AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಪ್ರೀತಿಸಿ ಮದುವೆಯಾಗಿದ್ದ ಯುವತಿ ವಿದ್ಯುತ್ ಶಾಕ್​ನಿಂದ ಸಾವು; ಮಗಳದ್ದು ಕೊಲೆ ಅಂತಿರೋ ಹೆತ್ತವರು, ಇಲ್ಲಿದೆ ವಿವರ

ಅವರಿಬ್ಬರದು ಬೇರೆ ಬೇರೆ ಜಾತಿ. ಆದರೂ ಕೂಡ ಇಬ್ಬರ ನಡುವೆ ಪ್ರೀತಿ ಉಂಟಾಗಿತ್ತು. ಹೀಗಾಗಿ ಇಬ್ಬರು ಮನೆ ಬಿಟ್ಟು ಓಡಿ ಹೋಗಿದ್ದರು. ಮಗಳು ಎಲ್ಲಾದ್ರು, ಚೆನ್ನಾಗಿರಲಿ ಎಂದು ಹೆತ್ತವರು ಕೂಡ ಸುಮ್ಮನಾಗಿದ್ದರು. ಆದ್ರೆ, ಮದುವೆಯಾದ ಒಂದೇ ವರ್ಷದಲ್ಲಿ ಮಗಳು ಬಾರದ ಲೋಕಕ್ಕೆ ಹೋಗಿದ್ದಾಳೆ. ತಮ್ಮ ಮಗಳನ್ನು ಪತಿ ಮತ್ತು ಆತನ ಕುಟುಂಬದವರು ಕೊಲೆ ಮಾಡಿದ್ದಾರೆಂದು ಹೆತ್ತವರು ಆರೋಪಿಸುತ್ತಿದ್ದಾರೆ.

ಕಲಬುರಗಿ: ಪ್ರೀತಿಸಿ ಮದುವೆಯಾಗಿದ್ದ ಯುವತಿ ವಿದ್ಯುತ್ ಶಾಕ್​ನಿಂದ ಸಾವು; ಮಗಳದ್ದು ಕೊಲೆ ಅಂತಿರೋ ಹೆತ್ತವರು, ಇಲ್ಲಿದೆ ವಿವರ
ಮೃತ ಮಹಿಳೆ
ಸಂಜಯ್ಯಾ ಚಿಕ್ಕಮಠ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Sep 14, 2023 | 5:48 PM

Share

ಕಲಬುರಗಿ, ಸೆ.14: ಮೂಲತಃ ಯಾದಗಿರಿ (Yadagiri) ಜಿಲ್ಲೆಯ ಶಹಪೂರ್ ತಾಲೂಕಿನ ಹರಳಹಳ್ಳಿ ಗ್ರಾಮದ ನಿವಾಸಿಯಾಗಿದ್ದ ಹತ್ತೊಂಬತ್ತು ವರ್ಷದ ಭಾಗ್ಯಶ್ರೀ ಎನ್ನುವ ಯುವತಿ ನಿನ್ನೆ(ಸೆ.13)  ವಿದ್ಯುತ್ ಶಾಕ್ (Electric Shock) ನಿಂದ ಮೃತಪಟ್ಟಿದ್ದಾಳಂತೆ. ಕಲಬುರಗಿ (Kalaburagi) ನಗರದ ಕೋಟನೂರು ಬಳಿ ಬಾಡಿಗೆ ಮನೆಯಲ್ಲಿ ಪತಿಯ ಜೊತೆ ವಾಸವಾಗಿದ್ದ ಭಾಗ್ಯಶ್ರೀ ಬಾರದ ಲೋಕಕ್ಕೆ ಹೋಗಿದ್ದಾಳೆ. ನಿನ್ನೆ ಮಧ್ಯಾಹ್ನ ಭಾಗ್ಯಶ್ರೀ ಕುಟುಂಬದವರಿಗೆ ಪತಿ ಮನೆಯವರು ಪೋನ್ ಮಾಡಿ, ಭಾಗ್ಯಶ್ರೀ ಮೃತಪಟ್ಟಿರೋದಾಗಿ ಹೇಳಿದ್ದಾರೆ. ಹೀಗಾಗಿ ಭಾಗ್ಯಶ್ರೀ ಹೆತ್ತವರು ಮತ್ತು ಕುಟುಂಬದವರು ಕಲಬುರಗಿ ನಗರಕ್ಕೆ ಧಾವಿಸಿ ಬಂದಿದ್ದರು. ಆದ್ರೆ, ಮೈ ಮೇಲೆ ಕೆಲವಡೆ ಗಾಯದ ಗುರುತುಗಳು ಇರೋದರಿಂದ, ಭಾಗ್ಯಶ್ರೀ ವಿದ್ಯುತ್ ಶಾಕ್​ನಿಂದ ಮೃತಪಟ್ಟಿಲ್ಲ, ಬದಲಾಗಿ ಆಕೆಯ ಪತಿ ಮತ್ತು ಕುಟುಂಬದವರೇ ಕೊಲೆ ಮಾಡಿ, ಕರೆಂಟ್ ಶಾಕ್ ಹೊಡಿಸಿ ಸಾಯಿಸಿದ್ದಾರೆ ಎಂದು ಆರೋಪಿಸುತ್ತಿದ್ದಾರೆ.

ಇನ್ನು ಯಾದಗಿರಿ ಜಿಲ್ಲೆಯ ಹರಳಹಳ್ಳಿ ಗ್ರಾಮದ ಭಾಗ್ಯಶ್ರೀಯದು ಪ್ರೇಮ ವಿವಾಹ. ಅದೇ ಗ್ರಾಮದ ಶಂಕರಗೌಡ ಮತ್ತು ಭಾಗ್ಯಶ್ರೀ ನಡುವೆ ಪ್ರೀತಿ ಮೂಡಿದೆ. ಆದ್ರೆ, ಜಾತಿ ಬೇರೆ ಬೇರೆಯಾಗಿದ್ದರಿಂದ ಮನೆಯವರು ವಿರೋಧ ವ್ಯಕ್ತಪಡಿಸಿದ್ದರಂತೆ. ಇದರಿಂದ ಇಬ್ಬರು ಮನೆ ಬಿಟ್ಟು ಹೋಗಿ, ಭಾಗ್ಯಶ್ರೀಗೆ ಹದಿನೆಂಟು ವರ್ಷವಾದ ಮೇಲೆ ಬಂದಿದ್ದರಂತೆ. ಈ ಬಗ್ಗೆ ಯಾದಗಿರಿ ಜಿಲ್ಲೆಯ ಭೀಮರಾಯನ ಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆಯಂತೆ. ಆಗ ಕೂಡ ಭಾಗ್ಯಶ್ರೀ ಹೆತ್ತವರು ತಮ್ಮ ಜೊತೆ ಬಂದು ಬಿಡು ಎಂದು ಮಗಳಿಗೆ ಹೇಳಿದ್ದು, ಆದರೆ ತಾನು ಬದುಕಿದ್ರೆ ಶಂಕರಗೌಡನ ಜೊತೆಯೇ ಎಂದು ಭಾಗ್ಯಶ್ರೀ ಹೇಳಿದ್ದಳಂತೆ.

ಇದನ್ನೂ ಓದಿ:ಚಾಮರಾಜನಗರ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು; ಯುವಕ ಸಾವು, ಯುವತಿ ಸ್ಥಿತಿ ಚಿಂತಾಜನಕ

ಇನ್ನು ಭಾಗ್ಯಶ್ರೀ ಈಗಾಗಲೇ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಹೀಗಾಗಿ ಮಗಳು ಎಲ್ಲಾದ್ರು ಇರಲಿ ಚೆನ್ನಾಗಿರಲಿ ಎಂದು ಸುಮ್ಮನಾಗಿದ್ದರಂತೆ. ಇದೀಗ ಮಗಳು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಹೆತ್ತವರನ್ನು ಕಂಗಾಲು ಮಾಡಿದೆ. ಸದ್ಯ ಭಾಗ್ಯಶ್ರೀ ಸಾವಿಗೆ ಸಂಬಂಧಿಸಿದಂತೆ ಕಲಬುರಗಿ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಅಸಹಹಜ ಸಾವು ಪ್ರಕರಣ ದಾಖಲಾಗಿದೆ. ಪೊಲೀಸರು ಭಾಗ್ಯಶ್ರೀ ಪತಿ ಶಂಕರಗೌಡನನ್ನು ವಶಕ್ಕೆ ಪಡೆದು ವಿಚಾರಣೆ ಕೂಡ ನಡೆಸುತ್ತಿದ್ದಾರೆ. ವಿಚಾರಣೆ ನಂತರವೇ ಭಾಗ್ಯಶ್ರೀ ಕರೆಂಟ್ ಶಾಕ್​ನಿಂದ ಮೃತಪಟ್ಟಿರೋದಾ ಅಥವಾ ಕೊಲೆಯಾ ಅನ್ನೋದು ಗೊತ್ತಾಗಲಿದೆ. ಆದ್ರೆ, ಬಾಳಿ ಬದುಕಬೇಕಿದ್ದ ಯುವತಿ, ಚಿಕ್ಕ ವಯಸ್ಸಿನಲ್ಲಿಯೇ ಬಾರದ ಲೋಕಕ್ಕೆ ಹೋಗಿದ್ದು, ಮಾತ್ರ ದುರಂತವೇ ಸರಿ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:47 pm, Thu, 14 September 23

Follow Us
Sanjayya Chikkamath
Sanjayya Chikkamath

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ