AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿಯಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರು ಸಾವು

ಚಿಂಚೋಳಿ ತಾಲೂಕಿನ ಮಗದಂಪುರ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬೀದರ್​ನಿಂದ ತೆಲಂಗಾಣದ ಧಾರೂರ್ ಗೆ ತೆರಳುತ್ತಿದ್ದ ಕಾರಿಗೆ ತೆಲಂಗಾಣದಿಂದ ಚಿಂಚೋಳಿ ಕಡೆ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕುಂಚಾವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಲಬುರಗಿಯಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರು ಸಾವು
ಕಲಬುರಗಿಯಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರು ಸಾವು..!
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on:Jan 20, 2025 | 3:45 PM

Share

ಕಲಬುರಗಿ, ಜನವರಿ 20: ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ  ಸಾವನ್ನಪ್ಪಿದ್ದು (death), ಮೂವರಿಗೆ ಗಂಭೀರ ಗಾಯಗಳಾಗಿರುವಂತಹ ಘಟನೆ ಜಿಲ್ಲೆಯ ಚಿಂಚೋಳಿ ತಾಲೂಕಿನ ಮಗದಂಪುರ ಬಳಿ ದುರಂತ ಸಂಭವಿಸಿದೆ. ಅವಿನಾಶ್(24), ಅಭಿಷೇಕ್(26), ಸಂಜೀವ್(40) ಮೃತರು. ಕುಂಚಾವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರಿನಲ್ಲಿದ್ದವರು ಬೀದರ್​ನಿಂದ ತೆಲಂಗಾಣದ ಧಾರೂರಿನತ್ತ ತೆರಳುತ್ತಿದ್ದರು. ಈ ವೇಳೆ ತೆಲಂಗಾಣದಿಂದ ಚಿಂಚೋಳಿ ಕಡೆ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಮೂವರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಲಾರಿ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಕಾನ್ಸ್​​ಟೇಬಲ್​ ಪತ್ನಿ ದುರ್ಮರಣ

ಇನ್ನು ಮತ್ತೊಂದು ಪ್ರಕರಣದಲ್ಲಿ ಲಾರಿ ಡಿಕ್ಕಿಯಾಗಿ ಬೈಕ್​ನಲ್ಲಿ ತೆರಳುತ್ತಿದ್ದ ಕಾನ್ಸ್​​ಟೇಬಲ್​ ಪತ್ನಿ ಸಾವನ್ನಪ್ಪಿರುವಂತಹ ಘಟನೆ ಕಲಬುರಗಿ ನಗರದ ಪೂಜಾರಿ ಚೌಕ್​ ಬಳಿ ನಡೆದಿದೆ. ಕಾನ್ಸ್​ಟೇಬಲ್ ಈರಣ್ಣ ಹೊಸಮನಿ ಪತ್ನಿ ಈರಮ್ಮ(42) ಮೃತರು.

ಇದನ್ನೂ ಓದಿ: ಜಾತ್ರೆ ಗಲಾಟೆ ಕೊಲೆಯಲ್ಲಿ ಅಂತ್ಯ: ಸಿನಿಮಾ ರೀತಿಯಲ್ಲಿ ಸ್ಕೆಚ್ ಹಾಕಿ ಕುಸ್ತಿ ಪೈಲ್ವಾನ್​ ಹತ್ಯೆ

ಪುತ್ರ ಪ್ರಶಾಂತ್ ಜೊತೆ ಬೈಕ್​ನಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್​ನಿಂದ ಈರಮ್ಮ ಕೆಳಗೆ ಬಿದಿದ್ದಾರೆ. ಈ ವೇಳೆ ಅವರ ಮೇಲೆ ಲಾರಿ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಲಬುರಗಿ ಸಂಚಾರಿ ಪೊಲೀಸ್​ ಠಾಣೆ-2ರಲ್ಲಿ ಪ್ರಕರಣ ದಾಖಲಾಗಿದೆ.

ದೇವಸ್ಥಾನದ ಹುಂಡಿಯನ್ನೇ ಹೊತ್ತೊಯ್ದ ಖತರ್ನಾಕ್‌ ಕಳ್ಳರು

ದೇವಸ್ಥಾನದ ಹುಂಡಿಯನ್ನೆ ಖತರ್ನಾಕ್‌ ಕಳ್ಳರು ಹೊತ್ತೊಯ್ದಿರುವಂತಹ ಘಟನೆ ಜಿಲ್ಲೆಯ ಕಾಳಗಿ ತಾಲ್ಲೂಕಿನ ಕಂದಗೋಳ ಗ್ರಾಮದ ವೀರಭದ್ರೇಶ್ವರ ದೇವಸ್ಥಾನದಲ್ಲಿ ನಡೆದಿದೆ. ಬೈಕ್​ನಲ್ಲಿ ಬಂದ ದುಷ್ಕರ್ಮಿಗಳು ಹುಂಡಿಯನ್ನ ಹೊತ್ತೊಯ್ದಿದ್ದಾರೆ. ಕಳ್ಳರ ಈ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಾಳಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:33 pm, Mon, 20 January 25