ಅನುಮತಿ ಪಡೆಯದೆ ಕಬ್ಬು ಅರಿದಿರುವ ಆರೋಪ: ಶಾಸಕ ಯತ್ನಾಳ್‌ಗೆ ನೋಟಿಸ್ ಜಾರಿ

ಅನುಮತಿ ಪಡೆಯದೆ ಕಬ್ಬು ಅರಿದಿರುವುದು ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮ‌ ಉಲಂಘಿಸಿರುವ ಆರೋಪ ಹಿನ್ನೆಲೆ ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಇಲಾಖೆ ಆಯುಕ್ತರು ಹಾಗೂ ನಿರ್ದೆಶಕರಿಂದ ಚಿಂಚೋಳಿಯ ಸಿದ್ದಸಿರಿ ಸಕ್ಕರೆ ಕಾರ್ಖಾನೆ ಮಾಲಿಕ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ಗೆ ನೋಟಿಸ್ ಜಾರಿ ಮಾಡಲಾಗಿದೆ. 2‌4‌ ಗಂಟೆಯಲ್ಲಿ ನೋಟಿಸ್​ಗೆ ಉತ್ತರಿಸುವಂತೆ ತಿಳಿಸಲಾಗಿದೆ.

ಅನುಮತಿ ಪಡೆಯದೆ ಕಬ್ಬು ಅರಿದಿರುವ ಆರೋಪ: ಶಾಸಕ ಯತ್ನಾಳ್‌ಗೆ ನೋಟಿಸ್ ಜಾರಿ
ಸಿದ್ದಸಿರಿ ಸಕ್ಕರೆ ಕಾರ್ಖಾನೆ
Follow us
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: ಗಂಗಾಧರ​ ಬ. ಸಾಬೋಜಿ

Updated on:Feb 16, 2024 | 6:41 PM

ಕಲಬುರಗಿ, ಫೆಬ್ರವರಿ 16: ಅನುಮತಿ ಪಡೆಯದೆ ಕಬ್ಬು ಅರಿದಿರುವ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮ‌ ಉಲ್ಲಂಘಿಸಿರುವ ಆರೋಪ ಹಿನ್ನೆಲೆ ಚಿಂಚೋಳಿಯ ಸಿದ್ದಸಿರಿ ಸಕ್ಕರೆ ಕಾರ್ಖಾನೆ ಮಾಲೀಕ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ (Basanagouda Patil Yatnal)ಗೆ ನೋಟಿಸ್ ಜಾರಿ ಮಾಡಲಾಗಿದೆ. ಕಬ್ಬು ಅಭಿವೃದ್ಧಿ, ಸಕ್ಕರೆ ಇಲಾಖೆ ಆಯುಕ್ತರು ಹಾಗೂ ನಿದೇಶಕರಿಂದ ನೋಟಿಸ್‌ ನೀಡಲಾಗಿದೆ. ನಿಮ್ಮ ವಿರುದ್ಧ ಏಕೆ ಕೇಸ್ ದಾಖಲಿಸಬಾರದೆಂದು ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದ್ದು, 24 ಗಂಟೆಯಲ್ಲಿ ನೋಟಿಸ್‌ಗೆ ಉತ್ತರಿಸುವಂತೆ ಪತ್ರದಲ್ಲಿ ತಿಳಿಸಲಾಗಿದೆ. ಒಂದು ವೇಳೆ ಉತ್ತರ ನೀಡದಿದ್ದರೆ ದೂರು ದಾಖಲಿಸುವುದಾಗಿ ಯತ್ನಾಳ್‌ಗೆ ಎಚ್ಚರಿಕೆ ನೀಡಲಾಗಿದೆ.

ಇತ್ತೀಚೆಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಒಡೆತನದ ಸಕ್ಕರೆ ಕಾರ್ಖಾನೆ ಬಂದ್​ಗೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ನೀಡಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿತ್ತು. ವಾಯು, ಜಲ ಕಾಯ್ದೆ ಉಲ್ಲಂಘನೆ ಆರೋಪ ಹಿ‌ನ್ನಲೆ ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಚಿಮ್ಮಾಯಿದಲಾಯಿ ಗ್ರಾಮದ ಬಳಿ ಇರುವ ಯತ್ನಾಳ್ ಒಡೆತನದ ಸಿದ್ದ ಶ್ರೀ ಸಕ್ಕರೆ ಕಾರ್ಖಾನೆ ಬಂದ್​ಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಇತ್ತೀಚೆಗೆ ಆದೇಶಿಸಿತ್ತು.

ಇದನ್ನೂ ಓದಿ: ಕೈಲಾಗದವರ ಕೊನೆಯ ಅಸ್ತ್ರವೇ ಅಪಪ್ರಚಾರ; ಸಕ್ಕರೆ ಕಾರ್ಖಾನೆ ನೋಟಿಸ್​ಗೆ ಸರ್ಕಾರದ ವಿರುದ್ಧ ಯತ್ನಾಳ್ ಕಿಡಿ

ಪರಿಸರ ನಿಯಮ ಉಲ್ಲಂಘನೆ ಆರೋಪದಡಿ ಯತ್ನಾಳ್ ಒಡೆತನದ ಸಕ್ಕರೆ ಕಾರ್ಖಾನೆ ಮುಚ್ಚಲು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶಿಸಿತ್ತು. ಈ ಕುರಿತು ಯತ್ನಾಳ್ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ಮೇಲೆ ಹರಿ ಹಾಯ್ದಿದ್ದರು.

ಇದನ್ನೂ ಓದಿ: ಪರಿಸರ ನಿಯಮಾವಳಿ ಉಲ್ಲಂಘನೆ ಆರೋಪ: ಯತ್ನಾಳ್ ಸಕ್ಕರೆ ಕಾರ್ಖಾನೆ ಮುಚ್ಚಲು ಕೆಎಸ್‌ಪಿಸಿಬಿ ಆದೇಶ

“ಕಾಂಗ್ರೆಸ್ ಸರ್ಕಾರ ನಮ್ಮ ಸಿದ್ದಸಿರಿ ಸಕ್ಕರೆ ಹಾಗೂ ಎಥನಾಲ್ ಕಾರ್ಖಾನೆ ಮುಚ್ಚಲು ನೀಡಿದ್ದ ನೋಟಿಸ್ ಹಾಗು ಮುಚ್ಚುವ ಷಡ್ಯಂತ್ರಕ್ಕೆ ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯ ತಡೆ ನೀಡಿದೆ” ಎಂದು ಯತ್ನಾಳ್ ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:47 pm, Fri, 16 February 24

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ