AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿಯಲ್ಲಿ ನೇಣು ಬಿಗಿದುಕೊಂಡು ಹೆಡ್ ಕಾನ್ಸಟೇಬಲ್ ಆತ್ಮಹತ್ಯೆ

ನಗರದ ಡಿಎಆರ್ ಹೆಡ್ ಕ್ವಾರ್ಟರ್ಸ್​ನಲ್ಲಿ ನೇಣು ಬಿಗಿದುಕೊಂಡು ಹೆಡ್ ಕಾನ್ಸಟೇಬಲ್ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪಾಂಡುರಂಗ (47) ಆತ್ಮಹತ್ಯೆಗೆ ಮಾಡಿಕೊಂಡ ರ್ದುದೈವಿ.

ಕಲಬುರಗಿಯಲ್ಲಿ ನೇಣು ಬಿಗಿದುಕೊಂಡು ಹೆಡ್ ಕಾನ್ಸಟೇಬಲ್ ಆತ್ಮಹತ್ಯೆ
ಆತ್ಮಹತ್ಯೆ ಮಾಡಿಕೊಂಡ ಪೊಲೀಸ್​
ಕಿರಣ್ ಹನುಮಂತ್​ ಮಾದಾರ್
|

Updated on: May 21, 2023 | 11:26 AM

Share

ಕಲಬುರಗಿ: ನಗರದ ಡಿಎಆರ್(DAR) ಹೆಡ್ ಕ್ವಾರ್ಟರ್ಸ್​ನಲ್ಲಿ ನೇಣು ಬಿಗಿದುಕೊಂಡು ಹೆಡ್ ಕಾನ್ಸಟೇಬಲ್ ಆತ್ಮಹತ್ಯೆ(Head Constable Suicide) ಮಾಡಿಕೊಂಡ ಘಟನೆ ನಡೆದಿದೆ. ಪಾಂಡುರಂಗ (47) ಆತ್ಮಹತ್ಯೆಗೆ ಮಾಡಿಕೊಂಡ ರ್ದುದೈವಿ. ಜಿಲ್ಲೆಯ ಚಿಂಚೋಳಿ (Chincholi) ತಾಲ್ಲೂಕಿನ ಚಿಮ್ಮನಚೋಡ್ ಗ್ರಾಮದ ನಿವಾಸಿ ಪಾಂಡುರಂಗ ಅವರು ಕಲಬುರಗಿ ನಗರದ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ನಿನ್ನೆ(ಮೇ.20) ರಾತ್ರಿ 10 ಗಂಟೆಗೆ ಕೆಲಸ ಮುಗಿಸಿ ಮನೆಗೆ ತೆರಳಿದ್ದರು. ಇನ್ನು ಶಕೆ ಇದೆ ಎಂದು ಇಬ್ಬರು ಮಕ್ಕಳು ಮನೆಯ ಮೇಲ್ಚಾವಣಿಯಲ್ಲಿ ಮಲಗಿದ್ದು, ಗಂಡ ಹೆಂಡತಿ‌ ಇಬ್ಬರು ಕ್ವಾಟರ್ಸ್​ನ ಬೆಡ್ ರೂಮ್​ನಲ್ಲಿ ಮಲಗಿದ್ದರು. ನಸುಕಿನ ಜಾವ ಮನೆಯ ಅಡುಗೆ ಕೊಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬರಬೇಕಿದೆ.

ಗುಂಡು ಹಾರಿಸಿಕೊಂಡು ಕಾನ್ಸ್​​ಟೇಬಲ್ ಆತ್ಮಹತ್ಯೆ

ಕಲಬುರಗಿ: ಇಂತಹ ಘಟನೆ ಇದೆ ಮೊದಲಲ್ಲ, ಇದೇ ತಿಂಗಳ ಮೇ.5 ರಂದು ಕಾನ್ಸ್​​ಟೇಬಲ್​ ಒಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಜಿಲ್ಲೆಯ ಚಿತ್ತಾಪುರ ಪಟ್ಟಣದಲ್ಲಿ ಕಾನಸ್ಟೇಬಲ್​ಲೊಬ್ಬ ತನ್ನ ಸರ್ವಿಸ್ 303 ರೈಫಲ್​ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿತ್ತು. ಚಿತ್ತಾಪುರ ಪಟ್ಟಣದ ತಹಶಿಲ್ದಾರ್ ಕಚೇರಿಯ ಮಹಡಿ ಮೇಲೆ ಹೋಗಿ 34 ವರ್ಷದ ಮಲ್ಲಿಕಾರ್ಜುನ ಆತ್ಮಹತ್ಯೆ ಮಾಡಿಕೊಂಡಿದ್ದರು. ಚುನಾವಣೆ ಕರ್ತವ್ಯದಲ್ಲಿದ್ದ ಮಲ್ಲಿಕಾರ್ಜುನ, ಇಂದು(ಮೇ.4) ಮುಂಜಾನೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಮೂಲತ ಜಿಲ್ಲೆಯ ಶಹಬಾದ್ ಪಟ್ಟಣದ ನಿವಾಸಿಯಾಗಿದ್ದ ಮಲ್ಲಿಕಾರ್ಜುನ, ಕಳೆದ ಕೆಲ ವರ್ಷಗಳಿಂದ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಆದ್ರೆ, ಇದೀಗ ಏಕಾಎಕಿ ಆತ್ಮಹತ್ಯೆ ಮಾಡಿಕೊಂಡಿದ್ದು, ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ಕಾರ್ಯಕರ್ತನ ಶವ ಪತ್ತೆ: ಆತ್ಮಹತ್ಯೆಯಲ್ಲ, ಕೊಲೆ ಎನ್ನುತ್ತಿರುವ ಕುಟುಂಬಸ್ಥರು

ವಿದ್ಯುತ್ ತಂತಿ ತಗುಲಿ ಕಾರ್ಮಿಕ ಸಾವು

ಮಂಡ್ಯ: ನಾಗಮಂಗಲ ತಾಲೂಕಿನ ಬೆಳ್ಳೂರು ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಪಾಂಡವಪುರ ತಾಲೂಕಿನ ಟಿ.ಎಸ್ ಛತ್ರದ ಗ್ರಾಮದ ನಿವಾಸಿ ರಾಜು ಮೃತ ಕಾರ್ಮಿಕ. ಮಾವಿನಕಾಯಿ ಕೀಳಲು ಹೋಗಿದ್ದಾಗ ವಿದ್ಯುತ್ ತಂತಿ ತಗುಲಿ ಈ ದುರ್ಘಟನೆ ನಡೆದಿದ್ದು, ಬೆಳ್ಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಸೆಸ್ಕಾಂ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕುಡಿಯುವ ನೀರಿಗಾಗಿ ನದಿಗೆ ಇಳಿದಿದ್ದ ಬಾಲಕನನ್ನ ಹೊತ್ತೊಯ್ದ ಮೊಸಳೆ

ರಾಯಚೂರು: ಕುಡಿಯುವ ನೀರಿಗಾಗಿ ನದಿಗೆ ಇಳಿದಿದ್ದ ಬಾಲಕನನ್ನ ಮೊಸಳೆ ಹೊತ್ತೊಯ್ದ ಘಟನೆ ತಾಲೂಕಿನ ಕುರವಕಲಾ ಗ್ರಾಮದಲ್ಲಿ ನಡೆದಿದೆ. ನವೀನ್​(9) ಮೃತ ಬಾಲಕ. ಪೋಷಕರ ಜತೆ ನದಿ ಬಳಿ ಇರುವ ಜಮೀನಿಗೆ ನವೀನ್ ತೆರಳಿದ್ದ. ಈ ವೇಳೆ ಪೋಷಕರು ನದಿಗೆ ಹೋಗಿ ಕುಡಿಯಲು ನೀರು ತರಲು ಹೇಳಿದ್ದರು. ಕುಡಿಯುವ ನೀರಿಗಾಗಿ ನದಿಗೆ ತೆರಳಿದ್ದ ನವೀನ್ ಹಾಗೂ ಮತ್ತೊಬ್ಬ ಬಾಲಕ, ಬಾಟಲಿಗೆ ನೀರು ತುಂಬಿಸಲು ಮುಂದಾಗಿದ್ದಾರೆ. ಇದೇ ಸಂದರ್ಭದಲ್ಲಿ ನವೀನನ​ ಮೇಲೆ ಮೊಸಳೆ ದಾಳಿ ಮಾಡಿದ್ದು, ಹೊತ್ತೊಯ್ದಿದೆ. ನವೀನ್​ ಜತೆ ಇದ್ದ ಮತ್ತೊಬ್ಬ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಇನ್ನು ಬಾಲಕ ನವೀನ್​ಗಾಗಿ ಕೃಷ್ಣಾ ನದಿಯಲ್ಲಿ ಶೋಧ ಕಾರ್ಯ ಆರಂಭವಾಗಿದ್ದು, ಯಾಪಲದಿನ್ನಿ ಪೊಲೀಸರು, ಅಗ್ನಿಶಾಮಕ ದಳ ಜೊತೆ ಸ್ಥಳೀಯರಿಂದ ಕಾರ್ಯಾಚರಣೆ. ನಡೆಸಿದ್ದಾರೆ. ಈ ಕುರಿತು ಯಾಪಲದಿನ್ನಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ