ಯುದ್ಧ ನಿಲ್ಲಿಸಿ, ಶಾಂತಿ ನೆಲಸಲಿ: ಕಲಬುರಗಿಯಲ್ಲಿ ಪ್ಯಾಲೆಸ್ಟೈನ್ ಪರವಾಗಿ ವಿವಿಧ ಸಂಘಟನೆಗಳಿಂದ ಧರಣಿ
ಗಾಜಾ ಮತ್ತು ಪ್ಯಾಲೆಸ್ಟೈನ್ನಲ್ಲಿ ನರಮೇಧ ನಡೆಯುತ್ತಿದೆ. ಮಕ್ಕಳು, ಅಮಾಯಕರು ಇಸ್ರೇಲ್ ದಾಳಿಗೆ ಬಲಿಯಾಗುತ್ತಿದ್ದಾರೆ. ಯುದ್ಧದಿಂದ ಪ್ಯಾಲೆಸ್ಟೈನ್ನಲ್ಲಿ ನರಮೇಧ ನಡೆಯುತ್ತಿದ್ದು, ಯುದ್ಧ ನಿಲ್ಲಿಸಿ ಶಾಂತಿ ನೆಲೆಸಬೇಕೆಂದು ಹೋರಾಟಗಾರರು ಆಗ್ರಹಿಸಿದ್ದಾರೆ.
ಕಲಬುರಗಿ ನ.13: ಇಸ್ರೇಲ್ ಮತ್ತು ಪ್ಯಾಲೆಸ್ಟೈನ್ನ ಹಮಾಸ್ (Israel-Hamas War) ಉಗ್ರರ ನಡುವೆ ಯುದ್ಧ ನಡೆದಿದೆ. ಪ್ಯಾಲೆಸ್ಟೈನ್ನಲ್ಲಿ ನಡೆಯುತ್ತಿರುವ ನರಮೇಧ ನಿಲ್ಲಿಸುವಂತೆ ಕಲಬುರಗಿ (Kalaburgi) ಜಿಲ್ಲಾಧಿಕಾರಿ ಕಚೇರಿ ಎದುರು ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿ ಆಗ್ರಹಿಸಿದವು. ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಇಸ್ರೇಲ್- ಗಾಜಾ ಮಧ್ಯೆ ನಡೆಯುತ್ತಿರುವ ಯುದ್ಧದಿಂದ ಸಾಮಾನ್ಯ ಪ್ರಜೆಗಳು ಸಾವಿಗೀಡಾಗುತ್ತಿದ್ದಾರೆ. ಇದು ಯುದ್ಧ ರೀತಿ ಕಂಡು ಬರುತ್ತಿಲ್ಲ.
ಗಾಜಾ ಮತ್ತು ಪ್ಯಾಲೆಸ್ಟೈನ್ನಲ್ಲಿ ನರಮೇಧ ನಡೆಯುತ್ತಿದೆ. ಮಕ್ಕಳು, ಅಮಾಯಕರು ಇಸ್ರೇಲ್ ದಾಳಿಗೆ ಬಲಿಯಾಗುತ್ತಿದ್ದಾರೆ. ಯುದ್ಧದಿಂದ ಪ್ಯಾಲೆಸ್ಟೈನ್ನಲ್ಲಿ ನರಮೇಧ ನಡೆಯುತ್ತಿದ್ದು, ಯುದ್ಧ ನಿಲ್ಲಿಸಿ ಶಾಂತಿ ನೆಲೆಸಬೇಕೆಂದು ಹೋರಾಟಗಾರರು ಆಗ್ರಹಿಸಿದ್ದಾರೆ.
ವಿಜಯಪುರದಲ್ಲಿ ಪ್ಯಾಲೆಸ್ಟೈನ್ ಪರ ಘೋಷಣೆ
ವಿಜಯಪುರದ ಜುಮ್ಮಾ ಮಸೀದಿ ರಸ್ತೆಯಲ್ಲಿ ನವೆಂಬರ್ 6ರಂದು ಎಸ್ಡಿಪಿಐ ಕಾರ್ಯಕರ್ತರು ಪ್ಯಾಲೆಸ್ಟೈನ್ ಪರವಾಗಿ ಘೋಷಣೆ ಕೂಗಿ, ಪ್ರತಿಭಟನೆ ನಡೆಸಿದ್ದರು. ಎಸ್ಡಿಪಿಐ ಜಿಲ್ಲಾಧ್ಯಕ್ಷ ಅತಾವುಲ್ಲಾ ನೇತೃತ್ವದಲ್ಲಿ ಪ್ರತಿಭಟನೆಯಲ್ಲಿ ಪ್ಯಾಲೆಸ್ಟೈನ್ ಪರ ಭಿತ್ತಿಪತ್ರ ಪ್ರದರ್ಶನ ಮಾಡಲಾಗಿತ್ತು. ಪ್ರತಿಭಟನೆಯಲ್ಲಿ ಅಪ್ರಾಪ್ತ ಮಕ್ಕಳು ಸಹಿತ ಭಾಗಿಯಾಗಿದ್ದರು. ಎಸ್ಡಿಪಿಐ ಜಿಲ್ಲಾಧ್ಯಕ್ಷ ಅತಾವುಲ್ಲ ವಿರುದ್ಧ ಗೋಳಗುಮ್ಮಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದನ್ನೂ ಓದಿ: Israel-Hamas War: ಮದುವೆ, ಮನರಂಜನೆ ರದ್ದು ಮಾಡಿ ಪ್ಯಾಲೆಸ್ಟೈನ್ಗೆ ಹಣ ನೀಡುವಂತೆ ಭಟ್ಕಳ ಮುಸ್ಲಿಂ ಯೂಥ್ ಫೆಡರೇಶನ್ ಕರೆ
ಪ್ಯಾಲೆಸ್ಟೈನ್ ಬೆಂಬಲಿಸಿ ವಿಡಿಯೋ ಹಂಚಿಕೊಂಡಿದ್ದ ಮುಸ್ಲಿಂ ಯುವಕ
ಪ್ಯಾಲೆಸ್ತೀನ್ ಬೆಂಬಲಿಸಿ ವಿಡಿಯೋ ಹಂಚಿಕೊಂಡಿದ್ದ ಹೊಸಪೇಟೆಯ ಆಲಂ ಬಾಷಾ ವಿರುದ್ಧ ಸುಮುಟೋ ಪ್ರಕರಣ ದಾಖಲು ಮಾಡಲಾಗಿತ್ತು. ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯ PSI ಮುನಿರತ್ನ ನೀಡಿದ ದೂರಿನ ಆಧಾರದ ಮೇಲೆ CRPC 108-151 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಯುವಕನನ್ಮು ಪೊಲೀಸರು ವಶಕ್ಕೆ ಪಡೆದಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ