ಗುಲಬರ್ಗಾ ವಿಶ್ವವಿದ್ಯಾಲಯದ‌ ಅತಿಥಿ ಉಪನ್ಯಾಸಕನ ಕಾಮಕೇಳಿ ಆಡಿಯೋ ವೈರಲ್

Kalaburagi News: ಗುಲಬರ್ಗಾ ವಿಶ್ವವಿದ್ಯಾಲಯದ‌ ಅತಿಥಿ ಉಪನ್ಯಾಸಕರದ್ದು ಎನ್ನಲಾದ ಕಾಮಕೇಳಿ ಆಡಿಯೋ ಒಂದು ಇದೀಗ ವೈರಲ್ ಆಗಿದ್ದು, ವಿವಿ ಕ್ಯಾಂಪಸ್​ನಲ್ಲಿ ಇದೀಗ ಈ ಆಡಿಯೋ ಭಾರೀ ಸದ್ದು ಮಾಡುತ್ತಿದೆ.

ಗುಲಬರ್ಗಾ ವಿಶ್ವವಿದ್ಯಾಲಯದ‌ ಅತಿಥಿ ಉಪನ್ಯಾಸಕನ ಕಾಮಕೇಳಿ ಆಡಿಯೋ ವೈರಲ್
ಸಾಂದರ್ಭಿಕ ಚಿತ್ರ
Follow us
ರಮೇಶ್ ಬಿ. ಜವಳಗೇರಾ
|

Updated on:Jun 07, 2023 | 10:00 AM

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ‌(gulbarga university )ಅತಿಥಿ ಉಪನ್ಯಾಸಕರದ್ದು ಎನ್ನಲಾದ ಕಾಮಕೇಳಿ ಆಡಿಯೋ ಒಂದು ಇದೀಗ ವೈರಲ್ ಆಗಿದೆ. ವಿಶ್ವವಿದ್ಯಾಲಯದ ಎಂಬಿಎ ವಿಭಾಗದ ಅತಿಥಿ ಉಪನ್ಯಾಸಕ(guest lecturer), ವಿದ್ಯಾರ್ಥಿನಿಗೆ ಕರೆ ಮಾಡಿ ಮಂಚಕ್ಕೆ ಕರೆದಿರುವುದು ಆಡಿಯೋದಲ್ಲಿದೆ.  ಈ ಆಡಿಯೋ ಎಂಬಿಎ ವಿಭಾಗದ ಅತಿಥಿ ಉಪನ್ಯಾಸಕನದ್ದು ಎನ್ನಲಾಗಿದ್ದು,ಅತಿಥಿ ಉಪನ್ಯಾಸಕ ವಿದ್ಯಾರ್ಥಿನಿ ಜೊತೆ ಒಟ್ಟು 23 ನಿಮಿಷ ಮಾತನಾಡಿರುವ ಈ ಆಡಿಯೋ ವಿಶ್ವವಿದ್ಯಾಯಲದ ಕ್ಯಾಂಪಸ್​ನಲ್ಲಿ ಕಂಪನ ಸೃಷ್ಟಿಸಿದೆ.

ಇದನ್ನು ಓದಿ: On duty romance: ಬಿಲ್ ಕಲೆಕ್ಟರ್​- ಕಂಪ್ಯೂಟರ್​ ಆಪರೇಟರ್​​ ತಮ್ಮ ಸರ್ಕಾರಿ ಕಚೇರಿಯ ಟೇಬಲ್ ಮೇಲೆಯೇ ಕಾಮಕೇಳಿ ಆಡ್ತಿದ್ದವು, ಮೇಲಾಧಿಕಾರಿ ಇಬ್ಬರನ್ನೂ ಮನೆಗೆ ಕಳಿಸಿದರು!

ಎಂಬಿಎ ವಿಭಾಗದ ಕೊನೆಯ ಸೆಮಿಸ್ಟರ್ ನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವುದು ಆಡಿಯೋದಲ್ಲಿದೆ. ನೀನು ನನಗೆ ಗರ್ಲ್ ಪ್ರೆಂಡ್ ಆಗಿರು ಎಂದು ಅತಿಥಿ ಉಪನ್ಯಾಸಕ ವಿದ್ಯಾರ್ಥಿನಿಗೆ ಪೀಡಿಸಿದ್ದಾರೆ. ಆದ್ರೆ, ಅತಿಥಿ ಉಪನ್ಯಾಸಕನ ಮಾತಿಗೆ ವಿದ್ಯಾರ್ಥಿನಿ ನೋ ಎಂದಿದ್ದಾಳೆ. ಆರು ತಿಂಗಳ ಹಿಂದೆ ಮಾತನಾಡಿದ್ದ ಆಡಿಯೋ ಇದೀಗ ವೈರಲ್ ಆಗಿದ್ದು, ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ. ಆದ್ರೆ, ಇದೀಗ ಈ ಆಡಿಯೋ ಫುಲ್ ವೈರಲ್ ಆಗಿದ್ದು,  ಗುಲಬರ್ಗಾ ವಿಶ್ವವಿದ್ಯಾಲಯದ ಕ್ಯಾಂಪಸ್​ನಲ್ಲಿ ಭಾರೀ ಸಂಚಲನ ಮೂಡಿಸಿದೆ.

23 ನಿಮಿಷ ಆಡಿಯೋದಲ್ಲಿ ಅನೇಕ ಸಂಗತಿಗಳ ಬಗ್ಗೆ ಮಾತನಾಡಿದ್ದು, ಇದು ಹೇಗೆ ಲೀಕ್ ಆಯ್ತು? ಯಾರು ಲೀಕ್ ಮಾಡಿದ್ರು? ಯಾರು ಆ ಅತಿಥಿ ಉಪನ್ಯಾಸಕ? ಎನ್ನುವುದು ನಿಗೂಢವಾಗಿದ್ದು, ಈ ಬಗ್ಗೆ ಕ್ಯಾಂಪಸ್​ನಲ್ಲಿ ವಿದ್ಯಾರ್ಥಿಗಳ ಮಧ್ಯೆ ಗುಸು-ಗುಸು ಶುರುವಾಗಿದೆ.

ಮತ್ತಷ್ಟು ಕಲಬುರಗಿ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 8:31 am, Wed, 7 June 23

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ