ಕೋಮು ಗಲಭೆ ಆರೋಪಿ ವಿರುದ್ಧ ಗೂಂಡಾ ಕಾಯ್ದೆ ದಾಖಲು: ಗಡಿಪಾರು ಮಾಡಲು ಆದೇಶ
ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾದಲ್ಲಿ ಶಿವಲಿಂಗ ಸ್ವಚ್ಛತೆಗೆ ಬಿಜೆಪಿ ಶಾಸಕರು ತೆರಳಿದ್ದ ವೇಳೆ ಗಲಭೆ ನಡೆದಿತ್ತು.
ಕಲಬುರಗಿ: ಕೋಮು ಗಲಭೆಕೋರರ ವಿರುದ್ಧ ಕಠಿಣ ಕ್ರಮ ಜರುಗಿಸಲು ಸರ್ಕಾರ ಮುಂದಾಗಿದೆ. ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆ ದಾಖಲಿಸಿ, ಗಡಿಪಾರು ಮಾಡಲು ಆದೇಶ ಹೊರಡಿಸಲಾಗಿದೆ. ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾದಲ್ಲಿ ಶಿವಲಿಂಗ ಸ್ವಚ್ಛತೆಗೆ ಬಿಜೆಪಿ ಶಾಸಕರು ತೆರಳಿದ್ದ ವೇಳೆ ಗಲಭೆ ನಡೆದಿತ್ತು. ಕೇಂದ್ರ ಚಿವ ಭಗವಂತ ಖೂಬಾ, ಜಿಲ್ಲಾಧಿಕಾರಿ ಮತ್ತು ಪೊಲೀಸರು ಸಹ ಸ್ಥಳದಲ್ಲಿ ಇದ್ದರು. ಕಲ್ಲುತೂರಾಟದ ಹಿನ್ನೆಲೆಯಲ್ಲಿ ಘಟನೆಯ ಮಾಸ್ಟರ್ಮೈಂಡ್ ಎನ್ನುವ ಆರೋಪದ ಮೇಲೆ ಆರೋಪಿ ಫಿರ್ದೋಸ್ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಈ ಸದ್ಯ ಕಲಬುರಗಿ ಕೇಂದ್ರ ಕಾರಾಗೃಹದಲ್ಲಿದ್ದಾನೆ. ಈತನನ್ನು ಗಡಿಪಾರು ಮಾಡಲು ಜಿಲ್ಲಾಡಳಿತ ಸಜ್ಜಾಗಿದೆ. ಈತನ ವಿರುದ್ಧ ಗಲಭೆಗೆ ಪ್ರಚೋದನೆ, ಕೊಲೆ ಯತ್ನ ಸೇರಿ ಒಟ್ಟು 29 ಪ್ರಕರಣಗಳು ದಾಖಲಾಗಿವೆ.
ಆರೋಪಿಯ ಮೇಲೆ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಗಡಿಪಾರು ಆದೇಶ ಹೊರಡಿಸಬೇಕು ಎಂದು ಪೊಲೀಸರು ಮನವಿ ಮಾಡಿಕೊಂಡಿದ್ದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಯಶವಂತ್ ಗುರುಕಾರ್ಗಡಿಪಾರು ಆದೇಶ ಹೊರಡಿಸಿದ್ದಾರೆ. ಆದೇಶದ ಹಿನ್ನೆಲೆಯಲ್ಲಿ ಅನ್ಸಾರಿ ಇದೀಗ ಕಲಬುರಗಿಯಿಂದ ಬೆಳಗಾವಿ ಜೈಲಿಗೆ ಶಿಫ್ಟ್ ಆಗಲಿದ್ದಾನನೆ.
ಕಲ್ಲು ತೂರಾಟ ನಡೆದ ಹಿನ್ನೆಲೆಯಲ್ಲಿ ಆಳಂದ ತಾಲ್ಲೂಕಿನಲ್ಲಿ 144ನೇ ವಿಧಿ ಅನ್ವಯ ವಿಧಿಸಿದ್ದ ನಿಷೇಧಾಜ್ಞೆ ವಿಧಿಸಲಾಗಿತ್ತು. ಶಾಂತಿ, ಸುವ್ಯವಸ್ಥೆ, ಕೋಮು ಸೌಹಾರ್ದ ಕಾಪಾಡುವ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಬೇಕಾಯಿತು ಎಂದು ಜಿಲ್ಲಾಧಿಕಾರಿ ಹೇಳಿದ್ದರು. ಲಾಡ್ಲೆ ಮಶಾಕ್ ದರ್ಗಾದ ಆವರಣದಲ್ಲಿರುವ ರಾಘವ ಚೈತನ್ಯ ಶಿವಲಿಂಗ ಪೂಜೆ ವಿಚಾರದಲ್ಲಿ ಗಲಾಟೆ ನಡೆದಿತ್ತು. ಕೇಂದ್ರ ಸಚಿವ ಭಗವಂತ ಖೂಬಾ, ಶಾಸಕರು, ಡಿಸಿ, ಎಸ್ಪಿ ಕಾರಿನ ಮೇಲೆ ಕಲ್ಲು ತೂರಾಟ ನಡೆದಿತ್ತು. ಈ ಹಿನ್ನೆಲೆಯಲ್ಲಿ 165 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.
ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 3:18 pm, Thu, 26 May 22