ಕಲಬುರಗಿ: ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ 20 ವರ್ಷ ಜೈಲು; ಕೋರ್ಟ್​

| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 30, 2023 | 3:19 PM

ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ ಕಲಬುರಗಿ(Kalaburagi) ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ (ವಿಶೇಷ ಪೋಕ್ಸೊ) ನ್ಯಾಯಾಲಯವು 20 ವರ್ಷ ಜೈಲು ಹಾಗೂ  20 ಸಾವಿರ ರೂ. ದಂಡ ವಿಧಿಸಿದೆ. ಜೇವರ್ಗಿ ಪೊಲೀಸ್‌ ಠಾಣಾ ವ್ಯಾಪ್ತಿಯ ಶರಣ ಶಿಕ್ಷೆಗೆ ಒಳಗಾದ ವ್ಯಕ್ತಿ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಶಿಕ್ಷೆ ವಿಧಿಸಿದೆ.

ಕಲಬುರಗಿ: ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ 20 ವರ್ಷ ಜೈಲು; ಕೋರ್ಟ್​
ಪ್ರಾತಿನಿಧಿಕ ಚಿತ್ರ
Follow us on

ಕಲಬುರಗಿ, ಡಿ.30: ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ ಕಲಬುರಗಿ(Kalaburagi) ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ (ವಿಶೇಷ ಪೋಕ್ಸೊ) ನ್ಯಾಯಾಲಯವು 20 ವರ್ಷ ಜೈಲು ಹಾಗೂ  20 ಸಾವಿರ ರೂ. ದಂಡ ವಿಧಿಸಿದೆ. ಜೇವರ್ಗಿ ಪೊಲೀಸ್‌ ಠಾಣಾ ವ್ಯಾಪ್ತಿಯ ಶರಣ ಶಿಕ್ಷೆಗೆ ಒಳಗಾದ ವ್ಯಕ್ತಿ. ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ (ವಿಶೇಷ ಪೋಕ್ಸೊ) ನ್ಯಾಯಾಲಯದ ಎಫ್‌ಟಿಎಸ್‌ಸಿ-1 ನ್ಯಾಯಾಧೀಶ ಯಮನಪ್ಪ ಬಮ್ಮಣಗಿ ಅವರು ಅಪರಾಧಿಗೆ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ. ಜೊತೆಗೆ ಈ ಪ್ರಕರಣದಲ್ಲಿ ನೊಂದ ಬಾಲಕಿಗೆ ಕಾನೂನು ಪ್ರಾಧಿಕಾರ ವತಿಯಿಂದ 7 ಲಕ್ಷ ರೂ. ಪರಿಹಾರವಾಗಿ ಅದು ಒಂದು ತಿಂಗಳ ಒಳಗೆ ನೀಡಬೇಕು ಎಂದು ಆದೇಶಿಸಿದ್ದಾರೆ.

ಘಟನೆ ವಿವರ

ಜೇವರ್ಗಿ ಪೊಲೀಸ್‌ ಠಾಣಾ ವ್ಯಾಪ್ತಿಯ ಬಾಲಕಿಯನ್ನು ಆರೋಪಿ ಶರಣು ಚುಡಾಯಿಸುತ್ತಿದ್ದ. ಅಲ್ಲದೇ 2022ರ ಜನವರಿಯಲ್ಲಿ ಆಕೆಯ ಜನ್ಮ ದಿನದಂದು ಆಕೆಯನ್ನು ಪ್ರೀತಿಸುತ್ತೇನೆ ಹಾಗೂ ಮದುವೆಯಾಗುವುದಾಗಿ ಹೇಳಿ ಒತ್ತಾಯಪೂರ್ವಕವಾಗಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದ. ಈ ಘಟನೆ ಕುರಿತ ವಿಷಯವನ್ನು ಯಾರಿಗಾದರೂ ಹೇಳಿದರೆ ಮರ್ಯಾದೆ ಕಳೆಯುವುದಾಗಿ ಕೂಡ ಬೆದರಿಕೆ ಹಾಕಿದ್ದ. ಇದಲ್ಲದೇ 2022ರ ಜ.25 ರಂದು ಚನ್ನೂರ ಗ್ರಾಮದ ತಮ್ಮ ಸಂಬಂಧಿಕರ ಮನೆಯಲ್ಲಿದ್ದ ಬಾಲಕಿಯನ್ನು ಒತ್ತಾಯಪೂರ್ವಕವಾಗಿ ಕಾರಿನಲ್ಲಿ ಬೆಂಗಳೂರಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದ.

ಇದನ್ನೂ ಓದಿ:ಹುಬ್ಬಳ್ಳಿ: ಮದಾರಾಸಾದ ಶಿಕ್ಷಕಿಗೆ ಮತ್ತು ಬರುವ ಔಷಧಿ ನೀಡಿ ನಿರಂತರ ಅತ್ಯಾಚಾರವೆಸಗಿದ್ದ ಆರೋಪಿಯ ಬಂಧನ

ಕೊಲೆ ಮಾಡುವುದಾಗಿ ಬೆದರಿಕೆ

ಬಾಲಕಿಯು ತಪ್ಪಿಸಿಕೊಳ್ಳಲು ಯತ್ನಿಸಿದಾಗ ಆಕೆಯನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ. ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿಯ ದೊಡ್ಡನಾಗಮಂಗಲದ ಮನೆಯೊಂದ ರಲ್ಲಿ ಕೂಡಿ ಹಾಕಿದ್ದ. ಈ ಕುರಿತು ನಡೆದ ತನಿಖೆ ಮತ್ತು ಸಾಕ್ಷ್ಯಾಧಾರಗಳಿಂದ ಆರೋಪವು ರುಜುವಾತಾಗಿದ್ದರಿಂದ ನ್ಯಾಯಾಲಯವು ಶಿಕ್ಷೆ ವಿಧಿಸಿದೆ. ಜೇವರ್ಗಿ ಸಿಪಿಐ ಶಿವಪ್ರಸಾದ್‌ ದೋಷರೋಪ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಶಾಂತವೀರ ಬಿ.ತುಪ್ಪದ ವಾದ ಮಂಡಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ