ಪ್ರಧಾನಿ ಮೋದಿ ವಿಶ್ವ ಗುರುವಾದರೆ, ನಾವು ವಿಶ್ವ ಮಾನವರು: ನಟ ಪ್ರಕಾಶ್ ರಾಜ್​​

ಕಲಬುರಗಿ ನಗರದ ರಂಗಮಂದಿರದಲ್ಲಿ ವಿವಿಧ ಸಂಘಟನೆಗಳು ಆಯೋಜಿಸಿರುವ ಸಂವಾದ ಮತ್ತು ನಾಟಕ ಪ್ರದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದ ಬಹುಭಾಷಾ ನಟ ಪ್ರಕಾಶ್ ರಾಜ್​, ಪ್ರಧಾನಿ ನರೇಂದ್ರ ಮೋದಿ ವಿಶ್ವ ಗುರುವಾದರೆ, ನಾವು ವಿಶ್ವ ಮಾನವರು ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ವಿಶ್ವ ಗುರುವಾದರೆ, ನಾವು ವಿಶ್ವ ಮಾನವರು: ನಟ ಪ್ರಕಾಶ್ ರಾಜ್​​
ಬಹುಭಾಷಾ ನಟ ಪ್ರಕಾಶ್ ರಾಜ್​
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: ಗಂಗಾಧರ​ ಬ. ಸಾಬೋಜಿ

Updated on: Sep 10, 2023 | 8:44 PM

ಕಲಬುರಗಿ, ಸೆಪ್ಟೆಂಬರ್​ 10: ಪ್ರಧಾನಿ ನರೇಂದ್ರ ಮೋದಿ ವಿಶ್ವ ಗುರುವಾದರೆ, ನಾವು ವಿಶ್ವ ಮಾನವರು ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ (Prakash Raj)​ ಹೇಳಿದ್ದಾರೆ. ನಗರದ ರಂಗಮಂದಿರದಲ್ಲಿ ವಿವಿಧ ಸಂಘಟನೆಗಳು ಆಯೋಜಿಸಿರುವ ಸಂವಾದ ಮತ್ತು ನಾಟಕ ಪ್ರದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮಗೆ ವಿಶ್ವಮಾನವರ ಸಂದೇಶ ಮುಖ್ಯ, ಬೇರೇನೂ ಅಲ್ಲ. ಕೆಲಸ ಇಲ್ಲದವರು ನನ್ನ ಬಗ್ಗೆ ಏನೇನೋ ಮಾತನಾಡುತ್ತಾರೆ ಎಂದು ಹೇಳಿದ್ದಾರೆ.

ಸಚಿವ ಉದಯನಿಧಿ ಸ್ಟಾಲಿನ್​ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಸನಾತನ ಧರ್ಮ ಡೆಂಘೀ, ಮಲೇರಿಯಾಗೆ ಹೋಲಿಸಿದರೆ ತಪ್ಪೇನು ಎಂದು ಉದಯನಿಧಿ ಸ್ಟಾಲಿನ್ ಹೇಳಿಕೆಯನ್ನು ಸಮರ್ಥಿಸಿದರು. ನಾನು ಯಾವುದೇ ಧರ್ಮದ ಪರ ಅಲ್ಲ, ಜನರ ಪರ ಇದ್ದೇನೆ ಎಂದರು.

ಇದನ್ನೂ ಓದಿ: ಬೆಳಗಾವಿ: ಹಲವರ ಖಾತೆಗೆ ಬರದ ಗೃಹಲಕ್ಷ್ಮೀ ಹಣ; ಲಕ್ಷ್ಮೀ ಹೆಬ್ಬಾಳ್ಕರ್​ ಹೇಳಿದ್ದಿಷ್ಟು?

ಧರ್ಮಯುದ್ಧ ಯಾವಾಗ ಮುಗಿಯುತ್ತೆ ಅನ್ನುವುದು ಗೊತ್ತಾಗಲ್ಲ. ಧರ್ಮಯುದ್ಧ ಎಂಬುದು ಕಾಳ್ಗಿಚ್ಚು ಇದ್ದಂತೆ. ಅದರ ಮೂಲವು ಗೊತ್ತಾಗುವುದಿಲ್ಲ ಅಂತ್ಯ ಕೂಡ ಗೊತ್ತಾಗಲ್ಲ. ರಾಜರ ಕಾಲದಲ್ಲಿ ಕೆಲವೊಮ್ಮೆ ಸಂಬಳ ಕೊಡುವುದಕ್ಕೆ ಆಗುತ್ತಿರಲಿಲ್ಲ. ರಾಜರ ಜತೆ ಕೆಲಸ ಮಾಡುವವರಿಗೆ ಸಂಬಳ ಕೊಡುವುದಕ್ಕೂ ಆಗುತ್ತಿರಲಿಲ್ಲ.

ಇದನ್ನೂ ಓದಿ: ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟದಿಂದ ನಾಳೆ ಬೆಂಗಳೂರು ಬಂದ್​ಗೆ ಕರೆ: ಪರ್ಯಾಯ ಮಾರ್ಗಗಳು ಹೀಗಿವೆ

ಆಗ ಆ ಸೈನಿಕರು ಲೂಟಿ, ಅತ್ಯಾಚಾರ ದರೋಡೆ ಮಾಡುತ್ತಿದ್ದರು. ಇಂಥವರನ್ನೇ ರಾಜಕಿಯದಲ್ಲೂ ಬಳಸಿಕೊಳ್ಳುತ್ತಿದ್ದಾರೆ. ರೌಡಿಗಳನ್ನು ರಾಜಕೀಯಕ್ಕೆ ಯಾಕೆ ಸೇರಿಸಿಕೊಳ್ಳುತ್ತೀರಾ? ಮತ್ತು ಅಂತವರನ್ನೇ ಎಂಪಿ ಮಾಡುತ್ತಾರೆ ಎಂದು ಕಿಡಿಕಾರಿದ್ದಾರೆ.

ಪ್ರಕಾಶ್​ ರೈ ಆಗಮನಕ್ಕೆ ಹಿಂದೂ ಜಾಗೃತಿ ಸೇನೆ ಸಂಘಟನೆ ವಿರೋಧ 

ಕಲಬುರಗಿ ಜಿಲ್ಲೆಗೆ ಪ್ರಕಾಶ್ ರಾಜ್ ಆಗಮನಕ್ಕೆ ಹಿಂದೂ ಜಾಗೃತಿ ಸೇನೆ ಸಂಘಟನೆ ವಿರೋಧ ಮಾಡಿದ್ದು, ಪ್ರಕಾಶ್ ರೈ ಬರುವುದನ್ನು ತಡೆಯಬೇಕು ಅಂತ ಆಗ್ರಹಿಸಿದ್ದರು. ಕಲಬುರಗಿ ಜಿಲ್ಲಾಧಿಕಾರಿ ಮತ್ತು ಪೊಲೀಸ್ ಅಧಿಕಾರಿಗಳಿಗೆ ಸಂಘಟನೆ ಕಾರ್ಯಕರ್ತರು ಮನವಿ ಸಲ್ಲಿಸಿದ್ದರು. ಪ್ರಕಾಶ್ ರಾಜ್ ಹಿಂದೂ ಧರ್ಮದ ವಿರೋಧಿಯಾಗಿದ್ದಾರೆ. ಹಿಂದೂ ಧರ್ಮದ ವಿರುದ್ಧ ಹೇಳಿಕೆ ನೀಡುತ್ತಾರೆ. ಅವರು ಬರುವುದರಿಂದ ಕಲಬುರಗಿ ಜಿಲ್ಲೆಯಲ್ಲಿ ಕೋಮು ಭಾವನೆ ಹೆಚ್ಚಾಗುತ್ತದೆ. ಹಾಗಾಗಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ