AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತರವರಲ್ಲೇ ಮುಚ್ಚಿದ ಇಂದಿರಾ ಕ್ಯಾಂಟೀನ್​ಗಳು

ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಇಂದಿರಾ ಕ್ಯಾಂಟೀನ್​ಗಳಿಗೂ ಹೆಚ್ಚಿನ ಆದ್ಯತೆ ನೀಡುತ್ತಿದೆ. ಆದರೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಕಲಬುರಗಿ ಜಿಲ್ಲೆಯಲ್ಲೇ ಇಂದಿರಾ ಕ್ಯಾಂಟೀನ್​ಗಳು ಮುಚ್ಚಲಾಗಿದೆ. ಸದ್ಯ ಕ್ಯಾಂಟೀನ್​ಗಳು ಶ್ವಾನಗಳ ವಾಸಸ್ಥಾನವಾಗಿ ಮಾರ್ಪಟ್ಟಿವೆ.

ಕಲಬುರಗಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತರವರಲ್ಲೇ ಮುಚ್ಚಿದ ಇಂದಿರಾ ಕ್ಯಾಂಟೀನ್​ಗಳು
ಕಲಬುರಗಿ ನಗರದಲ್ಲಿ ಬಂದ್ ಆಗಿರುವ ಇಂದಿರಾ ಕ್ಯಾಂಟೀನ್
ಸಂಜಯ್ಯಾ ಚಿಕ್ಕಮಠ
| Edited By: Rakesh Nayak Manchi|

Updated on: Aug 22, 2023 | 7:08 AM

Share

ಕಲಬುರಗಿ, ಆಗಸ್ಟ್ 22: ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಇಂದಿರಾ ಕ್ಯಾಂಟೀನ್​ಗಳಿಗೆ (Indira Canteen) ಹೆಚ್ಚಿನ ಆದ್ಯತೆ ನೀಡುತ್ತಿದೆ. ಆದರೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರ ತವರು ಕಲಬುರಗಿ ಜಿಲ್ಲೆಯಲ್ಲೇ ಇಂದಿರಾ ಕ್ಯಾಂಟೀನ್​ಗಳು ಮುಚ್ಚಲಾಗಿದೆ. ಸದ್ಯ ಕ್ಯಾಂಟೀನ್​ಗಳು ಶ್ವಾನಗಳ ವಾಸಸ್ಥಾನವಾಗಿ ಮಾರ್ಪಟ್ಟಿವೆ.

ಕಲಬುರಗಿ ನಗರದಲ್ಲಿನ ಏಳು ಇಂದಿರಾ ಕ್ಯಾಂಟೀನ್​ಗಳು ಕಳೆದ ಎಂಟು ತಿಂಗಳಿಂದ ಬಂದ್ ಆಗಿದ್ದು, ನಾಯಿಗಳ ಆಶ್ರಯ ತಾಣವಾಗಿ ಮಾರ್ಪಟ್ಟಿವೆ. ಪಾಲಿಕೆ ಮತ್ತು ಗುತ್ತಿಗೆದಾರರ ನಡುವಿನ ಗುದ್ದಾಟದಿಂದ ಕ್ಯಾಂಟೀನ್​ಗಳು ಮುಚ್ಚಲ್ಪಟ್ಟಿವೆ ಎಂಬುದು ಗಮನಿಸಬೇಕಾದ ಸಂಗತಿ.

ಬೆಂಗಳೂರು ಮೂಲದ Cheffpalk ಕಂಪನಿಯು ಇವುಗಳ ಟೆಂಡರ್ ಪಡೆದಿತ್ತು. ಆದರೆ ಕಲಬುರಗಿ ಮಹಾನಗರ ಪಾಲಿಕೆಯು ಸರಿಸುಮಾರು ಏಳು ಕೋಟಿ ಹಣ ಬಾಕಿ ಉಳಿಸಿಕೊಂಡಿದೆ. ಕೆಲ ದಿನಗಳ ಹಿಂದೆ ಬಾಕಿಯಿರುವ ಮೊತ್ತದ ಪೈಕಿ ಕೇವಲ ಐವತ್ತು ಲಕ್ಷ ಮಾತ್ರ ಪಾವತಿ ಮಾಡಿದೆ.

ಇದನ್ನೂ ಓದಿ: ಇಂದಿರಾ ಕ್ಯಾಂಟೀನ್‌ ಊಟದ ಬೆಲೆಯಲ್ಲಿ ಹೆಚ್ಚಳವಿಲ್ಲ: ಸ್ಪಷ್ಟನೆ ನೀಡಿದ ಹೆಚ್​​ಕೆ ಪಾಟೀಲ್

ಪ್ರತಿ ದಿನ ನಗರದಲ್ಲಿರುವ ಇಂದಿರಾ ಕ್ಯಾಂಟೀನ್​ಗಳಲ್ಲಿ ಮೂರು ಸಾವಿರಕ್ಕೂ ಹೆಚ್ಚು ಜನ ಊಟ, ಉಪಹಾರ ಸೇವನೆ ಮಾಡುತ್ತಿದ್ದರು. ಸದ್ಯ ಬಾಕಿ ಹಣ ಪಾವತಿಸಿದರೆ ನಾವು ಕ್ಯಾಂಟೀನ್ ಆರಂಭ ಮಾಡುತ್ತೇವೆ ಎಂದು ಕ್ಯಾಂಟೀನ್ ಗುತ್ತಿಗೆ ಪಡೆದವರು ಹೇಳುತ್ತಿದ್ದಾರೆ.

ಪಾಲಿಕೆಯವರು ಹಣ ಇಲ್ಲಾ ಅಂತ ಹೇಳಿ ತಮಗೆ ಬಿಲ್ ನೀಡಿಲ್ಲ ಎಂದು ಟೆಂಡರ್ ಪಡೆದವರು ಹೇಳುತ್ತಿದ್ದಾರೆ. ಇನ್ನು ಬಿಲ್ ಮೊತ್ತದಲ್ಲಿ ಸ್ವಲ್ಪ ಹೆಚ್ಚು ಕಡಿಮೆಯಾಗಿದೆ. ಹೀಗಾಗಿ ಬಿಲ್ ವಿಳಂಭವಾಗುತ್ತಿದೆ ಅಂತ ಪಾಲಿಕೆ ಅಧಿಕಾರಿಗಳು ಹೇಳುತ್ತಿದ್ದಾರೆ.

ಇತ್ತೀಚೆಗಷ್ಟೇ, ಗೃಹ ಸಚಿವ ಡಾ.ಜಿ ಪರಮೇಶ್ವರ್ ಕ್ಷೇತ್ರವಾಗಿರುವ ತುಮಕೂರಿನ ಕೊರಟಗೆರೆಯಲ್ಲಿರುವ ಇಂದಿರಾ ಕ್ಯಾಂಟೀನ್ ಮುಚ್ಚುವ ಹಂತಕ್ಕೆ ತಲುಪಿರುವ ಬಗ್ಗೆ ಸುದ್ದಿಯಾಗಿತ್ತು. ಕಳೆದ 7 ತಿಂಗಳಿನಿಂದ ರಿವಾರ್ಡ್ ಏಜೆನ್ಸಿಯವರು ಸಂಬಳ ನೀಡದೇ ಸಿಬ್ಬಂದಿಗಳಿಗೆ ಸತಾಯಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಬೆಳಿಗ್ಗೆಯಿಂದ ರಾತ್ರಿವರೆಗೂ ಕೆಲಸ ಮಾಡಿದ್ರು, ಸಂಬಳ ಇಲ್ಲವೆಂದು ಸಿಬ್ಬಂದಿಗಳು ಅಳಲು ತೋಡಿಕೊಂಡಿದ್ದರು. ಅಷ್ಟೇ ಅಲ್ಲದೆ, ಎಂಟು ಜನ ಸಿಬ್ಬಂದಿ ಕೆಲಸ ಮಾಡಬೇಕಾದಲ್ಲಿ ಕೇಲವ ನಾಲ್ಕು ಸಿಬ್ಬಂದಿ ಇಟ್ಟುಕೊಂಡು ಕೆಲಸ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ