ಕಲಬುರಗಿಯಲ್ಲಿ ಅಪರಾಧ ಕೃತ್ಯಗಳ ತಡೆಗೆ ಗೂಂಡಾ ಕಾಯ್ದೆ ಅಸ್ತ್ರ ಪ್ರಯೋಗ, ಕುಖ್ಯಾತ ರೌಡಿ ಬಂಧಿಸಿ ಜೈಲಿಗೆ ಕಳಿಸಿದ ಖಾಕಿ

ಚುನಾವಣೆ ಸಮೀಪಿಸುತ್ತಿದ್ದಂತೆ ಅಕ್ರಮಗಳು ಹೆಚ್ಚಾಗುವ ಹಿನ್ನೆಲೆ ಪೊಲೀಸರು ಅಲರ್ಟ್​ ಆಗಿದ್ದಾರೆ. ಕಲಬುರಗಿಯಲ್ಲಿ ಗೂಂಡಾ ಕಾಯ್ದೆಯಡಿ ರೌಡಿಯನ್ನು ಬಂಧಿಸಿ ಜೈಲಿಗೆ ಹಾಕಲಾಗಿದೆ. ಮೈಸೂರಿನಲ್ಲೂ ರೌಡಿಯನ್ನು ಗಡಿ ಪಾರು ಮಾಡಲಾಗಿದೆ.

ಕಲಬುರಗಿಯಲ್ಲಿ ಅಪರಾಧ ಕೃತ್ಯಗಳ ತಡೆಗೆ ಗೂಂಡಾ ಕಾಯ್ದೆ ಅಸ್ತ್ರ ಪ್ರಯೋಗ, ಕುಖ್ಯಾತ ರೌಡಿ ಬಂಧಿಸಿ ಜೈಲಿಗೆ ಕಳಿಸಿದ ಖಾಕಿ
ಕುಖ್ಯಾತ ರೌಡಿ ಸೈಯದ್​ ಆದೀಲ್​​
Follow us
TV9 Web
| Updated By: ಆಯೇಷಾ ಬಾನು

Updated on:Dec 16, 2022 | 8:04 AM

ಕಲಬುರಗಿ: ಜಿಲ್ಲೆಯಲ್ಲಿ ಅಪರಾಧ ಕೃತ್ಯಗಳ ತಡೆಗೆ ಗೂಂಡಾ ಕಾಯ್ದೆ ಅಸ್ತ್ರ(Goonda Act) ಪ್ರಯೋಗಿಸಲಾಗಿದೆ. ಕುಖ್ಯಾತ ರೌಡಿ ಸೈಯದ್​ ಆದೀಲ್​​ ವಿರುದ್ಧ ಗೂಂಡಾ ಕಾಯ್ದೆಯಡಿ ಕೇಸ್ ದಾಖಲಾಗಿದ್ದು ಸೈಯದ್ ಬಂಧಿಸಿ ಬೆಳಗಾವಿ ಜೈಲಿಗೆ ಕಳಿಸುವಂತೆ ಕಲಬುರಗಿ ನಗರ ಪೊಲೀಸ್ ಕಮಿಷನರ್​ ಡಾ.ರವಿಕುಮಾರ್ ಆದೇಶ ಹೊರಡಿಸಿದ್ದಾರೆ.

ಕಲಬುರಗಿಯ ವಿದ್ಯಾನಗರದ ನಿವಾಸಿಯಾಗಿರುವ ರೌಡಿ ಸೈಯದ್ ಆದೀಲ್​ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ. ಕಲಬುರಗಿಯ ಅಶೋಕ ನಗರ ಠಾಣೆಯಲ್ಲಿ ಹಲವು ಕೇಸ್ ದಾಖಲಾಗಿದ್ದವು.

ಮೈಸೂರಿನ ರೌಡಿಶೀಟರ್ RX ಮನು ಗಡಿಪಾರು

ಇನ್ನು ಮೈಸೂರಿನಲ್ಲಿ ರೌಡಿ ಶೀಟರ್‌ಗಳ ವಿರುದ್ದ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಮೈಸೂರಿನ ಬನ್ನಿಮಂಟಪ ಹುಡ್ಕೋ ಬಡಾವಣೆಯ ನಿವಾಸಿ ಮನೋಜ್ ಕುಮಾರ್ ಅಲಿಯಾಸ್ RX ಮನು ಗಡಿ ಪಾರು ಮಾಡಲಾಗಿದೆ. ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗುತ್ತಿದ್ದ ಹಿನ್ನಲೆ ಮೈಸೂರು ನಗರ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ, ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಪ್ರದೀಪ್ ಗುಂಟಿ ಒಂದು ತಿಂಗಳ ಕಾಲ ಮನು ಗಡಿಪಾರು ಮಾಡಿ ಆದೇಶಿಸಿದ್ದಾರೆ. ಮೈಸೂರಿನ ನರಸಿಂಹರಾಜ, ಲಷ್ಕರ್, ವಿಜಯನಗರ, ಮಂಡಿ, ಲಕ್ಷ್ಮಿಪುರಂ, ಜಯಲಕ್ಷ್ಮಿ ಪುರಂ, ಪೊಲೀಸ್ ಠಾಣೆಗಳಲ್ಲಿ ಈತನ ವಿರುದ್ದ ಹಲವು ಪ್ರಕರಣ ಹಲ್ಲೆ, ಕೊಲೆ ಯತ್ನ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ವಿವಿಧ ಬೇಡಿಕೆ ಈಡೇರಿಕೆಗಾಗಿ ಇಂದು ಕೋಲಾರ, ಹಾಸನ ಬಂದ್; ಚಿನ್ನದ ನಾಡಲ್ಲಿ ಖಾಸಗಿ ಶಾಲೆಗಳಿಗೆ ರಜೆ

ಮೈಸೂರಿನಲ್ಲಿ ಮುಂದುವರಿದ ವಾಹನಗಳ ತಪಾಸಣಾ ಅಭಿಯಾನ

ಚುನಾವಣೆ ಸಮೀಪಿಸುತ್ತಿದ್ದಂತೆ ಅಕ್ರಮಗಳು ಹೆಚ್ಚಾಗುತ್ತಿವೆ.ಸದ್ಯ ವಾಹನಗಳಲ್ಲಿ ಮಾರಕಾಸ್ತ್ರಗಳು ಇಟ್ಟಿರುವ ಬಗ್ಗೆ ಮೈಸೂರಿನಲ್ಲಿ ತಪಾಸಣೆ ಮುಂದುವರೆದಿದೆ. ನಗರಕ್ಕೆ ಆಗಮಿಸುವ ವಾಹನಗಳನ್ನ ಪೊಲೀಸರು ಪರಿಶೀಲಿಸುತ್ತಿದ್ದಾರೆ. ಮೈಸೂರು ಪೊಲೀಸ್ ಕಮಿಷನರ್​ ರಮೇಶ್ ಸೂಚನೆ ಮೇರೆಗೆ ಜನರ ಸುರಕ್ಷತೆ, ಹಿತದೃಷ್ಟಿಯಿಂದ ಡಿಸಿಪಿ ಪ್ರದೀಪ್ ಗುಂಟಿ ನೇತೃತ್ವದಲ್ಲಿ ವಾಹನಗಳ ತಪಾಸಣೆ ಮಾಡಲಾಗುತ್ತಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:04 am, Fri, 16 December 22

ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ