ ಮಾರಾಟ ನಿಷೇಧ ಮಾಡಲಾಗುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹಲವು ದಿನಗಳ ಕಾಲ ಗಣೇಶೋತ್ಸವ ನಡೆಯುತ್ತದೆ. ಹೀಗಾಗಿ ವಿಸರ್ಜನೆಯ ದಿನಗಳಂದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಮದ್ಯದ ಅಂಗಡಿ, ಬಾರ್ ಆ್ಯಂಡ್ ರೆಸ್ಟೋರೆಂಟ್, ವೈನ್​ ಶಾಪ್​ಗಳಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗುತ್ತದೆ.

ಸೆಪ್ಟೆಂಬರ್ 21ರಿಂದ 22 ಬೆಳಗ್ಗೆ ವರೆಗೆ ನಗರದ ಜೆಸಿ ನಗರ, ಆರ್​​ಟಿ ನಗರ, ಹೆಬ್ಬಾಳ, ಸಂಜಯ ನಗರದಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿತ್ತು. ಇದೇ ವಿಭಾಗಗಳಲ್ಲಿ ಸೆ.23 ರಿಂದ 24ರ ಬೆಳಗ್ಗೆ ವರೆಗೆ ಮದ್ಯ ನಿಷೇಧಿಸಲಾಗಿತ್ತು.

ಅದೇ ರೀತಿ, ಕೆಜಿ ಹಳ್ಳಿ, ಡಿಜೆ ಹಳ್ಳಿ, ಗೋವಿಂದಪುರ, ಬಾಣಸವಾಡಿ, ರಾಮಮೂರ್ತಿ ನಗರ ಸೇರಿದಂತೆ ಹಲವೆಡೆ ಸೆಪ್ಟೆಂಬರ್ 22ರ ಬೆಳಗ್ಗೆ 6ರಿಂದ ಸೆಪ್ಟೆಂಬರ್ 23ರ ಬೆಳಗ್ಗೆ 6 ಗಂಟೆವರಗೆ ಮದ್ಯ ಮಾರಾಟ ನಿಷೇಧಿಸಲಾಗಿತ್ತು. ಹೀಗೆ ಕೇಂದ್ರ, ಉತ್ತರ, ಪೂರ್ವ ಮತ್ತು ಈಶಾನ್ಯ ವಿಭಾಗಗಳ ಕೆಲವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯದಂಗಡಿಗಳಲ್ಲಿ ನಿರ್ದಿಷ್ಟ ದಿನಗಳಂದು ಮದ್ಯ ಮಾರಾಟಕ್ಕೆ ನಿರ್ಬಂಧಿಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:53 pm, Tue, 26 September 23

ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​