AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಕಲ್ಲಿನ ಪರ್ಸಿಗಳನ್ನ ತುಂಬಿದ್ದ ಲಾರಿ ಪಲ್ಟಿ; 13 ಜನರಿಗೆ ಗಾಯ

ಪ್ರತ್ಯೇಕ ಅಪಘಾತ: ಕಲಬುರಗಿ ಜಿಲ್ಲೆಯ ಚಿಂಚೋಳಿ(Chincholi) ತಾಲ್ಲೂಕಿನ ಮಿರಿಯಾಣ ಗ್ರಾಮದ ಬಳಿ ಕಲ್ಲಿನ ಪರ್ಸಿಗಳನ್ನ(ನೆಲಹಾಸು) ತುಂಬಿದ್ದ ಲಾರಿ ಪಲ್ಟಿಯಾಗಿದ್ದು, 13 ಜನರಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ. ಇತ್ತ ಹುಬ್ಬಳ್ಳಿ ಸಮೀಪರ ಕಿರೇಸೂರ ಬಳಿ ಓಮಿನಿ ಹಾಗೂ ಲಾರಿ ನಡುವೆ ಭೀಕರ ಅಪಘಾತವಾಗಿದ್ದು, ಓರ್ವ ಸಾವನ್ನಪ್ಪಿದರೆ, ಐದು ಜನರಿಗೆ ಗಾಯ‌ವಾದ ಘಟನೆ ನಡೆದಿದೆ.

ಕಲಬುರಗಿ: ಕಲ್ಲಿನ ಪರ್ಸಿಗಳನ್ನ ತುಂಬಿದ್ದ ಲಾರಿ ಪಲ್ಟಿ; 13 ಜನರಿಗೆ ಗಾಯ
ಕಲ್ಲಿನ ಪರ್ಸಿಗಳನ್ನ ತುಂಬಿದ್ದ ಲಾರಿ ಪಲ್ಟಿ; 13 ಜನರಿಗೆ ಗಾಯ
ದತ್ತಾತ್ರೇಯ ಪಾಟೀಲ್​
| Edited By: ಕಿರಣ್ ಹನುಮಂತ್​ ಮಾದಾರ್|

Updated on: Aug 23, 2024 | 10:34 PM

Share

ಕಲಬುರಗಿ, ಆ.23: ಕಲ್ಲಿನ ಪರ್ಸಿಗಳನ್ನ(ನೆಲಹಾಸು) ತುಂಬಿದ್ದ ಲಾರಿ ಪಲ್ಟಿಯಾಗಿದ್ದು, 13 ಜನರಿಗೆ ಗಂಭೀರ ಗಾಯವಾದ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ(Chincholi) ತಾಲ್ಲೂಕಿನ ಮಿರಿಯಾಣ ಗ್ರಾಮದ ಬಳಿ ನಡೆದಿದೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಗಂಭೀರ ಗಾಯಗೊಂಡವರನ್ನ ಕಲಬುರಗಿಗೆ ರವಾನೆ ಮಾಡಲಾಗಿದೆ. ಕೃಷ್ಣಾಪುರ ಗ್ರಾಮದಿಂದ ತೆಲಂಗಾಣಕ್ಕೆ ಹೊರಟಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಪಲ್ಟಿಯಾಗಿದೆ. ಈ ಕುರಿತು ಮಿರಿಯಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಓಮಿನಿ, ಲಾರಿ ನಡುವೆ ಭೀಕರ ಅಪಘಾತ; ಓರ್ವ ಸಾವು, ಐವರಿಗೆ ಗಾಯ‌

ಹುಬ್ಬಳ್ಳಿ : ಓಮಿನಿ ಹಾಗೂ ಲಾರಿ ನಡುವೆ ಭೀಕರ ಅಪಘಾತವಾಗಿದ್ದು, ಓರ್ವ ಸಾವನ್ನಪ್ಪಿದರೆ, ಐದು ಜನರಿಗೆ ಗಾಯ‌ವಾದ ಘಟನೆ ಹುಬ್ಬಳ್ಳಿ ಸಮೀಪರ ಕಿರೇಸೂರ ಬಳಿ ನಡೆದಿದೆ. ಓಮಿನಿ ಟೈರ್ ಸ್ಪೋಟಗೊಂಡು ಮುಂದೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಗಾಯಾಳುಗಳಿಗೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:ಚಿಕ್ಕಮಗಳೂರು: ಓವರ್ ಟೇಕ್ ಮಾಡಲು ಹೋಗಿ ಅಪಘಾತ, ಎದೆ ಝಲ್ ಅನಿಸುವ ಡೆಡ್ಲಿ ಆಕ್ಸಿಡೆಂಟ್ ವಿಡಿಯೋ ಇದೆ

ಲಾರಿ ಡಿಕ್ಕಿ; ಬಾಲಕ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಉತ್ತರ ತಾಲೂಕಿನ ಮಾಕಳಿ ಬಳಿ ರಸ್ತೆಯಲ್ಲಿ ನಡೆದು ಬರುತ್ತಿದ್ದ ಬಾಲಕನಿಗೆ ಲಾರಿ ಡಿಕ್ಕಿಯಾಗಿದ್ದು, ಪಶ್ಚಿಮ ಬಂಗಾಳ ಮೂಲದ ಬಾಲಕ ಶಕೀಲ್(11) ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಹಾರೋಕ್ಯಾತನಹಳ್ಳಿಯಲ್ಲಿ ಕೂಲಿ ಕೆಲಸ ಮಾಡಿಕೊಂಡು ಮೃತನ ಕುಟುಂಬ ಜೀವನ ಸಾಗಿಸುತ್ತಿದ್ದರು. ಅಪಘಾತದ ಬಳಿಕ ಚಾಲಕ ಸ್ಥಳದಲ್ಲೇ ಲಾರಿ ನಿಲ್ಲಿಸಿ ಪರಾರಿಯಾಗಿದ್ದು, ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!