ಕಲಬುರಗಿ: 12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ, ಬಾವಿಯಲ್ಲಿ ಶವ ಪತ್ತೆ

ಕಲಬುರಗಿಯಲ್ಲಿ ದುರಂತ ಘಟನೆಯೊಂದು ಸಂಭವಿಸಿದೆ 12 ವರ್ಷದ ಬಾಲಕಿಯ ಶವ ಬಾವಿಯಲ್ಲಿ ಪತ್ತೆಯಾಗಿದ್ದು ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ.

ಕಲಬುರಗಿ: 12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ, ಬಾವಿಯಲ್ಲಿ ಶವ ಪತ್ತೆ
ಸಾಂದರ್ಭಿಕ ಚಿತ್ರ
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: ಆಯೇಷಾ ಬಾನು

Updated on: Jul 18, 2023 | 1:49 PM

ಕಲಬುರಗಿ: 12 ವರ್ಷದ ಅಪ್ರಾಪ್ತ ಬಾಲಕಿ(12 Years Old Girl) ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿರುವ ದುರಂತ ಘಟನೆ ಕಲಬುರಗಿ(Kalaburagi) ಜಿಲ್ಲೆಯ ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಂದು (ಜುಲೈ 18) ಘಟನೆ ಬೆಳಕಿಗೆ ಬಂದಿದ್ದು ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

12 ವರ್ಷದ ಬಾಲಕಿ ಜುಲೈ 15 ರಂದು ತನ್ನ ಮನೆಯಿಂದ ಹೊರಟು, ಹತ್ತಿರದಲ್ಲಿ ವಾಸಿಸುತ್ತಿರುವ ತಮ್ಮ ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿ ಹೊರಟಿದ್ದಳು. ಆದ್ರೆ ಎರಡು ಮೂರು ದಿನ ಕಳೆದರೂ ಬಾಲಕಿ ಸಿಕ್ಕಿಲ್ಲ. ಹೀಗಾಗಿ ಮನೆಯವರೆಲ್ಲ ಹುಡುಕಾಡಿದ್ದಾರೆ. ಇಂದು (ಜುಲೈ 18) ಗ್ರಾಮದ ಹೊರವಲಯದ ಬಾವಿಯಲ್ಲಿ ಬಾಲಕಿ ಶವವಾಗಿ ಪತ್ತೆಯಾಗಿದ್ದಾಳೆ. ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ ಬಾವಿಯಲ್ಲಿ ಎಸೆದಿರುವ ಶಂಕೆ ವ್ಯಕ್ತವಾಗಿದೆ.

ಆರೋಪಿಯ ಗುರುತು ಪತ್ತೆಯಾಗಿಲ್ಲ. ಪೊಲೀಸರು ವೈದ್ಯಕೀಯ ವರದಿಗಾಗಿ ಕಾಯುತ್ತಿದ್ದಾರೆ. ಸದ್ಯ ಆಳಂದ ಪೊಲೀಸ್ ಠಾಣೆಯಲ್ಲಿ ಪೋಸ್ಕೋ ಪ್ರಕರಣ ದಾಖಲಾಗಿದ್ದು ಆರೋಪಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

ಇದನ್ನೂ ಓದಿ: IKEAದಲ್ಲಿ ಮಹಿಳೆಯೊಬ್ಬರ ಊಟದ ಟೇಬಲ್​ ಮೇಲೆ ಬಿದ್ದ ಸತ್ತ ಇಲಿ

ಪುತ್ರನ ಕೈಯಿಂದಲೇ ಪೋಷಕರ ದುರಂತ ಅಂತ್ಯ

ಬೆಂಗಳೂರಿನಲ್ಲಿ ಮಂಗಳೂರು ಮೂಲದ ದಂಪತಿ ಬರ್ಬರ ಹತ್ಯೆಯಾಗಿದೆ. ಕುಡಿದ ಮತ್ತಿನಲ್ಲಿ ಬಂದ ಪುತ್ರ ತಂದೆ-ತಾಯಿಯನ್ನೇ ಹತ್ಯೆಗೈದಿದ್ದಾನೆ. ತಂದೆ ಭಾಸ್ಕರ್, ತಾಯಿ ಶಾಂತಾಳನ್ನು ಕೊಲೆಯಾದ ದಂಪತಿ. ಶರತ್, ಪೋಷಕರನ್ನು ಕೊಲೆ ಮಾಡಿದ ಮಗ. 20 ವರ್ಷಗಳಿಂದ ಭಾಸ್ಕರ್, ಶಾಂತಾ ದಂಪತಿ ಬೆಂಗಳೂರಿನಲ್ಲಿ ನೆಲೆಸಿದ್ದರು. ಇತ್ತೀಚೆಗೆ ಶಾಂತಾ ಅವರು ಕೇಂದ್ರದ ನೌಕರಿಯಿಂದ ನಿವೃತ್ತಿ ಹೊಂದಿದ್ದರು. ಭಾಸ್ಕರ್ ಖಾಸಗಿ ಕ್ಯಾಂಟೀನ್​ವೊಂದರಲ್ಲಿ ಕ್ಯಾಶಿಯರ್ ಆಗಿದ್ದರು. ಮಗ ಶರತ್ ಮನೆಯಲ್ಲಿ ಆಗಾಗ ಸೈಕೋ ರೀತಿ ವರ್ತಿಸುತ್ತಿದ್ದ. ನಿನ್ನೆ ಸಂಜೆ ಕುಡಿದು ಬಂದು ತಂದೆ-ತಾಯಿ ಜೊತೆ ಗಲಾಟೆ ಮಾಡಿದ್ದ. ಈ ವೇಳೆ ರಾಡ್​ನಿಂದ ಹೊಡೆದು ಹತ್ಯೆಗೈದಿದ್ದಾನೆ. ತಂದೆ-ತಾಯಿಯನ್ನು ಕೊಲೆಗೈದು ಮನೆ ಲಾಕ್ ಮಾಡಿ ಪರಾರಿಯಾಗಿದ್ದಾನೆ. ದೊಡ್ಡ ಮಗ ಇಂದು ಬೆಳಗ್ಗೆ ತಂದೆ-ತಾಯಿಗೆ ಕರೆ ಮಾಡಿದ್ದಾನೆ. ಪೋಷಕರು ಕರೆ ಸ್ವೀಕರಿಸದ ಹಿನ್ನೆಲೆ ಪಕ್ಕದ ಮನೆಯವರಿಗೆ ಕರೆ ಮಾಡಿದ್ದಾನೆ. ಪಕ್ಕದ ಮನೆಯವರು ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ