ಕಲಬುರಗಿ ನಗರದಲ್ಲಿ ಹೆಚ್ಚಾದ ಬೈಕ್ ಕಳ್ಳತನ ಪ್ರಕರಣಗಳು; ಲಕ್ಷಾಂತರ ಮೌಲ್ಯದ ಬೈಕ್ ಕಳೆದುಕೊಂಡು ಕಂಗಾಲಾಗುತ್ತಿರೋ ಜನ

ಕಲಬುರಗಿ ಜಿಲ್ಲೆಯಲ್ಲಿ ಬೈಕ್ ಕಳ್ಳರ ಹಾವಳಿ ಹೆಚ್ಚಾಗಿದ್ದು, ಜನರು ಕಂಗಾಲಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಪ್ರತಿನಿತ್ಯ ನಗರದಲ್ಲಿ ಹತ್ತಾರು ಬೈಕ್​ಗಳು ಕಳ್ಳತನವಾಗುತ್ತಿವೆ. ಸದ್ಯ ದ್ವಿಚಕ್ರವಾಹನಗಳ ಬೆಲೆ ಗಗನಕ್ಕೆ ಮುಟ್ಟಿದೆ. ಇದರಿಂದ ಸಾಮಾನ್ಯ ವ್ಯಕ್ತಿಗಳು ದ್ವಿ ಚಕ್ರವಾಹನಗಳನ್ನು ಖರೀದಿಸಲಿಕ್ಕೆ ಪಡಬಾರದ ಕಷ್ಟ ಪಡುತ್ತಿದ್ದಾರೆ.

ಕಲಬುರಗಿ ನಗರದಲ್ಲಿ ಹೆಚ್ಚಾದ ಬೈಕ್ ಕಳ್ಳತನ ಪ್ರಕರಣಗಳು; ಲಕ್ಷಾಂತರ ಮೌಲ್ಯದ ಬೈಕ್ ಕಳೆದುಕೊಂಡು ಕಂಗಾಲಾಗುತ್ತಿರೋ ಜನ
ಕಲಬುರಗಿ ಬೈಕ್​ ಕಳ್ಳತನ
Follow us
ಕಿರಣ್ ಹನುಮಂತ್​ ಮಾದಾರ್
|

Updated on: Jun 03, 2023 | 2:35 PM

ಕಲಬುರಗಿ: ಜಿಲ್ಲೆಯ ದೇವಿ ನಗರದಲ್ಲಿ ಕಳೆದ ಕೆಲ ದಿನಗಳ ಹಿಂದೆ ರಾತ್ರಿ 12 ಗಂಟೆ ಸಮಯದಲ್ಲಿ ಕಳ್ಳನೋರ್ವ ಮನೆ ಮುಂದೆ ನಿಲ್ಲಿಸಿದ ಬೈಕ್​ನ್ನು ಕದ್ದುಕೊಂಡು ಹೋಗಿದ್ದಾನೆ. ಇದೀಗ ಸುತ್ತಮುತ್ತಲಿನ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಹೌದು ಯಾಕಂದ್ರೆ ಏರಿಯಾದಲ್ಲಿ ಯಾವಾಗಲೋ ಒಂದು ಬೈಕ್ ಕಳ್ಳತನ(Bike theft)ವಾಗಿದ್ದರೆ, ಜನರು ಸುಮ್ಮನಿರುತ್ತಿದ್ದರು. ಆದ್ರೆ, ಮೇಲಿಂದ ಮೇಲೆ ಈ ಏರಿಯಾಗಳಲ್ಲಿ ಬೈಕ್ ಕಳ್ಳತನವಾಗುತ್ತಲೇ ಇದ್ದಾವೆ. ಅದರಲ್ಲೂ ಕಳೆದ ಕೆಲ ದಿನಗಳಿಂದ ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣಗಳು ಹೆಚ್ಚಾಗಿದ್ದು, ಸಾರ್ವಜನಿಕರ ಆತಂಕ ಹೆಚ್ಚಾಗುವಂತೆ ಮಾಡಿದೆ.

ಕಳೆದ ತಿಂಗಳಲ್ಲಿ ಹತ್ತಕ್ಕೂ ಹೆಚ್ಚು ಬೈಕ್​ಗಳು ಈ ಏರಿಯಾದಲ್ಲಿ ಕಳ್ಳತನವಾಗಿವೆ. ಬೈಕ್ ಮಾತ್ರವಲ್ಲಾ, ಆಟೋ, ಮನೆಯಲ್ಲಿರುವ ಗ್ಯಾಸ್ ಸಿಲಿಂಡರ್, ಕಬ್ಬಿಣದ ಗೇಟ್​ಗಳನ್ನು ಕೂಡ ಕಳ್ಳರು ಯಾರ ಅಂಜಿಕೆ, ಅಳುಕಿಲ್ಲದೇ ಕದ್ದುಕೊಂಡು ಹೋಗುತ್ತಿದ್ದಾರಂತೆ. ಇದೀಗ ಒಂದು ಬೈಕ್ ಖರೀದಿಸಬೇಕಾದ್ರೆ, ಕನಿಷ್ಟ ಒಂದು ಲಕ್ಷ ರೂಪಾಯಿ ಹಣ ಬೇಕು. ಮಧ್ಯಮ ವರ್ಗದವರೇ ಹೆಚ್ಚಾಗಿರುವ ಅನೇಕರು, ತಮ್ಮ ದೈನಂದಿನ ಕೆಲಸಕ್ಕೆ ಅನಕೂಲವಾಗಲಿ ಅಂತ ಬೈಕ್​ಗಳನ್ನು ಖರೀದಿಸಿ ತಂದ್ರೆ, ಕಳ್ಳರು, ಅವುಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡಿಕೊಂಡು ಹೋಗುತ್ತಿದ್ದಾರೆ.

ಇದನ್ನೂ ಓದಿ:ಬೆಂಗಳೂರಿನಲ್ಲಿ ಮನೆಗಳ್ಳತನ, ಮೆಟ್ರೋ ನಿಲ್ದಾಣಗಳ ಬಳಿ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್

ನಕಲಿ ಕೀ ಬಳಸಿ ಬೈಕ್​ ಕಳ್ಳತನ

ಇನ್ನು ರಾತ್ರಿ ಮಾತ್ರವಲ್ಲ, ಹಗಲೊತ್ತಿನಲ್ಲಿ ಕೂಡ ಕಲಬುರಗಿ ಕಳ್ಳತನ ನಡೆಯುತ್ತಿದೆಯಂತೆ. ಬೈಕ್​ಗಳನ್ನು ಮನೆ ಮುಂದೆ ನಿಲ್ಲಿಸಿ, ಒಳಗಡೆ ಹೋದ್ರೆ, ಕೆಲವೇ ನಿಮಿಷಗಳಲ್ಲಿ ಕಳ್ಳರು ನಕಲಿ ಕೀ ಗಳನ್ನು ಬಳಸಿ, ಬೈಕ್​ಗಳನ್ನು ಕದ್ದುಕೊಂಡು ಪರಾರಿಯಾಗುತ್ತಿದ್ದಾರಂತೆ. ಅದರಲ್ಲೂ ನಗರದ ಜಿಮ್ಸ್ ಆಸ್ಪತ್ರೆ ಸೇರಿದಂತೆ ಕೆಲ ಮಾಲ್​ಗಳ ಮುಂದೆ ನಿಲ್ಲಿಸಿದ್ದ ಬೈಕ್​ಗಳು ಹೆಚ್ಚು ಕಳ್ಳತನವಾಗುತ್ತಿವೆ. ಇನ್ನು ಮೇಲಿಂದ ಮೇಲೆ ಕಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದರೂ ಕೂಡ ಪೊಲೀಸರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲವಂತೆ. ಬೈಕ್ ಕಳ್ಳತನವಾದಾಗ, ಪೊಲೀಸ್ ಠಾಣೆಗೆ ದೂರು ನೀಡಿದ್ರು, ಸರಿಯಾಗಿ ದೂರು ಸ್ವೀಕರಿಸೋದಿಲ್ಲ. ದೂರು ದಾಖಲಾದ್ರು ಕೂಡ ಕಳ್ಳರನ್ನು, ಬೈಕ್​ಗಳನ್ನು ಪತ್ತೆ ಮಾಡುವ ಕೆಲಸವನ್ನು ಪೊಲೀಸರು ಮಾಡ್ತಿಲ್ಲ. ಈ ಭಾಗದಲ್ಲಿ ಸರಿಯಾಗಿ ಬೀಟ್ ವ್ಯವಸ್ಥೆ ಕೂಡ ಇಲ್ಲ. ಇದರಿಂದ ಕಳ್ಳರು, ಯಾರ ಅಂಜಿಕೆ, ಅಳುಕಿಲ್ಲದೇ ತಮ್ಮ ಕಳ್ಳತನ ಕೆಲಸವನ್ನು ಮಾಡ್ತಿದ್ದಾರೆ ಅಂತ ಸಾರ್ವಜನಿಕರು ಪೊಲೀಸರ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕಳೆದ ಕೆಲ ದಿನಗಳಿಂದ ಕಳ್ಳರು ಕಲಬುರಗಿ ನಗರದ ನಿವಾಸಿಗಳ ನಿದ್ದೆ ಹಾರುವಂತೆ ಮಾಡಿದ್ದಾರೆ. ಲಕ್ಷಾಂತರ ಮೌಲ್ಯದ ಬೈಕ್​ಗಳನ್ನು ಕದ್ದು ಪರಾರಿಯಾಗುತ್ತಿದ್ದಾರೆ. ಹೀಗಾಗಿ ಪೊಲೀಸರು ಇನ್ನಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳುವುದರ ಜೊತೆಗೆ ಕಳ್ಳರನ್ನು ಪತ್ತೆ ಮಾಡುವ ಕೆಲಸ ಮಾಡಬೇಕಿದೆ. ಆ ಮೂಲಕ ಸಾರ್ವಜನಿಕರ ನೆಮ್ಮದಿ ಹಾಳಾಗದಂತೆ ನೋಡಿಕೊಳ್ಳುವ ಕೆಲಸ ಮಾಡಬೇಕಿದೆ.

ವರದಿ: ಸಂಜಯ್ ಟಿವಿ9 ಕಲಬುರಗಿ

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ