Kalaburagi News: ಒಂದೂವರೆ ವರ್ಷದ ಹಸುಗೂಸಿನ ಮೇಲೆ ಅತ್ಯಾಚಾರ, ಆಸ್ಪತ್ರೆಯಲ್ಲಿ ಪ್ರಾಣಬಿಟ್ಟ ಕಂದಮ್ಮ

ಕೆಲವೊಂದು ಘಟನೆಗಳು ಸಮಾಜದಲ್ಲಿ ಮನುಷ್ಯತ್ವ ಇದೆಯಾ ಎಂದು ಪ್ರಶ್ನಿಸುತ್ತದೆ. ಹುಟ್ಟಿದ ಮಗುವಿನಿಂದ ಹಿಡಿದು ಅಜ್ಜಿಯವರೆಗೂ ಅತ್ಯಾಚಾರ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇದೆ. ಇದೀಗ ಕಲಬುರಗಿ(Kalaburagi) ಜಿಲ್ಲೆಯ ಆಳಂದ ತಾಲ್ಲೂಕಿನ ಗ್ರಾಮವೊಂದರಲ್ಲಿ ಒಂದೂವರೆ ವರ್ಷದ ಹಸುಗೂಸಿನ ಮೇಲೆ ಅತ್ಯಾಚಾರ ನಡೆಸಲಾಗಿದೆ.

Kalaburagi News: ಒಂದೂವರೆ ವರ್ಷದ ಹಸುಗೂಸಿನ ಮೇಲೆ ಅತ್ಯಾಚಾರ, ಆಸ್ಪತ್ರೆಯಲ್ಲಿ ಪ್ರಾಣಬಿಟ್ಟ ಕಂದಮ್ಮ
ಕಲಬುರಗಿ, ಒಂದೂವರೆ ವರ್ಷದ ಹಸುಗೂಸಿನ ಮೇಲೆ ಅತ್ಯಾಚಾರ
Follow us
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: Digi Tech Desk

Updated on:Jul 25, 2024 | 4:41 PM

ಕಲಬುರಗಿ, ಜು.25: ಒಂದೂವರೆ ವರ್ಷದ ಹಸುಗೂಸಿನ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ಕಲಬುರಗಿ(Kalaburagi) ಜಿಲ್ಲೆಯ ಆಳಂದ ತಾಲ್ಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ಮಗುವಿನ ಮೇಲೆ ವಿಕೃತಿ ಮೇರೆದ ಕುರುಹುಗಳು ಪತ್ತೆಯಾಗಿದ್ದು, ಅತ್ಯಾಚಾರದ ಶಂಕೆ ವ್ಯಕ್ತವಾಗಿದೆ. ಕೂಡಲೇ ಮಗುವನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದೆ. ಈ ಕುರಿತು ನರೋಣಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಮತ್ತು ಕೊಲೆ ಪ್ರಕರಣ ದಾಖಲಾಗಿದೆ.

ಬೆಳಗಾವಿಯಲ್ಲಿ ಮನೆಗೆ ಮಳೆ ನೀರು ನುಗ್ಗಿ ಜಾರಿ ಬಿದ್ದ ವೃದ್ಧೆ, ಸ್ಥಳದಲ್ಲೇ ಸಾವು

ಬೆಳಗಾವಿ: ಮಳೆ ನೀರು ಮನೆಗೆ ನುಗ್ಗಿ ವೃದ್ದೆಯೊಬ್ಬರು ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಬೆಳಗಾವಿಯ ಅಮನ್ ನಗರದಲ್ಲಿದಲ್ಲಿ ನಡೆದಿದೆ. ಮಹಬೂಬಿ ಅದಂಸಾಹೇಬ್ ಮಕಾಂದಾರ್(79) ಮೃತ ದುರ್ದೈವಿ. ನಿರಂತರ ಮಳೆಯಿಂದ ಕಾಲೋನಿಗೆ ಡ್ರೈನೇಜ್ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಇನ್ನು ಮೃತ ಮಹಬೂಬಿ ಅವರ ಶವ ಸಾಗಿಸಲು ಕಾಲೋನಿಯ ಜನರು ಪರದಾಡಿದ್ದು, ಮೊಳಕಾಲುದ್ದ ನೀರಲ್ಲಿಯೇ ಶವ ಸಾಗಿಸಿ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ.

ಇದನ್ನೂ ಓದಿ:ರಾಮನಗರ: ಸಂಬಂಧಿಯಿಂದಲೇ 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಕೊಲೆ! ಆರೋಪಿ ಬಂಧನ

ತಡರಾತ್ರಿ ಖದೀಮನಿಂದ ಕಳ್ಳತನಕ್ಕೆ ವಿಪಲ ಯತ್ನ

ಕಲಬುರಗಿ:  ಚಿಂಚೋಳಿ ತಾಲ್ಲೂಕಿನ ಚಂದಾಪುರದ ಹುನಮಾನ್ ನಗರದಲ್ಲಿ ತಡರಾತ್ರಿ ಖದೀಮನೊಬ್ಬ ಕಳ್ಳತನಕ್ಕೆ ಯತ್ನಿಸಿದ್ದಾನೆ. ಜಿಟಿ ಜಿಟಿ ಮಳೆಯಲ್ಲಿ ಜರ್ಕಿನ್ ಹಾಕಿಕೊಂಡು ಮನೆಗೆ ಎಂಟ್ರಿ ಕೋಟ್ಟ ಖತರ್ನಾಕ್ ಕಳ್ಳ, ಕಳ್ಳತನಕ್ಕೆ ಯತ್ನಿಸಿದ್ದಾನೆ. ಸಿಸಿಟಿವಿಯಲ್ಲಿ ಕಳ್ಳ ಎಂಟ್ರಿ ಆಗಿರೋದನ್ನ ನೋಡಿದ ಬಡಾವಣೆಯ ಜನರು, ಕಳ್ಳನನ್ನ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರಿಗೆ ಮಾಹಿತಿ ಕೊಡ್ತಿದ್ದ ಹಾಗೆ ಬಡಾವಣೆಯ ಜನರ ಕೈ ಕಚ್ಚಿ ಖದೀಮ ಎಸ್ಕೇಪ್ ಆಗಿದ್ದಾನೆ. ಈ ಕುರಿತು ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:07 pm, Thu, 25 July 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ