AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಾಂಕ್ ಖರ್ಗೆ ಕೊಟ್ಟಿದ್ದ 6ನೇ ಗ್ಯಾರಂಟಿ ಜಾರಿ; ಕೆಕೆಆರ್​ಡಿಬಿಯಲ್ಲಿ ನಡೆದ ಭ್ರಷ್ಟಾಚಾರ ತನಿಖೆ ಆರಂಭ

ತಮ್ಮ ಸರ್ಕಾರ ಬಂದ್ರೆ, ಕಲಬುರಗಿಯಲ್ಲಿ ನಡೆದ ಎಲ್ಲಾ ಭ್ರಷ್ಟಾಚಾರ ಪ್ರಕರಣಗಳ ತನಿಖೆ ಮಾಡಿಸುತ್ತೇವೆ, ತಪ್ಪಿತಸ್ಥರ ವಿರುದ್ದ ಕ್ರಮ ಗ್ಯಾರಂಟಿ. ಇದು ನಾನು ಕೊಡುತ್ತಿರುವ ಆರನೇ ಗ್ಯಾರಂಟಿ ಎಂದು ಈ ಹಿಂದೆ ಪ್ರಿಯಾಂಕ್ ಖರ್ಗೆ ಹೇಳಿದ್ದರು. ಇದೀಗ ಕಲಬುರಗಿಯಲ್ಲಿ ಆರನೇ ಗ್ಯಾರಂಟಿ ಜಾರಿಯಾಗಿದ್ದು, ಕೆಕೆಆರ್​ಡಿಬಿಯಲ್ಲಿ ಹಿಂದಿನ ಬಿಜೆಪಿ ಸರ್ಕಾರದಲ್ಲಿ ನಡೆದಿದೆ ಅನ್ನಲಾದ ಭ್ರಷ್ಟಾಚಾರದ ಬಗ್ಗೆ ತನಿಖೆ ಆರಂಭವಾಗಿದೆ.

ಪ್ರಿಯಾಂಕ್ ಖರ್ಗೆ ಕೊಟ್ಟಿದ್ದ 6ನೇ ಗ್ಯಾರಂಟಿ ಜಾರಿ; ಕೆಕೆಆರ್​ಡಿಬಿಯಲ್ಲಿ ನಡೆದ ಭ್ರಷ್ಟಾಚಾರ ತನಿಖೆ ಆರಂಭ
ಕಲಬುರಗಿ
ಕಿರಣ್ ಹನುಮಂತ್​ ಮಾದಾರ್
|

Updated on: Jun 14, 2023 | 11:12 AM

Share

ಕಲಬುರಗಿ: ತಮ್ಮ ಸರ್ಕಾರ ಬಂದರೆ, ಕಲಬುರಗಿಯಲ್ಲಿ ನಡೆದ ಎಲ್ಲಾ ಭ್ರಷ್ಟಾಚಾರ ಪ್ರಕರಣಗಳ ತನಿಖೆ ಮಾಡಿಸುತ್ತೇವೆ, ತಪ್ಪಿತಸ್ಥರ ವಿರುದ್ದ ಕ್ರಮ ಗ್ಯಾರಂಟಿ. ಇದು ನಾನು ಕೊಡುತ್ತಿರುವ ಆರನೇ ಗ್ಯಾರಂಟಿ ಎಂದು ಈ ಹಿಂದೆ ಸಚಿವ ಪ್ರಿಯಾಂಕ್ ಖರ್ಗೆ(Priyank Kharge) ಹೇಳಿದ್ದರು. ಅದರಂತೆ ಇದೀಗ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ದಿ ಮಂಡಳಿ(KKRDB) ಹಾಗೂ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕ್ರತಿಕ ಸಂಘದ ಅಕ್ರಮಗಳ ತನಿಖೆಯನ್ನು ಅಧಿಕಾರಿಗಳ ತಂಡ ಆರಂಭಿಸಿದೆ. ಇದರಿಂದ ಭ್ರಷ್ಟಾಚಾರಿಗಳಿಗೆ ನಡುಕ ಶುರುವಾಗಿದೆ.

ಸಾವಿರಾರು ಕೋಟಿ ಹಗರಣ ಆರೋಪ

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ದಿ ಮಂಡಳಿಗೆ ಬಿಡುಗಡೆ ಮಾಡಿ ವೆಚ್ಚ ಮಾಡಿರುವ 3000 ಕೋಟಿ ರೂ. ಅನುದಾನದಲ್ಲಿ ನಡೆದಿರುವ ವ್ಯಾಪಕ ಅಕ್ರಮಗಳು ಹಾಗೂ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಗಾಗಿ ಬಿಡುಗಡೆ ಮಾಡಿ ವೆಚ್ಚ ಮಾಡಲಾಗಿರುವ ರೂ 3.50 ಕೋಟಿ ಅನುದಾನವನ್ನು ಕೆ.ಟಿ.ಪಿ.ಪಿ ಕಾಯ್ದೆಯಡಿ ಪ್ರಕ್ರಿಯೆ ನಡೆಸದೆ ಹೆಚ್ಚುವರಿಯಾಗಿ ರೂ. 50 ಲಕ್ಷ ವೆಚ್ಚ ಮಾಡುವಲ್ಲಿ ನಡೆದ ಅಕ್ರಮ ಮತ್ತು ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕ್ರತಿಕ ಸಂಘಕ್ಕೆ ಬಿಡುಗಡೆ ಮಾಡಿ ವೆಚ್ಚ ಮಾಡಿರುವ ರೂ 300 ಕೋಟಿ ಅನುದಾನದಲ್ಲಿ ವ್ಯಾಪಕ ಅಕ್ರಮಗಳು ನಡೆದಿವೆ ಎಂದು ದೂರುಗಳು ಬಂದ ಹಿನ್ನೆಲೆ ತನಿಖೆ ನಡೆಸಲಾಗುತ್ತಿದೆ.

ಇದನ್ನೂ ಓದಿ:3 ಇಲಾಖೆ,‌ 50ಕೋಟಿ ರೂ.ಗೂ ಅಧಿಕ ಅನುದಾನ: ಕೆರೆ ಅಭಿವೃದ್ಧಿ ಹೆಸರಲ್ಲಿ ಸಿಟಿ ರವಿ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ: ತನಿಖೆಗೆ ಆಗ್ರಹಿಸಿದ ಕಾಂಗ್ರೆಸ್

ಮುಖ್ಯಮಂತ್ರಿಗಳಿಗೆ ಪತ್ರ ಬರೆದು ತನಿಖೆ ನಡೆಸುವಂತೆ ಕೋರಿದ್ದ ಸಚಿವ ಪ್ರಿಯಾಂಕ್ ಖರ್ಗೆ

ಹೌದು ಎಲ್ಲ ದೂರುಗಳು ಕುರಿತಂತೆ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ತನಿಖೆ ನಡೆಸುವಂತೆ ಕೋರಿದ್ದರು. ಹೀಗಾಗಿ ಸಿಎಂ ಸಿದ್ದರಾಮಯ್ಯ ತನಿಖೆಗೆ ಕಳೆದ ಮೇ.29 ರಂದು ತನಿಖೆಗೆ ಆದೇಶಿಸಿದ್ದರು. ಅದರಂತೆ ತನಿಖೆಗಾಗಿ ಯೋಜನಾ ಇಲಾಖೆಯ ಐವರು ಅಧಿಕಾರಿಗಳ ತಂಡವನ್ನು ಸರ್ಕಾರ ರಚಿಸಿದ್ದು, ಅಧಿಕಾರಿಗಳ ತಂಡ ಜೂ.12ರಿಂದ ಕಲಬುರಗಿಯಲ್ಲಿ ಬೀಡು ಬಿಟ್ಟು ತನಿಖೆ ನಡೆಸುತ್ತಿದೆ. ಕೆಕೆಆರ್​ಡಿಬಿಯಲ್ಲಿರುವ ದಾಖಲಾತಿಗಳು ಮತ್ತು ಕೈಗೊಂಡ ಕಾಮಗಾರಿಗಳ ಕುರಿತು ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸುತ್ತಿದೆ.

ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೆಕೆಆರ್​ಡಿಬಿಯನ್ನು ತಮ್ಮ ಆದಾಯದ ಕಾಮಧೇನು ಮಾಡಿಕೊಂಡಿದ್ದಾರೆ. ಕಾಮಗಾರಿಗಳಲ್ಲಿ, ಮತ್ತು ಟೆಂಡರ್​ಗಳಲ್ಲಿ ಸಾಕಷ್ಟು ಅಕ್ರಮ ನಡೆಸಿದ್ದಾರೆ ಎಂದು ಈ ಹಿಂದೆ ಶಾಸಕರಾಗಿದ್ದ ಪ್ರಿಯಾಂಕ್ ಖರ್ಗೆ ಮೇಲಿಂದ ಮೇಲೆ ಆರೋಪಿಸುತ್ತಲೇ ಇದ್ದರು. ತಮ್ಮ ಸರ್ಕಾರ ಜಾರಿಗೆ ಬಂದ್ರೆ, ಕೆಕೆಆರ್​ಡಿಬಿಯಲ್ಲಿ ನಡೆದ ಎಲ್ಲಾ ಭ್ರಷ್ಟಾಚಾರವನ್ನು ತನಿಖೆ ಮಾಡಿಸುತ್ತೇವೆ. ಇದು ಕಲಬುರಗಿ ಜನರಿಗೆ ನಾವು ಕೊಡುತ್ತಿರುವ 6ನೇ ಗ್ಯಾರಂಟಿ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದರು. ಇದೀಗ ಪ್ರಿಯಾಂಕ್ ಖರ್ಗೆ ಮನವಿ ಮೇರೆಗೆ ರಾಜ್ಯ ಸರ್ಕಾರದ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ:ಭ್ರಷ್ಟಾಚಾರ ರಹಿತ ಕಾರ್ಪೊರೇಷನ್ ಆಗಬೇಕು; ಬಿಬಿಎಂಪಿ ಅಧಿಕಾರಿಗಳಿಗೆ ಡಿಕೆ ಶಿವಕುಮಾರ್ ನೀಡಿದ ಖಡಕ್ ಸೂಚನೆಗಳಿವು

ಮೂರು ದಿನಗಳ ಕಾಲ ತನಿಖೆ ನಡೆಸಲಿರುವ ಅಧಿಕಾರಿಗಳ ತಂಡ, ವರದಿಯನ್ನು ಸರ್ಕಾರಕ್ಕೆ ನೀಡಲಿದೆ. ವರದಿಯಲ್ಲಿ ಯಾವೆಲ್ಲ ಅಕ್ರಮಗಳು ನಡೆದಿವೆ, ಎಷ್ಟು ಮೊತ್ತದ ಅಕ್ರಮ ನಡೆದಿದೆ ಅನ್ನೋದು ಗೊತ್ತಾಗಲಿದ್ದು, ಅಕ್ರಮದಲ್ಲಿ ಭಾಗಿಯಾಗಿರೋ ಕೆಲ ಅಧಿಕಾರಿಗಳಿಗೆ ಈಗಾಗಲೇ ನಡುಕ ಆರಂಭವಾಗಿದೆ. ಹೌದು ಅವರ ವಿರುದ್ದ ಕಠೀಣ ಕ್ರಮ ಕೈಗೊಳ್ಳಲು ಸರ್ಕಾರ ನಿರ್ಧರಿಸಿದೆಯೆಂದು ಹೇಳಲಾಗುತ್ತಿದೆ. ವರದಿ ಬಂದ ನಂತರವೇ ಅಕ್ರಮದ ಅಸಲಿಯತ್ತು ಗೊತ್ತಾಗಲಿದೆ.

ವರದಿ: ಸಂಜಯ್ ಟಿವಿ9 ಕಲಬುರಗಿ

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ