ಕಲಬುರಗಿ: ಬಿಸಿಲನಾಡು ಕಲಬುರಗಿ(Kalaburagi) ಜಿಲ್ಲೆಯಲ್ಲಿ ಜೂನ್ ಮತ್ತು ಜುಲೈ ತಿಂಗಳ ಮೊದಲ 15 ದಿನಗಳು ಮಳೆ(Rain)ಯಾಗಿರಲಿಲ್ಲ. ಹೀಗಾಗಿ ಕಲಬುರಗಿಯನ್ನ ಬರಪೀಡಿತ ಜಿಲ್ಲೆಯೆಂದು ಘೋಷಣೆ ಮಾಡಬೇಕೆನ್ನುವ ಆಗ್ರಹ ಹೆಚ್ಚಾಗಿತ್ತು. ರೈತರು ಬಿತ್ತನೆ ಮಾಡಲಿಕ್ಕಾಗದೇ ಪರದಾಡಿದ್ದರು. ಕಬ್ಬು ಸೇರಿದಂತೆ ಅನೇಕ ಬೆಳೆಗಳು ಒಣಗುತ್ತಿದ್ದವು. ಆದ್ರೆ, ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಬಾರಿ ಮಳೆಯಾಗುತ್ತಿದೆ. ಅದರಲ್ಲೂ ಕಳೆದ ರಾತ್ರಿಯಿಂದ ಜಿಲ್ಲೆಯ ಬಹುತೇಕ ಕಡೆ ಬಾರಿ ಮಳೆಯಾಗುತ್ತಿದ್ದು, ನಿರಂತರ ಮಳೆಯಿಂದ ಜಿಲ್ಲೆಯ ಜನಜೀವನ ಅಸ್ತವ್ಯಸ್ತವಾಗಿದೆ.
ಜಿಲ್ಲೆಯಾದ್ಯಂತ ಭರ್ಜರಿ ಮಳೆ ಆಗುತ್ತಿರುವ ಹಿನ್ನೆಲೆ ಹಲವೆಡೆ ಅವಾಂತರಗಳಾಗಿವೆ. ಭಾರಿ ಮಳೆಯಿಂದ ಕಾಗಿನಾ ನದಿ ಉಕ್ಕಿ ಹರಿಯುತ್ತಿದ್ದು, ಮಳಖೇಡ ಸೇತುವೆ ಸಂಪೂರ್ಣ ಜಲಾವೃತವಾಗಿದೆ. ಈ ಸಂಬಂಧ ಕಲಬುರಗಿ-ಸೇಡಂ-ಹೈದ್ರಾಬಾದ್ ರಸ್ತೆ ಸಂಪರ್ಕ ಕಡಿತವಾಗಿದೆ. ಇನ್ನು ಸೇಡಂ ತಾಲೂಕಿನ ಕಾಗಿನಾ ನದಿಗೆ ಅಡ್ಡಲಾಗಿ ಮಳಖೇಡ ಸೇತುವೆಯನ್ನ ನಿರ್ಮಾಣ ಮಾಡಲಾಗಿತ್ತು. ಇದೀಗ ಸೇತುವೆ ನೀರಿನಿಂದ ತುಂಬಿದ್ದು, ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಬೆಳಗ್ಗೆ ನಾಲ್ಕು ಗಂಟೆಯಿಂದ ಸಂಚಾರ ಸ್ಥಗಿತಗೊಳಿಸಿದ್ದಾರೆ.
ಇದನ್ನೂ ಓದಿ:Karnataka Rain: ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಬಾರಿ ಮಳೆ; ಎಲ್ಲೆಲ್ಲಿ, ಏನು ಹಾನಿ? ಇಲ್ಲಿದೆ ಮಾಹಿತಿ
ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ನಾಗರಾಳ ಬಳಿಯಿರುವ ಮುಲ್ಲಾಮಾರಿ ಜಲಾಶಯದಿಂದ 2 ಸಾವಿರ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಿದ್ದು, ಇದರಿಂದ ಕೆಳ ಬಾಗದಲ್ಲಿರುವ ಗ್ರಾಮಗಳಿಗೆ ಸಂಚಾರ ಸ್ಥಗಿತವಾಗುವ ಆತಂಕ ಎದುರಾಗಿದೆ. ಜೊತೆಗೆ ಚಿಂಚೋಳಿ ತಾಲೂಕಿನ ಗರಗಪಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಬ್ರಿಡ್ಜ್ ಕಂ ಬ್ಯಾರೇಜ್ ಮೇಲೆ ನೀರು ಹರಿಯುತ್ತಿರೋದರಿಂದ ರಸ್ತೆ ಸಂಚಾರ ಸ್ಥಗಿತ ಮಾಡಲಾಗಿದೆ.
ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ