ಕಲಬುರಗಿ, ಆ.23: ಕಲ್ಲಿನ ಪರ್ಸಿಗಳನ್ನ(ನೆಲಹಾಸು) ತುಂಬಿದ್ದ ಲಾರಿ ಪಲ್ಟಿಯಾಗಿದ್ದು, 13 ಜನರಿಗೆ ಗಂಭೀರ ಗಾಯವಾದ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ(Chincholi) ತಾಲ್ಲೂಕಿನ ಮಿರಿಯಾಣ ಗ್ರಾಮದ ಬಳಿ ನಡೆದಿದೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಗಂಭೀರ ಗಾಯಗೊಂಡವರನ್ನ ಕಲಬುರಗಿಗೆ ರವಾನೆ ಮಾಡಲಾಗಿದೆ. ಕೃಷ್ಣಾಪುರ ಗ್ರಾಮದಿಂದ ತೆಲಂಗಾಣಕ್ಕೆ ಹೊರಟಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಪಲ್ಟಿಯಾಗಿದೆ. ಈ ಕುರಿತು ಮಿರಿಯಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹುಬ್ಬಳ್ಳಿ : ಓಮಿನಿ ಹಾಗೂ ಲಾರಿ ನಡುವೆ ಭೀಕರ ಅಪಘಾತವಾಗಿದ್ದು, ಓರ್ವ ಸಾವನ್ನಪ್ಪಿದರೆ, ಐದು ಜನರಿಗೆ ಗಾಯವಾದ ಘಟನೆ ಹುಬ್ಬಳ್ಳಿ ಸಮೀಪರ ಕಿರೇಸೂರ ಬಳಿ ನಡೆದಿದೆ. ಓಮಿನಿ ಟೈರ್ ಸ್ಪೋಟಗೊಂಡು ಮುಂದೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಗಾಯಾಳುಗಳಿಗೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,
ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ:ಚಿಕ್ಕಮಗಳೂರು: ಓವರ್ ಟೇಕ್ ಮಾಡಲು ಹೋಗಿ ಅಪಘಾತ, ಎದೆ ಝಲ್ ಅನಿಸುವ ಡೆಡ್ಲಿ ಆಕ್ಸಿಡೆಂಟ್ ವಿಡಿಯೋ ಇದೆ
ಬೆಂಗಳೂರು: ಉತ್ತರ ತಾಲೂಕಿನ ಮಾಕಳಿ ಬಳಿ ರಸ್ತೆಯಲ್ಲಿ ನಡೆದು ಬರುತ್ತಿದ್ದ ಬಾಲಕನಿಗೆ ಲಾರಿ ಡಿಕ್ಕಿಯಾಗಿದ್ದು, ಪಶ್ಚಿಮ ಬಂಗಾಳ ಮೂಲದ ಬಾಲಕ ಶಕೀಲ್(11) ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಹಾರೋಕ್ಯಾತನಹಳ್ಳಿಯಲ್ಲಿ ಕೂಲಿ ಕೆಲಸ ಮಾಡಿಕೊಂಡು ಮೃತನ ಕುಟುಂಬ ಜೀವನ ಸಾಗಿಸುತ್ತಿದ್ದರು. ಅಪಘಾತದ ಬಳಿಕ ಚಾಲಕ ಸ್ಥಳದಲ್ಲೇ ಲಾರಿ ನಿಲ್ಲಿಸಿ ಪರಾರಿಯಾಗಿದ್ದು, ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ