ಹಿಜಾಬ್ ತಂಟೆಗೆ ಬಂದರೆ ತುಂಡು ತುಂಡು ಮಾಡುವುದಾಗಿ ಹೇಳಿದ್ದ ಕಾಂಗ್ರೆಸ್​ ಮುಖಂಡ ಮುಕ್ರಂ ಖಾನ್ ಪೊಲೀಸರ ವಶಕ್ಕೆ

| Updated By: ganapathi bhat

Updated on: Mar 08, 2022 | 11:08 AM

ಪ್ರಕರಣ ದಾಖಲಾದ ನಂತರ ತಲೆಮರೆಸಿಕೊಂಡಿದ್ದ ಮುಕ್ರಂ ಖಾನ್​ರನ್ನು ನಿನ್ನೆ ಹೈದರಾಬಾದ್​ನಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇದೀಗ ಮುಕ್ರಂ ಖಾನ್​​ಗೆ ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೈದರಾಬಾದ್​ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಿಜಾಬ್ ತಂಟೆಗೆ ಬಂದರೆ ತುಂಡು ತುಂಡು ಮಾಡುವುದಾಗಿ ಹೇಳಿದ್ದ ಕಾಂಗ್ರೆಸ್​ ಮುಖಂಡ ಮುಕ್ರಂ ಖಾನ್ ಪೊಲೀಸರ ವಶಕ್ಕೆ
ಮುಕ್ರಂ ಖಾನ್
Follow us on

ಕಲಬುರಗಿ: ಹಿಜಾಬ್ ತಂಟೆಗೆ ಬಂದರೆ ತುಂಡು ತುಂಡು ಮಾಡುವುದಾಗಿ ಹೇಳಿಕೆ ನೀಡಿದ್ದ ಕಾಂಗ್ರೆಸ್ ಮುಖಂಡನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಾಂಗ್ರೆಸ್​ ಮುಖಂಡ ಮುಕ್ರಂ ಖಾನ್ ಎಂಬವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಮುಕ್ರಂಖಾನ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್​ ಮುಖಂಡ ಸಹ ಆಗಿದ್ದಾರೆ. ಮುಕ್ರಂ ಹಿಜಾಬ್ ವಿವಾದ ಹಿನ್ನೆಲೆ ವಿವಾದಾತ್ಮಕ ಮತ್ತು ಬೆದರಿಕೆಯ ಹೇಳಿಕೆ ನೀಡಿದ್ದರು. ಈ ವಿರುದ್ಧ ಸೇಡಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣ ದಾಖಲಾದ ನಂತರ ತಲೆಮರೆಸಿಕೊಂಡಿದ್ದ ಮುಕ್ರಂ ಖಾನ್​ರನ್ನು ನಿನ್ನೆ ಹೈದರಾಬಾದ್​ನಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇದೀಗ ಮುಕ್ರಂ ಖಾನ್​​ಗೆ ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೈದರಾಬಾದ್​ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹುಬ್ಬಳ್ಳಿ: ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ಅಧಿಕಾರಿ ಸೋಗಿನಲ್ಲಿ ವಂಚನೆ

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ಅಧಿಕಾರಿ ಸೋಗಿನಲ್ಲಿ ವಂಚನೆ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಇಲ್ಲಿನ ಗೋಕುಲ್ ರೋಡ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ವಾಟ್ಸಾಪ್​​ ಮೂಲಕ ಪರಿಚಯಿಸಿಕೊಂಡು ವಂಚಿಸಿರುವ ಆರೋಪ ಕೇಳಿಬಂದಿದೆ. ಹುಬ್ಬಳ್ಳಿಯ ಸರೋಜಾ ಎಂಬುವರಿಗೆ ವಂಚಿಸಿರುವ ಆರೋಪ ಇದ್ದು, 40 ಸಿಬ್ಬಂದಿಯ ರಕ್ತ ಪರೀಕ್ಷೆ ಮಾಡೋದಾಗಿ ಹೇಳಿ ವಂಚನೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಸರೋಜಾರಿಂದ ಬ್ಯಾಂಕ್ ಅಕೌಂಟ್ ಮಾಹಿತಿ ಪಡೆದು ವಂಚನೆ ಮಾಡಲಾಗಿದೆ. ಸರೋಜಾ ಅಕೌಂಟ್​ನಲ್ಲಿದ್ದ ಸಾವಿರಾರು ರೂಪಾಯಿ ವಂಚಿಸಲಾಗಿದೆ.

ಚಿಕ್ಕಮಗಳೂರು: ಕಾಫಿತೋಟದಲ್ಲಿ ಬೀಡುಬಿಟ್ಟ ಕಾಡಾನೆಗಳು, ಸ್ಥಳೀಯರಿಗೆ ಹೆಚ್ಚಿದ ಆತಂಕ

ಇಲ್ಲಿನ ಗೋಣಿಬೀಡು ಸಮೀಪದ ಪರಿಸರದಲ್ಲಿ 11 ಕಾಡಾನೆಗಳು ಪ್ರತ್ಯಕ್ಷವಾಗಿವೆ. ಕಾಫಿತೋಟದಲ್ಲಿ ಬೀಡುಬಿಟ್ಟ ಕಾಡಾನೆಗಳಿಂದಾಗಿ, ಸ್ಥಳೀಯರಿಗೆ ಆತಂಕ ಹೆಚ್ಚಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ‌ ಗೋಣಿಬೀಡು ಎಂಬಲ್ಲಿ ಘಟನೆ ನಡೆದಿದೆ. ಕಾಡಾನೆಗಳನ್ನು ಓಡಿಸಲು ಅರಣ್ಯ ಇಲಾಖೆ ಸಿಬ್ಬಂದಿಗಳು ಹರಸಾಹಸ ಪಟ್ಟಿದ್ದಾರೆ. ಗುಂಪು ಗುಂಪಾಗಿ ಕಾಫಿ ತೋಟದಲ್ಲಿ ದಾಂಧಲೆ ನಡೆಸುತ್ತಿರುವ ಕಾಡಾನೆಗಳ, ಓಡಾಟದಿಂದ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ.

ಇದನ್ನೂ ಓದಿ: ಹಿಜಾಬ್ ಸಂಘರ್ಷ ನಡುವೆ ಹಿಂದೂ ದೇವತೆಗಳ ಚಿತ್ರ ಬಿಡಿಸಿ ಸಾಮರಸ್ಯದ ಸಂದೇಶ ಸಾರಿದ ಮುಸ್ಲಿಂ ಕಲಾವಿದ

ಇದನ್ನೂ ಓದಿ: Hijab: ಹಿಜಾಬ್ ಪರ-ವಿರೋಧ ವಾದ ಮಂಡನೆ ಮುಕ್ತಾಯ; ತೀರ್ಪು ಕಾಯ್ದಿರಿಸಿದ ಪೂರ್ಣ ಪೀಠ