Kalaburagi DC: ಜಿಲ್ಲಾಧಿಕಾರಿಯ ಕಾರ್ಯವೈಖರಿ ವೀಕ್ಷಣೆಗೆ ಪದವಿ ವಿದ್ಯಾರ್ಥಿನಿಗೆ ಸಿಕ್ತು ಅಪೂರ್ವ ಅವಕಾಶ!

ವಿಶ್ವ ಕೌಶಲ್ಯ ದಿನಾಚರಣೆ ಅಂಗವಾಗಿ ಶಿಕ್ಷಣದ ಹೊರತಾಗಿ ನಾವು ಕೌಶಲ್ಯ ಹೇಗೆ ಬೆಳಸಿಕೊಳ್ಳಬೇಕೆಂಬ ವಿಷಯದ ಮೇಲೆ ಆನ್ ಲೈನ್ ಮೂಲಕ ನಾನು ಪ್ರಬಂಧ ಮಂಡಿಸಿದ್ದೆ. ಅದಕ್ಕೆ ಜಿಲ್ಲಾ ಮಟ್ಟದ ಪ್ರಥಮ ಸ್ಥಾನ‌ ಪಡೆದು ಇಂದು ಡಿ.ಸಿ. ಕಾರ್ಯ ವೀಕ್ಷಣೆಗೆ ಅವಕಾಶ ಸಿಕ್ಕಿದ್ದು ಹೆಮ್ಮೆ ಅನಿಸುತ್ತಿದೆ ಎಂದು ವಿದ್ಯಾರ್ಥಿನಿ ಕು. ರಕ್ಷಿತಾ ಸಂತಸ‌ ಹಂಚಿಕೊಂಡರು.

Kalaburagi DC: ಜಿಲ್ಲಾಧಿಕಾರಿಯ ಕಾರ್ಯವೈಖರಿ ವೀಕ್ಷಣೆಗೆ ಪದವಿ ವಿದ್ಯಾರ್ಥಿನಿಗೆ ಸಿಕ್ತು ಅಪೂರ್ವ ಅವಕಾಶ!
Kalaburagi DC: ಜಿಲ್ಲಾಧಿಕಾರಿಯ ಕಾರ್ಯವೈಖರಿ ವೀಕ್ಷಣೆಗೆ ಪದವಿ ವಿದ್ಯಾರ್ಥಿನಿಗೆ ಸಿಕ್ತು ಅಪೂರ್ವ ಅವಕಾಶ!
Follow us
TV9 Web
| Updated By: ಸಾಧು ಶ್ರೀನಾಥ್​

Updated on: Aug 23, 2022 | 4:11 PM

ಕಲಬುರಗಿ: ವಿಶ್ವ ಕೌಶಲ್ಯ ದಿನಾಚರಣೆ ಪ್ರಯುಕ್ತ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವು ಕಳೆದ ಜುಲೈ ಮಾಹೆಯಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಅಯೋಜಿಸಿದ “ಕೌಶಲ್ಯ ಸ್ಪೂರ್ತಿ” ಪ್ರಬಂಧ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಕುಮಾರಿ ರಕ್ಷಿತಾ ಅವರಿಗೆ ಕೌಶಲ್ಯಾಭಿವೃದ್ಧಿ ಇಲಾಖೆಯು ಮಂಗಳವಾರ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರ (Deputy Commissioner IAS Yashwanth Kurugar) ಒಂದು ದಿನದ ಕೆಲಸ ಕಾರ್ಯಗಳ ವೀಕ್ಷಣೆಗೆ ಅಪೂರ್ವ ಅವಕಾಶ ಒದಗಿಸಿತು (Kalaburagi DC).

ಜಿಲ್ಲಾಧಿಕಾರಿಗಳ ಇಡೀ ದಿನದ ಕಾರ್ಯವೈಖರಿಯನ್ನು ವೀಕ್ಷಿಸಲು ಬೆಳಿಗ್ಗೆ ಡಿ.ಸಿ. ಕಚೇರಿಗೆ ಬಂದ ಜೇವರ್ಗಿ ಮೂಲದ ಕಲಬುರಗಿಯ ವಿ.ಜಿ. ಮಹಿಳಾ ಮಹಾವಿದ್ಯಾಲಯದ ಬಿ.ಎಸ್ಸಿ. ಎರಡನೇ ಸೆಮಿಸ್ಟರ್ ವಿದ್ಯಾರ್ಥಿನಿ ರಕ್ಷಿತಾ ಮತ್ತರು ಅವರ ತಂದೆ ರಾಜಶೇಖರ ಅವರನ್ನು‌ ಹೂಗುಚ್ಛ ನೀಡಿ ಜಿಲ್ಲಾಧಿಕಾರಿ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಡಿ.ಸಿ. ಯಶವಂತ ವಿ. ಗುರುಕರ್ ಮಾತನಾಡಿ ಇಡೀ ದಿನ ನನ್ನೊಂದಿಗೆ ಇದ್ದು, ಸಭೆ-ಕೆಲಸ‌ ಕಾರ್ಯಗಳು ವೀಕ್ಷಿಸಬೇಕು. ಸಾಯಂಕಾಲ‌ 5.30 ಗಂಟೆಗೆ‌ ನನ್ನ ಕಾರಿನಲ್ಲಿಯೇ ಮನೆಗೆ ಕಳುಹಿಸುವೆ ಎಂದು ವಿದ್ಯಾರ್ಥಿನಿಗೆ ಮತ್ತು ಅವರ ತಂದೆ ವೃತ್ತಿಯಿಂದ ಕಾರ್ಪೆಂಟರ್ ಆಗಿರುವ ರಾಜಶೇಖರ ವಿಶ್ವಕರ್ಮ ಅವರಿಗೆ ಹೇಳಿದರು.

ಹೆಮ್ಮ ಅನಿಸುತ್ತಿದೆ: ವಿಶ್ವ ಕೌಶಲ್ಯ ದಿನಾಚರಣೆ ಅಂಗವಾಗಿ ಶಿಕ್ಷಣದ ಹೊರತಾಗಿ ನಾವು ಕೌಶಲ್ಯ ಹೇಗೆ ಬೆಳಸಿಕೊಳ್ಳಬೇಕೆಂಬ ವಿಷಯದ ಮೇಲೆ ಆನ್ ಲೈನ್ ಮೂಲಕ ನನ್ನ ಪ್ರಬಂಧ ಮಂಡಿಸಿದ್ದೆ. ಅದಕ್ಕೆ ಜಿಲ್ಲಾ ಮಟ್ಟದ ಪ್ರಥಮ ಸ್ಥಾನ‌ ಪಡೆದು ಇಂದು ಡಿ.ಸಿ. ಕಾರ್ಯ ವೀಕ್ಷಣೆಗೆ ಅವಕಾಶ ಸಿಕ್ಕಿದ್ದು ಹೆಮ್ಮೆ ಅನಿಸುತ್ತಿದೆ ಎಂದು ವಿದ್ಯಾರ್ಥಿನಿ ಕು. ರಕ್ಷಿತಾ ಸಂತಸ‌ ಹಂಚಿಕೊಂಡರು.

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ