AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಮಾನದ ರೋಗಕ್ಕೆ ಬಲಿ! ಹಿಂದಿ ಶಿಕ್ಷಕಿಯಾಗಿದ್ದ ಹೆಂಡತಿಯನ್ನು ಕೊಲೆ ಮಾಡಿದ ದೈಹಿಕ ಶಿಕ್ಷಕ ಗಂಡ

ಫರೀದಾ ಬೇಗಂ ಪತಿ, ಎಜಾಜ್ ಅಹ್ಮದ್ ಕೂಡಾ, ಸರ್ಕಾರಿ ಶಾಲೆಯ ದೈಹಿಕ ಶಿಕ್ಷಕ. ಹೌದು ಕಲಬುರಗಿ ತಾಲೂಕಿನ ಪಟ್ಟಣ ಗ್ರಾಮದಲ್ಲಿರುವ ಮೂರಾರ್ಜಿ ವಸತಿ ಶಾಲೆಯಲ್ಲಿ ದೈಹಿಕ ಶಿಕ್ಷಕನಾಗಿದ್ದಾನೆ. ಈ ಮೊದಲು ಪೊಲೀಸ್ ಕಾನಸ್ಟೇಬಲ್ ಆಗಿದ್ದ ಎಜಾಜ್, ನಂತರ ದೈಹಿಕ ಶಿಕ್ಷಕನಾಗಿ ಆಯ್ಕೆಯಾಗಿದ್ದ

ಅನುಮಾನದ ರೋಗಕ್ಕೆ ಬಲಿ! ಹಿಂದಿ ಶಿಕ್ಷಕಿಯಾಗಿದ್ದ ಹೆಂಡತಿಯನ್ನು ಕೊಲೆ ಮಾಡಿದ ದೈಹಿಕ ಶಿಕ್ಷಕ ಗಂಡ
ಹಿಂದಿ ಶಿಕ್ಷಕಿಯಾಗಿದ್ದ ಹೆಂಡತಿಯನ್ನು ಕೊಲೆ ಮಾಡಿದ ದೈಹಿಕ ಶಿಕ್ಷಕ ಗಂಡ
TV9 Web
| Edited By: |

Updated on:Feb 16, 2023 | 3:33 PM

Share

ಕಲಬುರಗಿ: ಅನುಮಾನಂ ಪೆದ್ದ ರೋಗ ಅಂತಾರೆ. ಇಂತಹುದ್ದೆ ಅನುಮಾನದ ರೋಗದಿಂದ ಅನೇಕ ಸುಂದರ ಸಂಸಾರಗಳು ಹಾಳಾಗಿವೆ. ಅನುಮಾನದಿಂದ ಕೌಟುಂಬಿಕ ಕಲಹಗಳು ಹೆಚ್ಚಾಗಿ ಅನೇಕರ ಜೀವಗಳೇ ಹೋಗಿವೆ. ಕಲಬುರಗಿ ಜಿಲ್ಲೆಯಲ್ಲಿ ಅನುಮಾನದ ರೋಗಕ್ಕೆ ಮಹಿಳೆಯೋರ್ವಳು ಬಲಿಯಾಗಿದ್ದಾಳೆ. ಅವರಿಬ್ಬರೂ ಸರ್ಕಾರಿ ಶಾಲೆಯ ಶಿಕ್ಷಕರು. ಕೈತುಂಬಾ ಸಂಬಳವಿತ್ತು. ದಂಪತಿಗೆ ಇಬ್ಬರು ಗಂಡು ಮಕ್ಕಳು ಕೂಡಾ ಇದ್ದರು. ಸಂಸಾರ ಚೆನ್ನಾಗಿಯೇ ನಡೆದಿದೆ ಅಂದುಕೊಂಡಿರುವಾಗಲೇ, ಪತಿಗೆ ಪತ್ನಿಯ ಮೇಲೆ ಅನುಮಾನ ಆರಂಭವಾಗಿತ್ತು. ಇದೇ ಕಾರಣಕ್ಕೆ ಪತ್ನಿಗೆ ಕಿರುಕುಳ ನೀಡಲು ಆರಂಭಿಸಿದ್ದ ಪತಿ, ಕಳೆದ ರಾತ್ರಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಪತ್ನಿಯನ್ನೇ ಬರ್ಬರವಾಗಿ ಕೊಲೆ ಮಾಡಿದ್ದಾನೆ.

ಹಿಂದಿ ಶಿಕ್ಷಕಿಯಾಗಿದ್ದ ಪತ್ನಿಯನ್ನು ಕೊಲೆ ಮಾಡಿದ ದೈಹಿಕ ಶಿಕ್ಷಕ ಪತಿ

ಕಲಬುರಗಿ ನಗರದ ಅಂಬಿಕಾ ನಗರದಲ್ಲಿ ಕಳೆದ ರಾತ್ರಿ ಮಹಿಳೆಯೊಬ್ಬರ ಬರ್ಬರ ಕೊಲೆಯಾಗಿದೆ. ಕೊಲೆಯಾದ ಮಹಿಳೆಯ ಹೆಸರು ಫರೀದಾ ಬೇಗಂ ಅಂತ. 39 ವರ್ಷದ ಫರೀದಾ ಬೇಗಂ, ಜಿಲ್ಲೆಯ ಅಫಜಲಪುರ ತಾಲೂಕಿನ ಅತನೂರು ಗ್ರಾಮದಲ್ಲಿರುವ ಸರ್ಕಾರಿ ಆದರ್ಶ ಶಾಲೆಯ ಹೈಸ್ಕೂಲ್ ನಲ್ಲಿ ಹಿಂದಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ನಿನ್ನೆ ಶಾಲೆಗೆ ಹೋಗಿದ್ದ ಫರೀದಾ ಬೇಗಂ, ಇಂದು ಎಸ್ ಎಸ್ ಎಲ್ ಸಿ ಮಕ್ಕಳಿಗೆ ಹಿಂದಿ ಪೂರ್ವಭಾವಿ ಪರೀಕ್ಷೆ ಇದ್ದಿದ್ದರಿಂದ, ಪ್ರಶ್ನೆ ಪತ್ರಿಕೆ ಸಿದ್ದಗೊಳಿಸಿ, ಮಕ್ಕಳಿಗೆ ಸರಿಯಾಗಿ ಪರೀಕ್ಷೆ ಬರೆಯಬೇಕು. ಸರಿಯಾಗಿ ಶಾಲೆಗೆ ಬನ್ನಿ, ನಾನು ಕೂಡಾ ಬೇಗನೆ ಬರ್ತೀನಿ ಅಂತ ಹೇಳಿ ಬಂದಿದ್ದರಂತೆ. ಆದ್ರೆ ರಾತ್ರಿ ಕಳೆದು ಬೆಳಗಾಗೋದರಲ್ಲಿ ಶಿಕ್ಷಕಿ ಫರೀದಾ ಬೇಗಂ ಬರ್ಬರವಾಗಿ ಕೊಲೆಯಾಗಿದ್ದಾರೆ. ಇನ್ನು ಕೊಲೆ ಮಾಡಿದ್ದು ಬೇರಾರು ಅಲ್ಲಾ, ಫರೀದಾ ಬೇಗಂ ಅವರ ಗಂಡ ಎಜಾಜ್ ಅಹ್ಮದ್. ಹೌದು ಕಳೆದ ರಾತ್ರಿ 11 ಗಂಟೆಯ ಸಮಯದಲ್ಲಿ, ಫರೀದಾ ಬೇಗಂ ಮತ್ತು ಎಜಾಜ್ ನಡುವೆ ಮಾತಿನ ಚಕಮಕಿಯಾಗಿದೆ. ಅದನ್ನೇ ಗಂಭೀರವಾಗಿ ತಗೆದಕೊಂಡು ಪತಿ ಎಜಾಜ್ ಅಹ್ಮದ್, ಫರೀದಾ ಬೇಗಂ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾನೆ.

ಇನ್ನು ಫರೀದಾ ಬೇಗಂ ಪತಿ, ಎಜಾಜ್ ಅಹ್ಮದ್ ಕೂಡಾ, ಸರ್ಕಾರಿ ಶಾಲೆಯ ದೈಹಿಕ ಶಿಕ್ಷಕ. ಹೌದು ಕಲಬುರಗಿ ತಾಲೂಕಿನ ಪಟ್ಟಣ ಗ್ರಾಮದಲ್ಲಿರುವ ಮೂರಾರ್ಜಿ ವಸತಿ ಶಾಲೆಯಲ್ಲಿ ದೈಹಿಕ ಶಿಕ್ಷಕನಾಗಿದ್ದಾನೆ. ಈ ಮೊದಲು ಪೊಲೀಸ್ ಕಾನಸ್ಟೇಬಲ್ ಆಗಿದ್ದ ಎಜಾಜ್, ನಂತರ ದೈಹಿಕ ಶಿಕ್ಷಕನಾಗಿ ಆಯ್ಕೆಯಾಗಿದ್ದರಿಂದ, ಪೊಲೀಸ್ ಕೆಲಸ ಬಿಟ್ಟು ಶಿಕ್ಷಕ ವೃತ್ತಿ ಆಯ್ದುಕೊಂಡಿದ್ದ.

ಇನ್ನು ಚಿಲ್ಲೆಯ ಚಿಂಚೋಳಿ ತಾಲೂಕಿನ ಚಿಮ್ಮನಚೂಡ ಗ್ರಾಮದ ನಿವಾಸಿಯಾಗಿದ್ದ ಫರೀದಾ ಬೇಗಂ 12 ವರ್ಷದ ಹಿಂದೆ ಎಜಾಜ್ ಅಹ್ಮದ್ ಜೊತೆ ವಿವಾಹವಾಗಿತ್ತು. ಆರಂಭದಲ್ಲಿ ದಂಪತಿ ಚೆನ್ನಾಗಿಯೇ ಇದ್ದರಂತೆ. ದಂಪತಿಗೆ ಇಬ್ಬರು ಮಕ್ಕಳು ಕೂಡಾ ಇವೆ. ಆದ್ರೆ ಕಳೆದ ಕೆಲ ವರ್ಷಗಳಿಂದ ಎಜಾಜ್ ಅಹ್ಮದ್, ಫರೀದಾ ಬೇಗಂ ಮೇಲೆ ಅನುಮಾನಗೊಂಡಿದ್ದ. ಪತ್ನಿಯ ಮೊಬೈಲ್ ಚೆಕ್ ಮಾಡೋದು, ಯಾರ ಜೊತೆ ಮಾತನಾಡ್ತೀಯಾ ಅಂತ ಕೇಳೋದು, ಅವರಿವರ ಜೊತೆ ಸಂಬಂಧವಿದೆ ಅಂತ ಆರೋಪಿಸುವುದು ಮಾಡುತ್ತಿದ್ದನಂತೆ. ಆದರೂ ಕೂಡಾ ಮಕ್ಕಳ ಭವಿಷ್ಯಕ್ಕಾಗಿ ಪತ್ನಿ ಹೊಂದಾಣಿಕೆ ಮಾಡಿಕೊಂಡು ಸಂಸಾರ ಮಾಡುತ್ತಿದ್ದಳಂತೆ. ಜೊತೆಗೆ ಪರೀದಾ ಬೇಗಂ, ವರ್ಷದ ಹಿಂದೆ ಕಲಬುರಗಿ ನಗರದಲ್ಲಿ ಸೈಟ್ ಖರೀದಿಸಿದ್ದಳಂತೆ. ಆ ಸೈಟ್ ನ್ನು ತನ್ನ ಹೆಸರಿಗೆ ಮಾಡುವಂತೆ ಎಜಾಜ್ ಅಹ್ಮದ್ ಪೀಡಿಸುತ್ತಿದ್ದನಂತೆ.

ಸದ್ಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ಎಜಾಜ್ ಅಹ್ಮದನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಅನುಮಾನಂ ಪೆದ್ದರೋಗಂ ಅಂತಾರೆ. ಆದ್ರೆ ಇದೇ ಅನುಮಾನದ ಹುತ್ತಕ್ಕೆ, ನೂರಾರು ಮಕ್ಕಳಿಗೆ ತಪ್ಪು ಮಾಡಿದಾಗ ಬುದ್ದಿ ಹೇಳಬೇಕಿದ್ದ ಪತಿಯೇ, ಪತ್ನಿಯನ್ನು ಕೊಲೆ ಮಾಡಿದ್ದು ಮಾತ್ರ ದುರಂತವೇ ಸರಿ.

ವರದಿ: ಸಂಜಯ್, ಟಿವಿ9, ಕಲಬುರಗಿ

Published On - 3:33 pm, Thu, 16 February 23

25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್