ಕಲಬುರಗಿ ಜಿಲ್ಲೆಯಲ್ಲಿ ನಿರಂತರ ಮಳೆಯಿಂದ ಜನಜೀವನ ಅಸ್ತವ್ಯಸ್ಥ; ಕಲಬುರಗಿ-ಸೇಡಂ-ಹೈದ್ರಾಬಾದ್ ರಸ್ತೆ ಸಂಪರ್ಕ ಕಡಿತ

ಬಿಸಿಲನಾಡು ಕಲಬುರಗಿ ಜಿಲ್ಲೆಯಲ್ಲಿ ಜೂನ್ ಮತ್ತು ಜುಲೈ ತಿಂಗಳ ಮೊದಲ 15 ದಿನಗಳು ಮಳೆಯಾಗಿರಲಿಲ್ಲ. ಹೀಗಾಗಿ ಕಲಬುರಗಿಯನ್ನ ಬರಪೀಡಿತ ಜಿಲ್ಲೆಯೆಂದು ಘೋಷಣೆ ಮಾಡಬೇಕೆನ್ನುವ ಆಗ್ರಹ ಹೆಚ್ಚಾಗಿತ್ತು. ಆದರೀಗ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಬಾರಿ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ.

ಕಲಬುರಗಿ ಜಿಲ್ಲೆಯಲ್ಲಿ ನಿರಂತರ ಮಳೆಯಿಂದ ಜನಜೀವನ ಅಸ್ತವ್ಯಸ್ಥ; ಕಲಬುರಗಿ-ಸೇಡಂ-ಹೈದ್ರಾಬಾದ್ ರಸ್ತೆ ಸಂಪರ್ಕ ಕಡಿತ
ಕಲಬುರಗಿ
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 21, 2023 | 7:44 AM

ಕಲಬುರಗಿ: ಬಿಸಿಲನಾಡು ಕಲಬುರಗಿ(Kalaburagi) ಜಿಲ್ಲೆಯಲ್ಲಿ ಜೂನ್ ಮತ್ತು ಜುಲೈ ತಿಂಗಳ ಮೊದಲ 15 ದಿನಗಳು ಮಳೆ(Rain)ಯಾಗಿರಲಿಲ್ಲ. ಹೀಗಾಗಿ ಕಲಬುರಗಿಯನ್ನ ಬರಪೀಡಿತ ಜಿಲ್ಲೆಯೆಂದು ಘೋಷಣೆ ಮಾಡಬೇಕೆನ್ನುವ ಆಗ್ರಹ ಹೆಚ್ಚಾಗಿತ್ತು. ರೈತರು ಬಿತ್ತನೆ ಮಾಡಲಿಕ್ಕಾಗದೇ ಪರದಾಡಿದ್ದರು. ಕಬ್ಬು ಸೇರಿದಂತೆ ಅನೇಕ ಬೆಳೆಗಳು ಒಣಗುತ್ತಿದ್ದವು. ಆದ್ರೆ, ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಬಾರಿ ಮಳೆಯಾಗುತ್ತಿದೆ. ಅದರಲ್ಲೂ ಕಳೆದ ರಾತ್ರಿಯಿಂದ ಜಿಲ್ಲೆಯ ಬಹುತೇಕ ಕಡೆ ಬಾರಿ ಮಳೆಯಾಗುತ್ತಿದ್ದು, ನಿರಂತರ ಮಳೆಯಿಂದ ಜಿಲ್ಲೆಯ ಜನಜೀವನ ಅಸ್ತವ್ಯಸ್ತವಾಗಿದೆ.

ಕಲಬುರಗಿ-ಸೇಡಂ-ಹೈದ್ರಾಬಾದ್ ರಸ್ತೆ ಸಂಪರ್ಕ ಕಡಿತ

ಜಿಲ್ಲೆಯಾದ್ಯಂತ ಭರ್ಜರಿ ಮಳೆ ಆಗುತ್ತಿರುವ ಹಿನ್ನೆಲೆ ಹಲವೆಡೆ ಅವಾಂತರಗಳಾಗಿವೆ. ಭಾರಿ ಮಳೆಯಿಂದ ಕಾಗಿನಾ ನದಿ ಉಕ್ಕಿ ಹರಿಯುತ್ತಿದ್ದು, ಮಳಖೇಡ ಸೇತುವೆ ಸಂಪೂರ್ಣ ಜಲಾವೃತವಾಗಿದೆ. ಈ ಸಂಬಂಧ ಕಲಬುರಗಿ-ಸೇಡಂ-ಹೈದ್ರಾಬಾದ್ ರಸ್ತೆ ಸಂಪರ್ಕ ಕಡಿತವಾಗಿದೆ. ಇನ್ನು ಸೇಡಂ ತಾಲೂಕಿನ ಕಾಗಿನಾ ನದಿಗೆ ಅಡ್ಡಲಾಗಿ ಮಳಖೇಡ ಸೇತುವೆಯನ್ನ ನಿರ್ಮಾಣ ಮಾಡಲಾಗಿತ್ತು. ಇದೀಗ ಸೇತುವೆ ನೀರಿನಿಂದ ತುಂಬಿದ್ದು, ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಬೆಳಗ್ಗೆ ನಾಲ್ಕು ಗಂಟೆಯಿಂದ ಸಂಚಾರ ಸ್ಥಗಿತಗೊಳಿಸಿದ್ದಾರೆ.

ಇದನ್ನೂ ಓದಿ:Karnataka Rain: ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಬಾರಿ ಮಳೆ; ಎಲ್ಲೆಲ್ಲಿ, ಏನು ಹಾನಿ? ಇಲ್ಲಿದೆ ಮಾಹಿತಿ

ಮುಲ್ಲಾಮಾರಿ ಜಲಾಶಯದಿಂದ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ನಾಗರಾಳ ಬಳಿಯಿರುವ ಮುಲ್ಲಾಮಾರಿ ಜಲಾಶಯದಿಂದ 2 ಸಾವಿರ ಕ್ಯೂಸೆಕ್​ ನೀರನ್ನು ಬಿಡುಗಡೆ ಮಾಡಿದ್ದು, ಇದರಿಂದ ಕೆಳ ಬಾಗದಲ್ಲಿರುವ ಗ್ರಾಮಗಳಿಗೆ ಸಂಚಾರ ಸ್ಥಗಿತವಾಗುವ ಆತಂಕ ಎದುರಾಗಿದೆ. ಜೊತೆಗೆ ಚಿಂಚೋಳಿ ತಾಲೂಕಿನ ಗರಗಪಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಬ್ರಿಡ್ಜ್ ಕಂ ಬ್ಯಾರೇಜ್ ಮೇಲೆ ನೀರು ಹರಿಯುತ್ತಿರೋದರಿಂದ ರಸ್ತೆ ಸಂಚಾರ ಸ್ಥಗಿತ ಮಾಡಲಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ