ಕಲಬುರಗಿ, ಸೆ26: ರಾಜ್ಯಾದ್ಯಂತ ಗಣೇಶ ಚತುರ್ಥಿ (Ganesha Chaturthi) ಹಬ್ಬ ಜೋರಾಗಿಯೇ ನಡೆಯುತ್ತಿದೆ. ಕಲಬುರಗಿಯಲ್ಲಿ (Kalaburagi) ಮೊನ್ನೆಯಿಂದ ಗಣೇಶೋತ್ಸವ ನಡೆಯುತ್ತಿದ್ದು, ನಾಳೆ ವಿಗ್ರಹಗಳ ಸಾಮೂಹಿಕ ವಿಸರ್ಜನೆ ಮಾಡಲಾಗುತ್ತಿದೆ. ಹೀಗಾಗಿ ಜಿಲ್ಲಾದ್ಯಂತ ನಾಳೆಯಿಂದ ಮೂರು ದಿನಗಳ ಕಲಾ ಮದ್ಯ ಮಾರಾಟ ನಿಷೇಧ ಮಾಡಿ ಜಿಲ್ಲಾಧಿಕಾರಿ ಜಿ.ಫೌಜಿಯಾ ತರನ್ನುಮ್ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಕಳೆದ ಒಂಬತ್ತು ಹತ್ತು ದಿನಗಳ ಅವಧಿಯವರೆಗೆ ಕೂರಿಸಿದ್ದ ಗಣೇಶ ಮೂರ್ತಿಗಳ ಸಾಮೂಹಿಕ ವಿಸರ್ಜನೆ ನಾಳೆ ನಡೆಯಲಿದೆ. ಹೀಗಾಗಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ. ಸೆ.27 ರ ಬೆಳಗ್ಗೆ 6 ರಿಂದ ಸೆ.30 ರ ಬೆಳಗ್ಗೆ 6 ರ ವರೆಗೆ ಮದ್ಯ ಮಾರಾಟ ನಿಷೇಧ ಮಾಡಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಇದನ್ನೂ ಓದಿ: ಕಲಬುರಗಿ: ಮಿಲಾದ್ ಉನ್ ನಬಿ ಅಂಗವಾಗಿ ಸೆ.27 ರಿಂದ ಇಸ್ಲಾಮಿಕ್ ಚಿತ್ರಕಲಾ ಪ್ರದರ್ಶನ
ಗಣೇಶ ಮೂರ್ತಿಗಳ ವಿಸರ್ಜನೆ ದಿನಗಳಂದ ಮದ್ಯ, ಮಾಂಸ ಮಾರಾಟ ನಿಷೇಧ ಮಾಡಲಾಗುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹಲವು ದಿನಗಳ ಕಾಲ ಗಣೇಶೋತ್ಸವ ನಡೆಯುತ್ತದೆ. ಹೀಗಾಗಿ ವಿಸರ್ಜನೆಯ ದಿನಗಳಂದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಮದ್ಯದ ಅಂಗಡಿ, ಬಾರ್ ಆ್ಯಂಡ್ ರೆಸ್ಟೋರೆಂಟ್, ವೈನ್ ಶಾಪ್ಗಳಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗುತ್ತದೆ.
ಸೆಪ್ಟೆಂಬರ್ 21ರಿಂದ 22 ಬೆಳಗ್ಗೆ ವರೆಗೆ ನಗರದ ಜೆಸಿ ನಗರ, ಆರ್ಟಿ ನಗರ, ಹೆಬ್ಬಾಳ, ಸಂಜಯ ನಗರದಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿತ್ತು. ಇದೇ ವಿಭಾಗಗಳಲ್ಲಿ ಸೆ.23 ರಿಂದ 24ರ ಬೆಳಗ್ಗೆ ವರೆಗೆ ಮದ್ಯ ನಿಷೇಧಿಸಲಾಗಿತ್ತು.
ಅದೇ ರೀತಿ, ಕೆಜಿ ಹಳ್ಳಿ, ಡಿಜೆ ಹಳ್ಳಿ, ಗೋವಿಂದಪುರ, ಬಾಣಸವಾಡಿ, ರಾಮಮೂರ್ತಿ ನಗರ ಸೇರಿದಂತೆ ಹಲವೆಡೆ ಸೆಪ್ಟೆಂಬರ್ 22ರ ಬೆಳಗ್ಗೆ 6ರಿಂದ ಸೆಪ್ಟೆಂಬರ್ 23ರ ಬೆಳಗ್ಗೆ 6 ಗಂಟೆವರಗೆ ಮದ್ಯ ಮಾರಾಟ ನಿಷೇಧಿಸಲಾಗಿತ್ತು. ಹೀಗೆ ಕೇಂದ್ರ, ಉತ್ತರ, ಪೂರ್ವ ಮತ್ತು ಈಶಾನ್ಯ ವಿಭಾಗಗಳ ಕೆಲವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯದಂಗಡಿಗಳಲ್ಲಿ ನಿರ್ದಿಷ್ಟ ದಿನಗಳಂದು ಮದ್ಯ ಮಾರಾಟಕ್ಕೆ ನಿರ್ಬಂಧಿಸಲಾಗಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:53 pm, Tue, 26 September 23