AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಮಾ ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಬಾಲಕಿಯರು ನೀರುಪಾಲು

ಭೀಮಾ ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಬಾಲಕಿಯರು ನೀರುಪಾಲಾದ ಘಟನೆ ಅಫಜಲಪುರ ತಾಲೂಕಿನ ಬನ್ನಹಟ್ಟಿ ಗ್ರಾಮದಲ್ಲಿ ನಡೆದಿದೆ. ಸಧ್ಯ ಓರ್ವ ಬಾಲಕಿಯ ಶವವನ್ನು ಅಗ್ನಿಶಾಮಕ ಸಿಬ್ಬಂದಿ ಹೊರತೆಗೆದಿದ್ದು, ಮತ್ತೋರ್ವ ಬಾಲಕಿ ಶವಕ್ಕಾಗಿ ನದಿಯಲ್ಲಿ ಶೋಧಕಾರ್ಯ ಮುಂದುವರೆದಿದೆ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ.

ಭೀಮಾ ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಬಾಲಕಿಯರು ನೀರುಪಾಲು
ಮೃತ ಬಾಲಕಿಯರು
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Oct 10, 2024 | 4:54 PM

Share

ಕಲಬುರಗಿ, ಅ.10: ಅಫಜಲಪುರ ತಾಲೂಕಿನ ಬನ್ನಹಟ್ಟಿ ಗ್ರಾಮದ ಬಳಿಯಿರುವ ಭೀಮಾ ನದಿ(Bhima River)ಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಬಾಲಕಿಯರು ನೀರುಪಾಲಾದ ಘಟನೆ ನಡೆದಿದೆ. ಭೂಮಿಕಾ ದೊಡ್ಮನಿ(8) ಹಾಗೂ ಶ್ರಾವಣಿ ನಾಟೀಕಾರ(11) ನೀರುಪಾಲಾದವರು. ಇಂದು(ಅ.10) ನದಿಯಲ್ಲಿ ಬಟ್ಟೆ ತೊಳೆಯಲು ತೆರಳಿದ್ದ ಬಾಲಕಿಯರು, ಬಟ್ಟೆ ತೊಳೆದ ನಂತರ ನದಿಯಲ್ಲಿ ಈಜಾಡಲು ಮುಂದಾಗಿದ್ದರು.

ಈ ವೇಳೆ ನದಿ ನೀರಿನ ರಭಸಕ್ಕೆ ಭೂಮಿಕಾ ದೊಡ್ಡಮನಿ ಕೊಚ್ಚಿ ಹೋಗಿದ್ದಾರೆ. ಕೂಡಲೇ ಭೂಮಿಕಾ ರಕ್ಷಿಸಲು ಶ್ರಾವಣಿ‌ ಮುಂದಾಗಿದ್ದಳು. ಆದರೆ, ದುರಾದೃಷ್ಟವಶಾತ್​ ಇಬ್ಬರು ಬಾಲಕಿಯರು ಕೊಚ್ಚಿ ಹೋಗಿದ್ದಾರೆ. ಸಧ್ಯ ಚಿಂಚೋಳಿ ಗ್ರಾಮದ ಶ್ರಾವಣಿ ನಾಟೀಕಾರ್(11) ಶವವನ್ನು ಅಗ್ನಿಶಾಮಕ ಸಿಬ್ಬಂದಿ ಹೊರತೆಗೆದಿದ್ದು, ಭೂಮಿಕಾ ದೊಡ್ಮನಿ ಶವಕ್ಕಾಗಿ ನದಿಯಲ್ಲಿ ಶೋಧಕಾರ್ಯ ಮುಂದುವರೆದಿದೆ. ಈ ಕುರಿತು ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಕಲಬುರಗಿ: ಅಷ್ಟ ತೀರ್ಥದಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಬಾಲಕರು ನೀರುಪಾಲು

ವಿದ್ಯುತ್ ತಂತಿ ತುಳಿದು ಡಿ ಗ್ರೂಪ್ ನೌಕರ ಸ್ಥಳದಲ್ಲೆ ಸಾವು

ಕಲಬುರಗಿ: ವಿದ್ಯುತ್ ತಂತಿ ತುಳಿದು ಡಿ ಗ್ರೂಪ್ ನೌಕರ ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ‌ಕರಜಗಿ ಗ್ರಾಮದಲ್ಲಿ ನಡೆದಿದೆ. ಶಿವಪುತ್ರ ಹಾವಳಗಿ (32) ಮೃತ ದುದೈವಿ. ಕರಜಗಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಡಿ ಗ್ರೂಪ್ ನೌಕರನಾಗಿರುವ ಶಿವಪುತ್ರ, ಸಿಂಟೆಕ್ಸ್‌ನಲ್ಲಿ ನೀರು ಚೆಕ್ ಮಾಡಲು ತೆರಳಿದ್ದ ವೇಳೆ ವಿದ್ಯುತ್ ತಂತಿ ತುಳಿದು ದುರ್ಘಟನೆ ನಡೆದಿದೆ. ಈ ಕುರಿತು ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್