ಕಲಬುರಗಿ, ನವೆಂಬರ್ 28: ಜಮೀನು ವ್ಯಾಜ್ಯ ಹಿನ್ನೆಲೆಯಲ್ಲಿ ಪೆಟ್ರೋಲ್ (Petrol) ಬಾಂಬ್ ಹಾಕಿ ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನಿಸಿರುವಂತಹ ಘಟನೆ ಕಲಬುರಗಿ ತಾಲೂಕಿನ ಕಡಣಿ ಗ್ರಾಮದಲ್ಲಿ ಘಟನೆ ನಡೆದಿದೆ. ಗುಂಡೆರಾವ್ ಕುಟುಂಬ ಹತ್ಯೆಗೆ ಶಿವಲಿಂಗಪ್ಪ ಕರಿಕಲ್ ಯತ್ನಿಸಿದ್ದಾರೆ. ಮನೆಯಲ್ಲಿ ಸುಮಾರು 6-7 ಜನರಿದ್ದರು ಎನ್ನಲಾಗಿದೆ. ಫರಹತಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಬೆಂಕಿ ಹಚ್ಚುತ್ತಿದ್ದಂತೆ ಕುಟುಂಬ ಬಾಗಿಲು ಬಂದ್ ಮಾಡಿಕೊಂಡಿದ್ದರು. ಮನೆ ಬಾಗಿಲು ಮುರಿದು ಕುಟುಂಬಸ್ಥರನ್ನು ಗ್ರಾಮಸ್ಥರು ರಕ್ಷಿಸಿದ್ದಾರೆ. ಹೀಗಾಗಿ ಭಾಗಶಃ ಮನೆ ಸುಟ್ಟು ಕರಕಲಾಗಿದೆ. ಸದ್ಯ ಅಸ್ವಸ್ಥಗೊಂಡ ಕುಟುಂಬಕ್ಕೆ ಕಲಬುರಗಿ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಇದನ್ನೂ ಓದಿ: ಗಾಣಗಾಪುರದ ಶ್ರೀ ದತ್ತಾತ್ರೇಯನ ದರ್ಶನಕ್ಕೆ ತೆರಳುತ್ತಿದ್ದ ನಾಲ್ವರು ಅಪಘಾತದಲ್ಲಿ ಸಾವು
ಗುಂಡೆರಾವ್ಗೆ ಶಿವಲಿಂಗಪ್ಪ 4 ಎಕರೆ ಜಮೀನು ಮಾರಾಟ ಮಾಡಿದ್ದ. ಶಿವಲಿಂಗಪ್ಪ 4 ವರ್ಷದ ಹಿಂದೆ 13 ಲಕ್ಷ ರೂ. ಅಡ್ವಾನ್ಸ್ ಪಡೆದಿದ್ದರು. ಬಳಿಕ ಜಮೀನು ನೋಂದಣಿ ಮಾಡಿಕೊಡುವ ವಿಚಾರದಲ್ಲಿ ವಿವಾದ ಉಂಟಾಗಿ ಜಮೀನು ನೋಂದಣಿ ಮಾಡಿಕೊಡಲು ವಿರೋಧಿಸಿದ್ದಾರೆ.
ಕಡಣಿ ಗ್ರಾಮಕ್ಕೆ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಭೇಟಿ ನೀಡಿದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಸಾಮೂಹಿಕ ಹತ್ಯೆಗೆ ಯತ್ನ ನಡೆದಿತ್ತು. ಕಡಣಿ ಗ್ರಾಮದ ಗುಂಡೇರಾಯ ಅವರ ಮನೆಗೆ ಬೆಂಕಿ ಹಚ್ಚಲಾಗಿತ್ತು. ಸ್ಥಳೀಯರ ಸಮಯ ಪ್ರಜ್ಞೆಯಿಂದ ಭಾರಿ ಅನಾಹತ ತಪ್ಪಿತ್ತು ಎಂದು ಹೇಳಿದ್ದಾರೆ.
ಸಾರ್ವಜನಿಕರು ಕಳೆದುಕೊಂಡ ಮೊಬೈಲ್ನ್ನು ಹುಡುಕಿಕೊಡುವಂತೆ ಸಿಇಐಆರ್ ಪೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಇದೀಗ ಸಾರ್ವಜನಿಕರು ಸಿಇಐಆರ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಿದ ಹಿನ್ನಲೆಯಲ್ಲಿ ಕಾರ್ಯಚರಣೆ ನಡೆಸಿದ ಕಲಬುರಗಿ ಪೊಲೀಸರು ಕಳೆದುಹೋಗಿದ್ದ 101 ಮೊಬೈಲ್‌ಗಳನ್ನ ವಾರಸುದಾರರಿಗೆ ನಗರ ಪೊಲೀಸ್ ಆಯುಕ್ತ ಚೇತನ್ ಆರ್ ಹಸ್ತಾಂತರ ಮಾಡಿದ್ದಾರೆ.
ಇದನ್ನೂ ಓದಿ: ಕಲಬುರಗಿ ನವಜಾತ ಶಿಶು ಅಪಹರಣ ಪ್ರಕರಣ: 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು
ಕಳೆದ 6 ತಿಂಗಳಲ್ಲಿ ವಿವಿಧ ಠಾಣಾ ವ್ಯಾಪ್ತಿಯಲ್ಲಿ ದಾಖಲಾದ ಪ್ರಕರಣಗಳಡಿ ಪೊಲೀಸರು ಮಹಾರಾಷ್ಟ್ರ, ತೆಲಂಗಾಣ, ಆಂದ್ರಪ್ರದೇಶ ಸೇರಿದಂತೆ ವಿವಿಧೆಡೆ 24 ಲಕ್ಷ 50 ಸಾವಿರ ರೂಪಾಯಿ ಮೌಲ್ಯದ 101 ಮೊಬೈಲ್‌ಗಳನ್ನ ವಾರಸುದಾರರಿಗೆ ಹಸ್ತಾಂತರ ಮಾಡಿದ್ದರು.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.