545 ಪಿಎಸ್ಐ ಹುದ್ದೆ ನೇಮಕಾತಿಯಲ್ಲಿ ಅಕ್ರಮ; ಬಿಜೆಪಿಯ ದಿವ್ಯಾ ಹಾಗರಗಿ ಪತಿ ರಾಜೇಶ್ ಹಾಗರಗಿ ಬಂಧನ

545 ಪಿಎಸ್ಐ ಹುದ್ದೆ ನೇಮಕಾತಿಯಲ್ಲಿ ಅಕ್ರಮ; ಬಿಜೆಪಿಯ ದಿವ್ಯಾ ಹಾಗರಗಿ ಪತಿ ರಾಜೇಶ್ ಹಾಗರಗಿ ಬಂಧನ
ಸಾಂದರ್ಭಿಕ ಚಿತ್ರ

ಸಿಐಡಿ ಅಧಿಕಾರಿಗಳ ತಂಡ ತನಿಖೆ ಚುರುಕುಗೊಳಿಸಿದ್ದು 1 ವಾರದಿಂದ ಕಲಬುರಗಿಯಲ್ಲೇ ವಾಸ್ತವ್ಯ ಹೂಡಿದ್ದಾರೆ. ಹೇಗೆಲ್ಲಾ ಅಕ್ರಮ ನಡೆದಿದೆ, ಯಾರೆಲ್ಲಾ ಸಹಕಾರ ನೀಡಿದ್ದಾರೆ? ಎಲ್ಲಾ ಆಯಾಮಗಳಲ್ಲೂ ಸಿಐಡಿ ಅಧಿಕಾರಿಗಳಿಂದ ತನಿಖೆ ನಡೆಯುತ್ತಿದೆ.

TV9kannada Web Team

| Edited By: Ayesha Banu

Apr 18, 2022 | 12:48 PM

ಕಲಬುರಗಿ: 545 ಪಿಎಸ್ಐ ಹುದ್ದೆ ನೇಮಕಾತಿಯಲ್ಲಿ ಅಕ್ರಮ ವಿಚಾರಕ್ಕೆ ಸಂಬಂಧಿಸಿ ಮತ್ತೊಬ್ಬ ಆರೋಪಿಯನ್ನು ಸಿಐಡಿ ತಂಡ ಬಂಧಿಸಿದೆ. ಪ್ರಕರಣ ಸಂಬಂಧ ಈವರೆಗೆ 8 ಆರೋಪಿಗಳ ಬಂಧನವಾಗಿದೆ. ಕಳೆದ ರಾತ್ರಿ ಬಿಜೆಪಿ ಮುಖಂಡೆ ದಿವ್ಯಾ ಹಾಗರಗಿ ಪತಿ ರಾಜೇಶ್ ಹಾಗರಗಿಯನ್ನು ಬಂಧಿಸಲಾಗಿದೆ. ನಿನ್ನೆ ಮಧ್ಯಾಹ್ನ ಪರೀಕ್ಷಾ ಅಕ್ರಮ ನಡೆದಿರೋ ಜ್ಞಾನಜೋತಿ ಶಾಲೆ ಮುಖ್ಯೆಸ್ಥೆ ದಿವ್ಯಾ ಹಾಗರಗಿ ಮನೆ ಮೇಲೆ ದಾಳಿ ನಡೆಸಿದ್ದ ಸಿಐಡಿ ತಂಡ ತನಿಖೆಗೆ ಅಸಹಕಾರ, ಆರೋಪಿಗಳ ನಾಪತ್ತೆಗೆ ಬೆಂಬಲ ಆರೋಪದ ಮೇಲೆ ರಾಜೇಶ್ ಹಾಗರಗಿಯನ್ನ ಬಂಧಿಸಿದ್ದಾರೆ. ದಿವ್ಯಾ ಹಾಗರಗಿ ನಾಪತ್ತೆಯಾಗಿದ್ದು ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.

1 ವಾರದಿಂದ ಕಲಬುರಗಿಯಲ್ಲೇ CID ಅಧಿಕಾರಿಗಳ ವಾಸ್ತವ್ಯ ಸಿಐಡಿ ಅಧಿಕಾರಿಗಳ ತಂಡ ತನಿಖೆ ಚುರುಕುಗೊಳಿಸಿದ್ದು 1 ವಾರದಿಂದ ಕಲಬುರಗಿಯಲ್ಲೇ ವಾಸ್ತವ್ಯ ಹೂಡಿದ್ದಾರೆ. ಹೇಗೆಲ್ಲಾ ಅಕ್ರಮ ನಡೆದಿದೆ, ಯಾರೆಲ್ಲಾ ಸಹಕಾರ ನೀಡಿದ್ದಾರೆ? ಎಲ್ಲಾ ಆಯಾಮಗಳಲ್ಲೂ ಸಿಐಡಿ ಅಧಿಕಾರಿಗಳಿಂದ ತನಿಖೆ ನಡೆಯುತ್ತಿದೆ. ಈಗಾಗಲೇ ಒಟ್ಟು 8 ಆರೋಪಿಗಳನ್ನು ಬಂಧಿಸಿದ್ದಾರೆ.

ಗೃಹ ಸಚಿವರ ಗಮನಕ್ಕೆ ಬರುತ್ತಿದ್ದಂತೆ ತನಿಖೆಗೆ ಆದೇಶಿಸಿದ್ದೇವೆ 545 ಪಿಎಸ್​ಐ ಹುದ್ದೆ ನೇಮಕಾತಿಯಲ್ಲಿ ಅಕ್ರಮ ವಿಚಾರಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಗೃಹ ಸಚಿವರ ಗಮನಕ್ಕೆ ಬರುತ್ತಿದ್ದಂತೆ ತನಿಖೆಗೆ ಆದೇಶಿಸಿದ್ದೇವೆ. ಸಿಐಡಿ ವರದಿ ಬಂದ ಬಳಿಕ ಮುಂದಿನ ಕ್ರಮಕೈಗೊಳ್ಳುತ್ತೇವೆ. ರಾಜ್ಯ ಸರ್ಕಾರ ಸೂಕ್ತ ತನಿಖೆಗೆ ಆದೇಶಿಸಿದೆ ಎಂದರು.

PSI ವಿಚಾರದಲ್ಲಿ ಹಲವಾರು ಕಂಪ್ಲೆಂಟ್ ಬಂತು. ಬಂದ ತಕ್ಷಣ ಗೃಹ ಸಚಿವರು ಸಿಐಡಿಗೆ ಕೊಟ್ಟಿದ್ದಾರೆ. ನಿಷ್ಪಕ್ಷಪಾತ ತನಿಖೆಯಾಗಬೇಕು ಎಂದು ಸಿಐಡಿಗೆ ಕೊಟ್ಟಿದ್ದಾರೆ. ಯಾರೇ ಇರ್ಲಿ, ಯಾವ ಯಾವ ಸೆಂಟರ್ ನಲ್ಲಿ ಪರೀಕ್ಷೆಯಾಗಿ, ಸಮಗ್ರವಾಗಿ ತೆನಿಖೆ ಮಾಡಲು ಆದೇಶ ಕೊಟ್ಟಿದ್ದೇನೆ. ಬೇರೆ ಸರ್ಕಾರ ಇದ್ರೆ ಮುಚ್ಚಿ ಹಾಕುವ ಪ್ರಯತ್ನ ಮಾಡುತ್ತಿದ್ದರು. ನಮ್ಮ ಗಮನಕ್ಕೆ ಬಂದ ತಕ್ಷಣ ಸಿಐಡಿಗೆ ಕೊಟ್ಟಿದ್ದೇವೆ. ಸಿಐಡಿಗೆ ಫ್ರೀ ಹ್ಯಾಂಡ್ ಕೊಟ್ಟಿದ್ದೇವೆ. ಯಾರೇ ತಪಿತಸ್ಥರಿದ್ದರು ಅವರ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದರು. ಇನ್ನು ಮತ್ತೆ ಪರೀಕ್ಷೆ ಮಾಡಿ ಎಂಬ ಒತ್ತಾಯದ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಸಿಎಂ, ಸಿಐಡಿ ವರದಿ ಬಳಿಕ ಮುಂದಿನ ಕ್ರಮ ಕೈಗೊಳ್ಳುತ್ತೇವೆ‌ ಎಂದರು.

ಜ್ಞಾನಜ್ಯೋತಿ ಇಂಗ್ಲಿಷ್ ಮೀಡಿಯಂ ಶಾಲೆಗೆ CID ಭೇಟಿ ಅಕ್ರಮ ನಡೆದ ಪರೀಕ್ಷಾ ಕೇಂದ್ರ ಜ್ಞಾನಜ್ಯೋತಿ ಇಂಗ್ಲಿಷ್ ಮೀಡಿಯಂ ಶಾಲೆಗೆ CID ಇನ್ಸ್​ಪೆಕ್ಟರ್ ದಿಲೀಪ್ ನೇತೃತ್ವದ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಒಡೆತನದ ಶಾಲೆ ಇದಾಗಿದ್ದುಕಲಬುರಗಿ ನಗರದ ಗೋಕುಲ್ ನಗರದಲ್ಲಿದೆ. ಶಾಲೆಯಲ್ಲಿ ಮಾಹಿತಿ ಸಂಗ್ರಹಿಸಿ CID ಅಧಿಕಾರಿಗಳು ತೆರಳಿದ್ದಾರೆ.

ಯಾರು ಈ ದಿವ್ಯಾ ಹಾಗರಗಿ? ದಿವ್ಯಾ ಹಾಗರಗಿ ಒಡೆತನದ ಜ್ಞಾನಜೋತಿ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಪಿಎಸ್​ಐ ಪರೀಕ್ಷೆ ಅಕ್ರಮ ನಡೆದಿತ್ತು. ದಿವ್ಯಾ ಹಾಗರಗಿಯೇ ತಮ್ಮ ಸಿಬ್ಬಂದಿ ಮೇಲೆ ಒತ್ತಡ ಹೇರಿರೋ ಆರೋಪ ಕೇಳಿ ಬಂದಿದೆ. ಪರೀಕ್ಷೆ ಮುಗಿದ ಮೇಲೆ ಒಎಂಆರ್ ಶೀಟ್​ನಲ್ಲಿ ಖಾಲಿ ಬಿಟ್ಟಿರೋ ಪ್ರಶ್ನೆಗಳಿಗೆ ಉತ್ತರ ಬರೆಸಿರೋ ಆರೋಪ ಕೂಡ ಕೇಳಿ ಬಂದಿದೆ. ಇದೇ ಕೇಂದ್ರದಲ್ಲಿ ಪರೀಕ್ಷೆ ಬರೆದ ಹತ್ತು ಜನ ಅಭ್ಯರ್ಥಿಗಳು ಪಿಎಸ್​ಐ ಆಗಿ ನೇಮಕವಾಗಿದ್ದರು. ಹತ್ತು ಅಭ್ಯರ್ಥಿಗಳು ಅಕ್ರಮವಾಗಿ ಪರೀಕ್ಷೆ ಬರೆದಿರೋ ಆರೋಪವಿದೆ. ಈ ಪೈಕಿ ಈಗಾಗಲೇ ನಾಲ್ವರು ಅಭ್ಯರ್ಥಿಗಳು ಮತ್ತು ಮೂರು ಜನ ಕೊಠಡಿ ಮೇಲ್ವಿಚಾರಕಿಯರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು ದಿವ್ಯಾ ಹಾಗರಗಿ, ಜಿಲ್ಲೆಯಲ್ಲಿ ಪ್ರಭಾವಿ ಬಿಜೆಪಿ ಮುಖಂಡೆ. ದಿಶಾ ಕಮಿಟಿಯ ಸದಸ್ಯೆ, ರಾಜ್ಯ ನರ್ಸಿಂಗ್ ಬೋರ್ಡ್ ಸದಸ್ಯೆ ಕೂಡಾ ಆಗಿದ್ದಾರೆ. ಈ ಹಿಂದೆ ಕಲಬುರಗಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆಯಾಗಿದ್ದರು. ಕಳೆದ ಫೆಬ್ರುವರಿಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಕೂಡಾ ದಿವ್ಯಾ ಹಾಗರಗಿ ಮನೆಗೆ ಹೋಗಿ ಆತಿಥ್ಯ ಸ್ವೀಕರಿಸಿದ್ದರು.

2021 ರ ಆಗಸ್ಟ್ 3 ರಂದು ರಾಜ್ಯಾದ್ಯಂತ ಪರೀಕ್ಷೆ ನಡೆದಿತ್ತು. 2022ರ ಜನವರಿ 19 ರಂದು ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಕೂಡಾ ಪ್ರಕಟ ಮಾಡಲಾಗಿತ್ತು. ನೇಮಕಾತಿಯಲ್ಲಿ ಗೋಲ್‌ಮಾಲ್‌ ಆಗಿದೆ ಎಂದು ಆರೋಪ ಕೇಳಿ ಬಂತು. ಅಕ್ರಮವೆಸಗಿ ಪರೀಕ್ಷೆಯನ್ನು ಬರೆದು ನೇಮಕಾತಿಯಾಗಿರುವ ಆರೋಪ ಕೇಳಿ ಬಂದ ಹಿನ್ನೆಲೆ ಅಭ್ಯರ್ಥಿಗಳು ದೂರು ನೀಡಿದ್ದರು. ದೂರ ಬಂದ ಹಿನ್ನೆಲೆ ಗೃಹ ಇಲಾಖೆಯಿಂದ ತನಿಖೆಯನ್ನು ಸಿಐಡಿಗೆ ನೀಡಿತ್ತು. ವೀರೇಶ್ ಅನ್ನೋ ಓರ್ವ ಅಭ್ಯರ್ಥಿ ವಿರುದ್ಧ ದೂರು ನೀಡಲಾಗಿತ್ತು. ಕೇವಲ 21 ಪ್ರಶ್ನೆಗಳಿಗೆ ಮಾತ್ರ ಉತ್ತರಿಸಿದ್ದ. ಆದ್ರೆ ಈತನಿಗೆ ಪರೀಕ್ಷೆಯಲ್ಲಿ ಬಂದ ಅಂಕಗಳು ಬರೋಬ್ಬರಿ 121 ಮಾರ್ಕ್ಸ್. ಅಂದ್ರೆ ವಿರೇಶ್, ಪರೀಕ್ಷೆಯಲ್ಲಿ ತನಗೆ ಗೊತ್ತಿಲ್ಲದೇ ಇರುವ ಪ್ರಶ್ನೆಗಳನ್ನು ಹಾಗೆ ಬಿಟ್ಟಿದ್ದ. ಪರೀಕ್ಷೆ ಮುಗಿದ ನಂತರ, ಆತನ ಉತ್ತರ ಪತ್ರಿಕೆಯಲ್ಲಿ ಬಿಟ್ಟ ಪ್ರಶ್ನೆಗಳನ್ನು ತುಂಬಲಾಗಿತ್ತು. ಕಲಬುರಗಿ ನಗರದ ಶಹಬಜಾರ್ ಜಿಡಿಎ ಲೇಔಟ್ ನಲ್ಲಿರುವ ಜ್ಞಾನಜೋತಿ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಉತ್ತರ ಪತ್ರಿಕೆಯನ್ನು ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕಿ ತಿದ್ದಿರುವ ಆರೋಪ ಕೇಳಿ ಬಂದಿತ್ತು.

ವಿರೇಶ್ ಎಂಬ ವಿದ್ಯಾರ್ಥಿ ವಶ 545 ಪಿಎಸ್ಐ ನೇಮಕಾತಿಯಲ್ಲಿ ಭಾರಿ ಅಕ್ರಮ ಹಿನ್ನಲೆ ಅಕ್ರಮದ ಬಗ್ಗೆ ಸಿಐಡಿ ಪೊಲೀಸರು ತನಿಖೆ‌ ನಡೆಸುತ್ತಿದ್ದಾರೆ. ವಿರೇಶ್ ಎಂಬ ವಿದ್ಯಾರ್ಥಿಯನ್ನ ವಶಕ್ಕೆ ಪಡೆಯಲಾಗಿದೆ. ವಿರೇಶ್ ಕಲಬುರಗಿ ಜಿಲ್ಲೆಯ ಸೇಡಂ ಪಟ್ಟಣದ ನಿವಾಸಿ. ವಿರೇಶ್ ತಂದೆ ಸೇಡಂ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವಿರೇಶ್ ಈ ಹಿಂದೆ ಮೂರು ಬಾರಿ ಪಿಎಸ್ಐ ಪರೀಕ್ಷೆ ಬರೆದಿದ್ದ. ಆದ್ರೆ ಮೂರು ಬಾರಿಯೂ ಫೇಲ್ ಆಗಿದ್ದ. ವಿರೇಶ್ ವಯಸ್ಸು ಮೀರಿ ಹೋಗುತ್ತೆ ಅನ್ನೋದಕ್ಕೆ ಅಕ್ರಮವಾಗಿ ನೇಮಕಾತಿ ಪಡೆಯಲು ಮುಂದಾಗಿದ್ದನಂತೆ. ಕಳೆದ ವರ್ಷ ಕಲಬುರಗಿಯ ಜ್ಞಾನ ಜ್ಯೋತಿ ಇಂಗ್ಲಿಷ್ ಮೀಡಿಯಂ ಶಾಲೆಯ ಕೇಂದ್ರದಲ್ಲಿ ಪರೀಕ್ಷೆ ಬರೆದಿದ್ದ ವಿರೇಶ್, 20 ಪ್ರಶ್ನೆಗಳಿಗೆ ಉತ್ತರ ಬರೆದಿದ್ದ ವಿರೇಶ್ 121 ಮಾರ್ಕ್ ಬಂದಿದ್ದ ಹಿನ್ನಲೆ ಅನುಮಾನ ವ್ಯಕ್ತವಾಗಿದೆ. ಜ್ಞಾನ ಜ್ಯೋತಿ ಇಂಗ್ಲಿಷ್ ಮೀಡಿಯಂ ಶಾಲೆ ಬಿಜೆಪಿ ಮುಖಂಡರಿಗೆ ಸೇರಿದ ಶಾಲೆ ಆಗಿದ್ದು ವಿರೇಶ್ ಜೊತೆಗೆ ಇನ್ನೂ ಹಲವು ವಿದ್ಯಾರ್ಥಿಗಳು ಅಕ್ರಮದಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.

ಸಿಐಡಿ ಅಧಿಕಾರಿಗಳು ಅಕ್ರಮದಲ್ಲಿ ಭಾಗಿಯಾಗಿರುವ ವಿದ್ಯಾರ್ಥಿಗಳ ಶೋಧ ಕಾರ್ಯ ನಡೆಸುತ್ತಿದ್ದಾರೆ. ಮಹಿಳಾ, ಪುರುಷ ಅಭ್ಯರ್ಥಿಗಳು ಕೂಡ ಅಕ್ರಮದಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಪಿಎಸ್ಐ ಅಕ್ರಮ ನೇಮಕಾತಿಯಲ್ಲಿ ಹಲವು ಪೊಲೀಸ್ ಅಧಿಕಾರಿಗಳು, ಪರೀಕ್ಷಾ ಕೊಠಡಿಯ ಮೇಲ್ವಿಚಾರಕರು ಸೇರಿದಂತೆ ಹಲವರು ಭಾಗಿಯಾಗಿರುವ ಶಂಕೆ ಇದೆ?

ಇದನ್ನೂ ಓದಿ: ಪಿಎಸ್ಐಗೆ ಆಯ್ಕೆಯಾದರೂ ಇನ್ನೂ ನೇಮಕವಾಗದ ಹಿನ್ನೆಲೆ ಸಿಎಂ ಭೇಟಿಗೆ PSIಗೆ ಆಯ್ಕೆಯಾದ ಅಭ್ಯರ್ಥಿಗಳ ಆಗಮನ

ಮಂಗಳೂರಿನ ಮೀನು ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆ: ಐವರು ಸಾವು

Follow us on

Related Stories

Most Read Stories

Click on your DTH Provider to Add TV9 Kannada