ಕಲಬುರಗಿ: ಬಸ್ನಲ್ಲಿ ಪ್ರಯಾಣಿಸ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು
ಕಲಬುರಗಿ ಜಿಲ್ಲೆಯ ಕಮಲಾಪುರ(Kamalapur) ಬಳಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬ ಹೃದಯಾಘಾತದಿಂದ(Heart attack) ಸಾವನ್ನಪ್ಪಿದ ಘಟನೆ ನಡೆದಿದೆ. ಕಲಬುರಗಿಯಿಂದ ಭಾಲ್ಕಿಯಲ್ಲಿನ ತಮ್ಮ ಸಹೋದರಿಯ ಮನೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಕೂಡಲೇ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆಂದು ತೆರಳುವಾಗ ಕೊನೆಯುಸಿರೆಳೆದಿದ್ದಾರೆ.
ಕಲಬುರಗಿ, ಏ.14: ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬ ಹೃದಯಾಘಾತದಿಂದ(Heart attack) ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ(Kamalapur) ಬಳಿ ನಡೆದಿದೆ. ವಿಜಯಕುಮಾರ್ ಶಿವಶರಣಪ್ಪ ನಾಗನಳ್ಳಿ(45) ಮೃತವ್ಯಕ್ತಿ. ಮೂಲತಃ ನಾಗನಹಳ್ಳಿಯವರಾದ ಇವರು, ಕಲಬುರಗಿಯಿಂದ ಭಾಲ್ಕಿಯಲ್ಲಿನ ತಮ್ಮ ಸಹೋದರಿಯ ಮನೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಕೂಡಲೇ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆಂದು ತೆರಳುವಾಗ ಕೊನೆಯುಸಿರೆಳೆದಿದ್ದಾರೆ.
ಸಾತೊಡ್ಡಿ ಜಲಪಾತ ವೀಕ್ಷಣೆಗೆ ತೆಳಿದ್ದ ಪ್ರವಾಸಿಗರ ಮೇಲೆ ಜೇನು ದಾಳಿ
ಉತ್ತರ ಕನ್ನಡ, ಏ.14: ಜಿಲ್ಲೆಯ ಯಲ್ಲಾಪುರ ತಾಲೂಕಿನ ಸಾತೊಡ್ಡಿ ಜಲಪಾತ ನೋಡಲು ತೆರಳಿದ್ದ ಪ್ರವಾಸಿಗರ ಮೇಲೆ ಜೇನು ದಾಳಿ ಮಾಡಿದ್ದು, 30ಕ್ಕೂ ಹೆಚ್ಚು ಪ್ರವಾಸಿಗರಿಗೆ ಗಾಯವಾಗಿದೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನುಳಿದಂತೆ ಗಂಭೀರ ಗಾಯಗೊಂಡ ನಾಲ್ವರಿಗೆ ಹುಬ್ಬಳ್ಳಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬೇಸಿಗೆ ಹಿನ್ನೆಲೆ ಆಟವಾಡಲು ಪ್ರವಾಸಿಗರು ಜಲಪಾತಕ್ಕೆ ಇಳಿದಿದ್ದರು. ಈ ವೇಳೆ ಜೇನು ದಾಳಿ ಮಾಡಿದೆ.
ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ಅರಣ್ಯ ಇಲಾಖೆ ನಿರ್ಬಂಧ
ಇನ್ನು ಜಲಪಾತದ ಬಳಿಯೇ ಪ್ರವಾಸಿಗರ ಮೇಲೆ ಜೇನುಹುಳಗಳ ದಾಳಿ ಹಿನ್ನಲೆ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ಅರಣ್ಯ ಇಲಾಖೆ ನಿರ್ಬಂಧ ಹೇರಿದೆ. ಬಿಸಗೋಡ ಕ್ರಾಸ್‌ನಲ್ಲಿ ಬ್ಯಾನರ್ ಅಳವಡಿಸಿ ಪ್ರವಾಸಿಗರಿಗೆ ಸೂಚನೆ ನೀಡಲಾಗಿದ್ದು, ಜಲಪಾತ ವೀಕ್ಷಣೆಗೆ ಬಂದ ಪ್ರವಾಸಿಗರು, ಬೇಸರದಿಂದ ವಾಪಸ್ ತೆರಳುತ್ತಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:09 pm, Sun, 14 April 24