Kalaburagi News: ಒಂದೂವರೆ ವರ್ಷದ ಹಸುಗೂಸಿನ ಮೇಲೆ ಅತ್ಯಾಚಾರ, ಆಸ್ಪತ್ರೆಯಲ್ಲಿ ಪ್ರಾಣಬಿಟ್ಟ ಕಂದಮ್ಮ

ಕೆಲವೊಂದು ಘಟನೆಗಳು ಸಮಾಜದಲ್ಲಿ ಮನುಷ್ಯತ್ವ ಇದೆಯಾ ಎಂದು ಪ್ರಶ್ನಿಸುತ್ತದೆ. ಹುಟ್ಟಿದ ಮಗುವಿನಿಂದ ಹಿಡಿದು ಅಜ್ಜಿಯವರೆಗೂ ಅತ್ಯಾಚಾರ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇದೆ. ಇದೀಗ ಕಲಬುರಗಿ(Kalaburagi) ಜಿಲ್ಲೆಯ ಆಳಂದ ತಾಲ್ಲೂಕಿನ ಗ್ರಾಮವೊಂದರಲ್ಲಿ ಒಂದೂವರೆ ವರ್ಷದ ಹಸುಗೂಸಿನ ಮೇಲೆ ಅತ್ಯಾಚಾರ ನಡೆಸಲಾಗಿದೆ.

Kalaburagi News: ಒಂದೂವರೆ ವರ್ಷದ ಹಸುಗೂಸಿನ ಮೇಲೆ ಅತ್ಯಾಚಾರ, ಆಸ್ಪತ್ರೆಯಲ್ಲಿ ಪ್ರಾಣಬಿಟ್ಟ ಕಂದಮ್ಮ
ಕಲಬುರಗಿ, ಒಂದೂವರೆ ವರ್ಷದ ಹಸುಗೂಸಿನ ಮೇಲೆ ಅತ್ಯಾಚಾರ
Edited By:

Updated on: Jul 25, 2024 | 4:41 PM

ಕಲಬುರಗಿ, ಜು.25: ಒಂದೂವರೆ ವರ್ಷದ ಹಸುಗೂಸಿನ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ಕಲಬುರಗಿ(Kalaburagi) ಜಿಲ್ಲೆಯ ಆಳಂದ ತಾಲ್ಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ಮಗುವಿನ ಮೇಲೆ ವಿಕೃತಿ ಮೇರೆದ ಕುರುಹುಗಳು ಪತ್ತೆಯಾಗಿದ್ದು, ಅತ್ಯಾಚಾರದ ಶಂಕೆ ವ್ಯಕ್ತವಾಗಿದೆ. ಕೂಡಲೇ ಮಗುವನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದೆ. ಈ ಕುರಿತು ನರೋಣಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಮತ್ತು ಕೊಲೆ ಪ್ರಕರಣ ದಾಖಲಾಗಿದೆ.

ಬೆಳಗಾವಿಯಲ್ಲಿ ಮನೆಗೆ ಮಳೆ ನೀರು ನುಗ್ಗಿ ಜಾರಿ ಬಿದ್ದ ವೃದ್ಧೆ, ಸ್ಥಳದಲ್ಲೇ ಸಾವು

ಬೆಳಗಾವಿ: ಮಳೆ ನೀರು ಮನೆಗೆ ನುಗ್ಗಿ ವೃದ್ದೆಯೊಬ್ಬರು ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಬೆಳಗಾವಿಯ ಅಮನ್ ನಗರದಲ್ಲಿದಲ್ಲಿ ನಡೆದಿದೆ. ಮಹಬೂಬಿ ಅದಂಸಾಹೇಬ್ ಮಕಾಂದಾರ್(79) ಮೃತ ದುರ್ದೈವಿ. ನಿರಂತರ ಮಳೆಯಿಂದ ಕಾಲೋನಿಗೆ ಡ್ರೈನೇಜ್ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಇನ್ನು ಮೃತ ಮಹಬೂಬಿ ಅವರ ಶವ ಸಾಗಿಸಲು ಕಾಲೋನಿಯ ಜನರು ಪರದಾಡಿದ್ದು, ಮೊಳಕಾಲುದ್ದ ನೀರಲ್ಲಿಯೇ ಶವ ಸಾಗಿಸಿ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ.

ಇದನ್ನೂ ಓದಿ:ರಾಮನಗರ: ಸಂಬಂಧಿಯಿಂದಲೇ 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಕೊಲೆ! ಆರೋಪಿ ಬಂಧನ

ತಡರಾತ್ರಿ ಖದೀಮನಿಂದ ಕಳ್ಳತನಕ್ಕೆ ವಿಪಲ ಯತ್ನ

ಕಲಬುರಗಿ:  ಚಿಂಚೋಳಿ ತಾಲ್ಲೂಕಿನ ಚಂದಾಪುರದ ಹುನಮಾನ್ ನಗರದಲ್ಲಿ ತಡರಾತ್ರಿ ಖದೀಮನೊಬ್ಬ ಕಳ್ಳತನಕ್ಕೆ ಯತ್ನಿಸಿದ್ದಾನೆ. ಜಿಟಿ ಜಿಟಿ ಮಳೆಯಲ್ಲಿ ಜರ್ಕಿನ್ ಹಾಕಿಕೊಂಡು ಮನೆಗೆ ಎಂಟ್ರಿ ಕೋಟ್ಟ ಖತರ್ನಾಕ್ ಕಳ್ಳ, ಕಳ್ಳತನಕ್ಕೆ ಯತ್ನಿಸಿದ್ದಾನೆ. ಸಿಸಿಟಿವಿಯಲ್ಲಿ ಕಳ್ಳ ಎಂಟ್ರಿ ಆಗಿರೋದನ್ನ ನೋಡಿದ ಬಡಾವಣೆಯ ಜನರು, ಕಳ್ಳನನ್ನ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರಿಗೆ ಮಾಹಿತಿ ಕೊಡ್ತಿದ್ದ ಹಾಗೆ ಬಡಾವಣೆಯ ಜನರ ಕೈ ಕಚ್ಚಿ ಖದೀಮ ಎಸ್ಕೇಪ್ ಆಗಿದ್ದಾನೆ. ಈ ಕುರಿತು
ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:07 pm, Thu, 25 July 24

Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
Follow Us