ರಷ್ಯಾ ಸೇನೆಯಲ್ಲಿ ಸಿಲುಕಿದ್ದ ಕಲಬುರಗಿಯ 3 ಯುವಕರು ಮರಳಿ ತಾಯ್ನಾಡಿಗೆ

ಕೆಲಸದ ಆಸೆಗಾಗಿ ರಷ್ಯಾಗೆ ತೆರಳಿದ್ದ ಕಲಬುರಗಿ ಮೂಲದ ಮೂವರು ತಾಯ್ನಾಡಿಗೆ ಮರಳಿದ್ದಾರೆ. ಯುವಕರು ಮುಂಬೈ ಮೂಲದ ಏಜೆಂಟ್ ಮೂಲಕ ರಷ್ಯಾಗೆ ತೆರಳಿದ್ದರು. ಮುಂಬೈ ಮೂಲದ ಏಜೆಂಟ್​ ಈ ಯುವಕರಿಗೆ ರಷ್ಯಾದಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಕಳುಹಿಸಿದ್ದರು. ಆದರೆ, ಅಲ್ಲಿ ನಡೆದಿದ್ದೇ ಬೇರೆ.

ರಷ್ಯಾ ಸೇನೆಯಲ್ಲಿ ಸಿಲುಕಿದ್ದ ಕಲಬುರಗಿಯ 3 ಯುವಕರು ಮರಳಿ ತಾಯ್ನಾಡಿಗೆ
ರಷ್ಯಾ ಸೇನೆಯಲ್ಲಿ ಸಿಲುಕಿದ್ದ ಯುವಕರು
Follow us
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: ವಿವೇಕ ಬಿರಾದಾರ

Updated on:Sep 15, 2024 | 11:51 AM

ಕಲಬುರಗಿ, ಸೆಪ್ಟೆಂಬರ್​ 15: ರಷ್ಯಾದಲ್ಲಿ (Russia) ಸಿಲುಕಿಕೊಂಡಿದ್ದ ಕಲಬುರಗಿಯ (Kalburagi) ಮೂವರು ಯುವಕರು ತಾಯ್ನಾಡಿಗೆ ಮರಳಿದ್ದಾರೆ. ಕಲಬುರಗಿಯ ಮೂವರು ಸೇರಿ ಒಟ್ಟು ಆರು ಜನ ಭಾರತೀಯರು ತವರಿಗೆ ವಾಪಸ್ ಆಗಿದ್ದಾರೆ. ಕಲಬುರಗಿಯ ನೂರಾನಿ ಮೊಹಲ್ಲಾ ನಿವಾಸಿ ಸೈಯದ್ ಇಲಿಯಾಸ್ ಹುಸೇನಿ, ಇಸ್ಲಾಮಬಾದ್​​ ಕಾಲೋನಿ ನಿವಾಸಿ ಮೊಹಮ್ಮದ್ ಸಮೀರ್, ಮಿಜಗುರಿ ಪ್ರದೇಶದ ಮೊಹಮ್ಮದ್ ನಯೂಮ್ ವಾಪಸ್​ ಆದ ಯುವಕರು.

ಯುವಕರು ಮುಂಬೈ ಮೂಲದ ಏಜೆಂಟ್ ಮೂಲಕ ರಷ್ಯಾಗೆ ತೆರಳಿದ್ದರು. ಮುಂಬೈ ಮೂಲದ ಏಜೆಂಟ್​ ಈ ಯುವಕರಿಗೆ ರಷ್ಯಾದಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಕಳುಹಿಸಿದ್ದರು. ಆದರೆ, ಯುವಕರನ್ನು ರಷ್ಯಾ ಸೇನೆ ಯುದ್ಧ ಭೂಮಿಯಲ್ಲಿ ಬಳಸಿಕೊಂಡಿತ್ತು. ಯುವಕರಿಗೆ ರಷ್ಯಾದ ಸೈನ್ಯದಲ್ಲಿ ಬಂಕರ್‌ ಅಗೆಯುವ ಕೆಲಸ ನೀಡಲಾಗಿತ್ತು. ಈ ಕುರಿತು ಯುವಕರು ವಿಡಿಯೋ ಮಾಡಿ ಕಷ್ಟ ತೋಡಿಕೊಂಡಿದ್ದರು.

ಇದನ್ನೂ ಓದಿ: ಗ್ರಾಮ ಪಂಚಾಯತಿ ಮಾಜಿ ಸದಸ್ಯನ ತಲೆಗೆ 3 ಗುಂಡು ಹೊಡೆದು ಬರ್ಬರ ಹತ್ಯೆ

ಬಳಿಕ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ್​ ಖರ್ಗೆ ಯುವಕರನ್ನು ಮರಳಿ ತರುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಒತ್ತಾಯಿಸಿದ್ದರು. ಆರೇಳು ತಿಂಗಳ ಬಳಿಕ ಯುವಕರು ತಾಯ್ನಾಡಿಗೆ ಮರಳಿದ್ದಾರೆ.

ಏಜೆಂಟ್ ಮೂಲಕ ಅವರು ರಷ್ಯಾಗೆ ತೆರಳಿದ್ದರು: ಡಿಸಿ

ಯುವಕರು ವಾಪಸ್​ ಆದ ಬಗ್ಗೆ ಕಲಬುರಗಿಯಲ್ಲಿ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಮಾತನಾಡಿ, ಬಹಳ ದಿನಗಳ ನಮ್ಮ ಪ್ರಯತ್ನದ ಬಳಿಕ ನಮ್ಮ ಜಿಲ್ಲೆಯ ಮೂರು ಜನ ಯುವಕರು ವಾಪಸ್ ಬಂದಿದ್ದಾರೆ. ಏಜೆಂಟ್ ಮೂಲಕ ಅವರು ರಷ್ಯಾಗೆ ತೆರಳಿದ್ದರು. ಕೆಲಸ ಆಮೀಷ ತೋರಿಸಿ ಅವರನ್ನ ಯುದ್ಧಕ್ಕೆ ಬಳಸಿಕೊಳ್ಳಲಾಗಿತ್ತು. ಜಿಲ್ಲಾಡಳಿತ ನಿರಂತರ ಪ್ರಯತ್ನದ ಫಲವಾಗಿ ವಾಪಸ್ ಬಂದಿದ್ದಾರೆ. ಪ್ರಧಾನಿಯವರು ಖುದ್ದು ರಷ್ಯಾಗೆ ಪತ್ರ ಬರೆದಿದ್ದಾರೆ. ಜನಪ್ರತಿನಿಧಿಗಳ ಸಹಾಯದಿಂದ ವಾಪಸ್ ಬಂದಿದ್ದಾರೆ. ನಮಗೆ ಎಲ್ಲ ಜನಪ್ರತಿ‌ನಿಧಿಗಳು ಸಹಾಯ ಮಾಡಿದ್ದಾರೆ. ಆದ್ದರಿಂದ ಜಿಲ್ಲೆಯ ಯುವಕರು ಸುರಕ್ಷಿತವಾಗಿ ವಾಪಸ್ ಬಂದಿದ್ದಾರೆ. ಈ ರೀತಿ ಯಾರು ಮೋಸ ಹೋಗಬೇಡಿ. ಶೀಘ್ರದಲ್ಲೇ ನಾವು ಜಿಲ್ಲೆಯಲ್ಲಿ ಕಾರ್ಯಗಾರ ಮಾಡುತ್ತೇವೆ. ಎಮೀಗ್ರೇಷನ್ ಅವರ ಜೊತೆ ಸೇರಿ ಕಾರ್ಯಗಾರ ಮಾಡಿ ಯುವಕರಿಗೆ ಅರಿವು ಮೂಡಿಸುತ್ತೆವೆ ಎಂದು ಹೇಳಿದರು

ಮಲ್ಲಿಕಾರ್ಜುನ್​ ಖರ್ಗೆ ಪತ್ರ

ಕಲಬುರಗಿ ಜಿಲ್ಲೆಯ ಮೂವರು ಹಾಗೂ ತೆಲಂಗಾಣದ ಓರ್ವ ಯುವಕರಿಗೆ ಕೆಲಸದ ಆಮಿಷವೊಡ್ಡಿ ಅವರನ್ನು ರಷ್ಯಾಕ್ಕೆ ಕರೆಸಿಕೊಂಡು, ಬಲವಂತವಾಗಿ ಉಕ್ರೇನ್​ ವಿರುದ್ಧ ಯದ್ಧಕ್ಕೆ ತಳ್ಳಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ ಕಳೆದ ಒಂದು ವರ್ಷದಲ್ಲಿ ನೂರಕ್ಕೂ ಹೆಚ್ಚು ಯುವಕರನ್ನು ರಷ್ಯಾ ಸೇನೆ ಬಳಸಿಕೊಂಡಿದೆ ಎಂದು ಆಘಾತಕಾರಿ ವಿಷಯಗಳು ಬಿತ್ತರವಾಗಿವೆ. ರಷ್ಯಾದಲ್ಲಿ ಸಿಲುಕಿ ಸಂಕಷ್ಟ ಎದುರಿಸಯತ್ತಿರುವ ಎಲ್ಲ ಭಾರತೀಯರು ಹಾಗೂ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರುವಂತೆ ಪತ್ರದ ಮೂಲಕ ಮಲ್ಲಿಕಾರ್ಜು ಖರ್ಗೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:31 am, Sun, 15 September 24

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ