ಕಲಬುರಗಿ: ಬ್ಯಾಂಕ್​ ನೋಟಿಸ್​​ಗೆ ಹೆದರಿ ಪೆಟ್ರೋಲ್​ ಸುರಿದುಕೊಂಡು ರೈತ ಆತ್ಮಹತ್ಯೆ

ಕಲಬುರಗಿ ಜಿಲ್ಲೆಯ ಚಿಂಚೋಳಿ(Chincholi) ತಾಲೂಕಿನ ಪೊತಂಗಲ ಗ್ರಾಮದಲ್ಲಿ ಬ್ಯಾಂಕ್​ ನೋಟಿಸ್​​ಗೆ ಹೆದರಿ ಪೆಟ್ರೋಲ್​ ಸುರಿದುಕೊಂಡು ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪಾಂಡಪ್ಪ ತಿಪ್ಪಣ್ಣ ಕೊರುವನ್ (45) ಆತ್ಮಹತ್ಯೆ ಮಾಡಿಕೊಂಡ ರೈತ. ಈ ಕುರಿತು ಸುಲೇಪೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕಲಬುರಗಿ: ಬ್ಯಾಂಕ್​ ನೋಟಿಸ್​​ಗೆ ಹೆದರಿ ಪೆಟ್ರೋಲ್​ ಸುರಿದುಕೊಂಡು ರೈತ ಆತ್ಮಹತ್ಯೆ
ಪಾಂಡಪ್ಪ ತಿಪ್ಪಣ್ಣ ಕೊರುವನ್ (45) ಆತ್ಮಹತ್ಯೆ ಮಾಡಿಕೊಂಡ ರೈತ
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: ಕಿರಣ್ ಹನುಮಂತ್​ ಮಾದಾರ್

Updated on:Sep 27, 2024 | 3:43 PM

ಕಲಬುರಗಿ, ಸೆ.27: ಬ್ಯಾಂಕ್​ ನೋಟಿಸ್​​ಗೆ ಹೆದರಿ ಪೆಟ್ರೋಲ್​ ಸುರಿದುಕೊಂಡು ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ(Chincholi) ತಾಲೂಕಿನ ಪೊತಂಗಲ ಗ್ರಾಮದಲ್ಲಿ ನಿನ್ನೆ(ಸೆ.26) ನಡೆದಿದೆ. ಪಾಂಡಪ್ಪ ತಿಪ್ಪಣ್ಣ ಕೊರುವನ್ (45) ಆತ್ಮಹತ್ಯೆ ಮಾಡಿಕೊಂಡ ರೈತ. ಮೃತ ವ್ಯಕ್ತಿ ತೊಗರಿ ಬೆಳೆಯಲು ಬ್ಯಾಂಕ್​ ಹಾಗೂ ಖಾಸಗಿಯಾಗಿ ಲಕ್ಷಾಂತರ ರೂ.ಸಾಲ ಮಾಡಿದ್ದ. ಆದರೆ, ದುರಾದೃಷ್ಟವಶಾತ್​ ನಿರಂತರವಾಗಿ ಸುರಿದ ಮಳೆಗೆ ಜಮೀನಿನಲ್ಲಿ ಬೆಳೆದಿದ್ದ ತೊಗರಿ ನಾಶವಾಗಿತ್ತು. ಇತ್ತ ಬ್ಯಾಂಕ್​ ಅಧಿಕಾರಿಗಳ ಸಾಲದ ಕಿರುಕುಳಕ್ಕೆ ಹೆದರಿ ತಿಪ್ಪಣ್ಣ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಕುರಿತು ಸುಲೇಪೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬೆಳೆ ನಾಶವಾಗಿದಕ್ಕೆ ಮನನೊಂದು ರೈತ ವಿಷಸೇವಿಸಿ ಆತ್ಮಹತ್ಯೆ

ರಾಯಚೂರು: ತಾಲೂಕಿನ ಚಿಕ್ಕಸೂಗೂರು ಗ್ರಾಮದಲ್ಲಿ ಕಷ್ಟಪಟ್ಟು ಬೆಳೆದಿದ್ದ ಹತ್ತಿ ಬೆಳೆ ನಾಶವಾಗಿದ್ದಕ್ಕೆ ಮನನೊಂದ ರೈತ ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮಹಾದೇವ ಸಾಗರ್(42) ಮೃತ ರೈತ. ನಿರಂತರ ಮಳೆಯಿಂದ ತೇವಾಂಶ ಹೆಚ್ಚಾಗಿ 4 ಎಕರೆ ಹತ್ತಿ ಬೆಳೆ ಹಾನಿಯಾಗಿದೆ. ಈ ಹಿನ್ನಲೆ ಮನೆಯಿಂದ ಜಮೀನಿಗೆ ಹೋಗುವುದಾಗಿ ಹೇಳಿ ಹೋಗಿ ರೈತ ವಿಷಸೇವನೆ ಮಾಡಿದ್ದ. ಕೂಡಲೇ ಆತನನ್ನು ರಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ದುರಾದೃಷ್ಟವಶಾತ್​ ಚಿಕಿತ್ಸೆ ಫಲಿಸದೇ ರೈತ ಮಹಾದೇವ ಕೊನೆಯುಸಿರೆಳೆದಿದ್ದಾರೆ. ಈ ಘಟನೆ ರಾಯಚೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇದನ್ನೂ ಓದಿ:ಬೆಂಗಳೂರಿನ ಮಹಾಲಕ್ಷ್ಮೀಯನ್ನು 50ಕ್ಕೂ ಹೆಚ್ಚು ಪೀಸ್ ಪೀಸ್ ಮಾಡಿದ್ದ ಹಂತಕ ಆತ್ಮಹತ್ಯೆ

ಮಣ್ಣಿನಡಿ ಸಿಲುಕಿ ಓರ್ವ ಕಾರ್ಮಿಕ ಸಾವು, ಇಬ್ಬರಿಗೆ ಗಾಯ

ಹಾಸನ: ಜಿಲ್ಲೆಯ ಬೇಲೂರು ತಾಲೂಕಿನ ಹನಿಕೆ ಬಳಿ ಮಣ್ಣಿನಡಿ ಸಿಲುಕಿ ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಇಬ್ಬರಿಗೆ ಗಾಯವಾದ ಘಟನೆ ನಡೆದಿದೆ. ಹೊಳೆನರಸೀಪುರ ಮೂಲದ ದರ್ಶನ್‌ಕುಮಾರ್(29) ಮೃತ ವ್ಯಕ್ತಿ. ಕೆರೆ ಕೋಡಿ ದುರಸ್ತಿ ವೇಳೆ ಈ ದುರ್ಘಟನೆ ನಡೆದಿದ್ದು, ಗಾಯಗೊಂಡ ಲೋಕಪ್ಪ ಹಾಗೂ ವಸಂತ್‌ಕುಮಾರ್​​ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಕುರಿತು ಬೇಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:42 pm, Fri, 27 September 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ