25 ವರ್ಷ ದುಡಿದರೂ ಪಕ್ಷ ನನ್ನನ್ನು ಗುರುತಿಸಿಲ್ಲ: ಕಲಬುರಗಿ ಬಿಜೆಪಿ ನಾಯಕಿಯ ಕಣ್ಣೀರು

ಈ ಸಂದರ್ಭದಲ್ಲಿ ಸಾವಿತ್ರಿ ಕುಳಗೇರಿಯನ್ನು ಶೋಭಾ ಕರಂದ್ಲಾಜೆ ಸಂತೈಸಿದ್ದಾರೆ.

25 ವರ್ಷ ದುಡಿದರೂ ಪಕ್ಷ ನನ್ನನ್ನು ಗುರುತಿಸಿಲ್ಲ: ಕಲಬುರಗಿ ಬಿಜೆಪಿ ನಾಯಕಿಯ ಕಣ್ಣೀರು
ಶೋಭಾ ಕರಂದ್ಲಾಜೆಯ ಎದುರೇ ಅತ್ತ ಬಿಜೆಪಿ ಕಾರ್ಯಕರ್ತೆ
Follow us
TV9 Web
| Updated By: guruganesh bhat

Updated on: Sep 04, 2021 | 8:05 PM

ಕಲಬುರಗಿ: ಪಕ್ಷದಲ್ಲಿ ಇಪ್ಪತ್ತೈದು ವರ್ಷದಿಂದ ದುಡಿಯುತ್ತಿದ್ದೇನೆ. ಆದರೂ ಕೂಡಾ ನನ್ನನ್ನು ಯಾವುದೇ ಬೋರ್ಡ್ ಗೆ ನಾಮನಿರ್ದೇಶನ ಮಾಡಿಲ್ಲ. ನನಗೆ ಅನ್ಯಾಯವಾಗಿದೆ ಎಂದು ಬಿಜೆಪಿ ನಾಯಕರೊಬ್ಬರು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮುಂದೆ ಕಣ್ಣೀರು ಹಾಕಿದ ಘಟನೆ ನಡೆದಿದೆ. ಇಂದು ಮಧ್ಯಾಹ್ನ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಕಲಬುರಗಿ ನಗರದಲ್ಲಿರುವ ಬಿಜೆಪಿ ಕಚೇರಿಗೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಕಲಬುರಗಿ ಬಿಜೆಪಿ ಮುಖಂಡೆಯಾಗಿರುವ ಸಾವಿತ್ರಿ ಕುಳಗೇರಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಎದುರು ತನ್ನನ್ನು ಪಕ್ಷ ಗುರುತಿಸಿಲ್ಲ ಎಂದು ಕಣ್ಣೀರು ಹಾಕಿದ್ದಾರೆ. ಪಕ್ಷಕ್ಕಾಗಿ ಅನೇಕ ವರ್ಷಗಳ ಕಾಲ ದುಡಿದಿದ್ದೇನೆ. ಆದರೂ ಕೂಡಾ ನನ್ನ ಸೇವೆಯನ್ನು ಪಕ್ಷ ಗುರುತಿಸಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮುಂದೆ ಕಣ್ಣೀರು ಹಾಕಿದ್ದಾರೆ. ಈ ಸಂದರ್ಭದಲ್ಲಿ ಸಾವಿತ್ರಿ ಕುಳಗೇರಿಯನ್ನು ಶೋಭಾ ಕರಂದ್ಲಾಜೆ ಸಂತೈಸಿದ್ದಾರೆ.

ಬಿಜೆಪಿ ನಾಯಕರಿಗೆ ಅಧಿಕಾರದ ಮದ ಹೆಚ್ಚಾಗಿದೆ, ವೋಟ್ ಹಾಕ್ಬೇಡಿ; ವೈರಲ್ ಆಯ್ತು ಕಲಬುರಗಿಯ ಬಿಜೆಪಿ ಕಾರ್ಯಕರ್ತನ ಹೇಳಿಕೆ ಬಿಜೆಪಿ ನಾಯಕರಿಗೆ ಅಧಿಕಾರದ ಮದ ಹೆಚ್ಚಾಗಿದೆ. ಮದ ಹೆಚ್ಚಾದ ಕಾರಣಕ್ಕೆ ಕಲ್ಯಾಣ ಕರ್ನಾಟಕ ಭಾಗವನ್ನು ಬಿಜೆಪಿ ನಾಯಕರು ಕಡೆಗಣಿಸಿದ್ದಾರೆ. ನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಗೆ ಬುದ್ಧಿ ಕಲಿಸಬೇಕು. ಹೀಗಾಗಿ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕಬೇಡಿ ಎಂದು ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ರಾಘವೇಂದ್ರ ಚಿಂಚನಸೂರ್ ಕರೆ ನೀಡಿದ್ದಾರೆ. ಅವರ ಈ ಹೇಳಿಕೆಯ ವಿಡಿಯೋ ವೈರಲ್ ಆಗಿದ್ದು, ಕಲಬುರಗಿ ಜಿಲ್ಲೆಯಾದ್ಯಂತ ಸಂಚಲನ ಮೂಡಿಸಿದೆ. ಬಿಜೆಪಿ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರೋರ್ವರೇ ತಿರುಗಿ ಬಿದ್ದು ಹೇಳಿಕೆ ನೀಡಿದ್ದಾರೆ.

ಮದ ಹೆಚ್ಚಾದ ಕಾರಣಕ್ಕೆ ಕಲ್ಯಾಣ ಕರ್ನಾಟಕ ಭಾಗವನ್ನು ಬಿಜೆಪಿ ನಾಯಕರು ಕಡೆಗಣಿಸಿದ್ದಾರೆ.ಕೆಲವು ದಿನಗಳ ಹಿಂದೆ ಬೆಂಗಳೂರಿನ ಬಿಜೆಪಿ ಕಚೇರಿಗೆ ಹೋದಾಗ ಅವರು ನನ್ನನ್ನು ಒಳಗೆ ಬಿಟ್ಟುಕೊಳ್ಳಲಿಲ್ಲ. ಕಲಬುರಗಿಯಿಂದ ಬಂದ ಕಾರ್ಯಕರ್ತರೆಂದು ಮನವಿ ಮಾಡಿದರೂ ಕೊರೊನಾ ನೆಪವೊಡ್ಡಿ ಒಳಗೆ ಬಿಟ್ಟುಕೊಳ್ಳಲಿಲ್ಲ. ಹೆಚ್ಚಾಗಿದ್ದು ಕೊರೊನಾ ಅಲ್ಲ, ಬಿಜೆಪಿ ನಾಯಕರ ಮದ.  ಅವರಿಗೆ ತಕ್ಕ ಪಾಠ ಕಲಿಸಲು ಈಬಾರಿ ನಡೆಯಲಿರುವ ನಗರ ಪಾಲಿಕೆ ಚುನಾವಣೆಯಲ್ಲಿ ಎಲ್ಲರೂ ನೋಟಾ ಚಲಾಯಿಸುವಂತೆ ಬಿಜೆಪಿ ಕಾರ್ಯಕರ್ತ, ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷರೂ ಆದ ರಾಘವೇಂದ್ರ ಚಿಂಚನಸೂರ್ ಮನವಿ ಮಾಡಿದ್ದಾರೆ. ಸ್ವತಃ ಬಿಜೆಪಿ ಕಾರ್ಯಕರ್ತ ಮತ್ತು ಪದಾಧಿಕಾರಿಯೂ ಆಗಿರುವ ಅವರ ಹೇಳಿಕೆ ಈಗ ಬಿಜೆಪಿ ಪಕ್ಷದಾದ್ಯಂತ ಎಂತಹ ಪರಿಣಾಮ ಉಂಟುಮಾಡಲಿದೆ ಮತ್ತು ಬಿಜೆಪಿ ನಾಯಕರ ಪ್ರತಿಕ್ರಿಯೆ ಹೇಗಿರಲಿದೆ ಎಂಬುದನ್ನು ಕಾದುನೋಡಬೇಕಿದೆ.

ಅಷ್ಟೇ ಅಲ್ಲದೇ ಕಲ್ಯಾಣ ಕರ್ನಾಟಕದ ಮುಖ್ಯ ಕೇಂದ್ರ ಕಲಬುರಗಿಯ ಯಾವುದೇ ಶಾಸಕರಿಗೂ ಸಚಿವ ಸ್ಥಾನ ನೀಡಿಲ್ಲ. ಬಜೆಟ್​ನಲ್ಲಿಯೂ ಕಡಿಮೆ ಅನುದಾನ ಒದಗಿಸಿದ್ದಾರೆ. ಬಿಜೆಪಿ ನಾಯಕರಿಗೆ ಕಾರ್ಯಕರ್ತರು ‘ಜೀ’ಎಂದು ನಾವು ಹೇಳುವುದು ಅವರಿಗೆ ಮದ ಏರಿಸುತ್ತದೆ. ಅವರನ್ನು ಈ ಪಾಲಿಕೆ ಚುನಾವಣೆಯಲ್ಲಿ ಮತ ಹಾಕದಿರೋಣ. ಈಮೂಲಕ ಬುದ್ಧಿ ಕಲಿಸೋಣ ಎಂದು ಅವರು ಕರೆ ನೀಡಿದ್ದಾರೆ.

ಇದನ್ನೂ ಓದಿ: 

ಕಲಬುರಗಿಯ ಶರಣಬಸವೇಶ್ವರ ದೇವಾಲಯದ ನಂದಾದೀಪದ ಬಗ್ಗೆ ನಿಮಗೆ ಗೊತ್ತಾ? ವಿಡಿಯೋ ನೋಡಿ

ಕೊಪ್ಪಳ: ಜಾನಪದ ಶ್ರೀ ಪುರಸ್ಕೃತ ಶತಾಯುಷಿ ಅಜ್ಜಿಯೂ ಸೇರಿ ತೊಗಲುಗೊಂಬೆಯಾಟ ಪ್ರದರ್ಶಿಸುವ ಒಂದೇ ಕುಟುಂಬದ 6 ಸದಸ್ಯರು

(Kalaburagi BJP Leader tears in front of Union Minister Shobha Karandlaje)

ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ