ಲಾರಿಗೆ ಕಾರು ಡಿಕ್ಕಿ: ಸ್ಥಳದಲ್ಲೇ ಮೂವರು ಸಾವು, ಮದ್ವೆ ಮನೆಯಲ್ಲಿ ಸೂತಕ

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಬಳಿ ರಸ್ತೆ ಅಪಘಾತ ಸಂಭವಿಸಿದೆ. ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮದುವೆ ಆಮಂತ್ರಣ ಪತ್ರಿಕೆ ವಿತರಿಸಲು ಹೋಗುವಾಗ ಅಪಘಾತ ಸಂಭವಿಸಿದೆ.

ಲಾರಿಗೆ ಕಾರು ಡಿಕ್ಕಿ: ಸ್ಥಳದಲ್ಲೇ ಮೂವರು ಸಾವು, ಮದ್ವೆ ಮನೆಯಲ್ಲಿ ಸೂತಕ
ಪ್ರಾತಿನಿಧಿಕ ಚಿತ್ರ
Edited By:

Updated on: Apr 27, 2025 | 12:07 PM

ಕಲಬುರಗಿ, ಏಪ್ರಿಲ್​ 27: ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ (accident) ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಬಳಿ ನಡೆದಿದೆ. ಮಹೇಶ್ (32), ಪ್ರೇಮ್ ಕುಮಾರ್ (25) ಮತ್ತು ಅನ್ನದಾನಯ್ಯ(25) ಮೃತರು. ನಿತ್ಯಾನಂದ ಎಂಬುವವರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮದುವೆ ಆಮಂತ್ರಣ ಪತ್ರಿಕೆ ಕೊಡಲು ಕಾರಿನಲ್ಲಿ ಸೇಡಂ ಕಡೆಯಿಂದ ಗುಂಡಗುರ್ತಿ ಕಡೆಗೆ ಹೊರಟಿರುವಾಗ ಅಪಘಾತ ಸಂಭವಿಸಿದೆ. ಘಟನೆ ಸಂಬಂಧ ಮಳಖೇಡ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.

ಹೃದಯಾಘಾತದಿಂದ ಪೊಲೀಸ್​​​ ಕಾನ್ಸ್​ಟೇಬಲ್​​ ಸಾವು

ಹೃದಯಾಘಾತದಿಂದ ಪೊಲೀಸ್​​​ ಕಾನ್ಸ್​ಟೇಬಲ್​​ ಸಾವನ್ನಪ್ಪಿರುವಂತಹ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ರಾಮಾಪುರದಲ್ಲಿ ನಡೆದಿದೆ. ಪರಶುರಾಮ್​(37) ಮೃತ ರಾಮಾಪುರ​ ಠಾಣೆಯ ಕಾನ್ಸ್​ಟೇಬಲ್​​​​.

ಇದನ್ನೂ ಓದಿ: ಬೆಂಗಳೂರಿನಲ್ಲಿ ಕನ್ನಡಿಗನ ಮೇಲೆ ವಿಂಗ್ ಕಮಾಂಡರ್​ ರೌಡಿ ವರ್ತನೆ: ಅಸಲಿಗೆ ಆಗಿದ್ದೇನು?

ಇದನ್ನೂ ಓದಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ
ಬೆಂಗಳೂರಿನಲ್ಲಿ ವಿಂಗ್ ಕಮಾಂಡರ್​ ರೌಡಿ ವರ್ತನೆ: ಅಸಲಿಗೆ ಆಗಿದ್ದೇನು?
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ

ಮೃತ ಪರಶುರಾಮ್ ರಾಯಚೂರು ಜಿಲ್ಲೆಯ ಲಿಂಗಸೂರು ತಾಲೂಕಿನ ಮೂಲದವರು. 9 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಹಠಾತ್​ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಟ್ರಾಕ್ಟರ್ ಡಿಕ್ಕಿ: ಯುವಕ ಸಾವು

ಟ್ರಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಯುವಕ ಸಾವನ್ನಪ್ಪಿರುವಂತಹ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕೊಂಡದಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೆಪಿ ಸ್ವಾಮಿ (18) ಮೃತ ಯುವಕ. ಸಂತೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯುವಕ ಕ್ರಿಕೆಟ್ ಆಟವಾಡಿ ನಡೆದುಕೊಂಡು ಮನೆಗೆ ಬರುತ್ತಿದ್ದ. ಈ ವೇಳೆ ಹಿಂದಿನಿಂದ ಬಂದ ಟ್ರಾಕ್ಟರ್ ಡಿಕ್ಕಿ ಹೊಡೆದಿದೆ. ಪರಿಣಾಮ ತಲೆಗೆ ಪೆಟ್ಟಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಟ್ರಾಕ್ಟರ್ ಹಾಗೂ ಚಾಲಕನನ್ನ ಪೊಲೀಸರು ವಶಕ್ಕೆ ಪಡೆದಿದ್ದರು.

ಐಪಿಎಲ್ ಬೆಟ್ಟಿಂಗ್ ನಡೆಸುತ್ತಿದ್ದ ಅಡ್ಡೆ ಮೇಲೆ ಪೊಲೀಸ್​ ದಾಳಿ: ಓರ್ವನ ಬಂಧನ

ಐಪಿಎಲ್ ಬೆಟ್ಟಿಂಗ್ ನಡೆಸುತ್ತಿದ್ದ ಅಡ್ಡೆ ಮೇಲೆ ಸಿಇಎನ್ ಪೊಲೀಸರು ದಾಳಿ ಮಾಡಿ ಓರ್ವನನ್ನು ಬಂಧಿಸಿರುವಂತಹ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಶಿಂಧಿ ಕಾಲೋನಿಯಲ್ಲಿ IPL ಬೆಟ್ಟಿಂಗ್ ನಡೆಸುತ್ತಿದ್ದ ಉದ್ಧವ್ ಜಯರಾಮ್ ದಾಸ್(61) ಅನ್ನು ಸಿಇಎನ್​ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಇನ್ಸ್ಟಾಗ್ರಾಮ್​ನಲ್ಲಿ ಪರಿಚಯವಾದ ಸುಂದರಿಗೆ 25 ಲಕ್ಷ ರೂ ಕೊಟ್ಟ: ಮುಂದೇನಾಯ್ತು?

ಬಂಧಿತನ ಬಳಿ ಇದ್ದ 12 ಆ್ಯಂಡ್ರಾಯ್ಡ್ ಮೊಬೈಲ್, ಐಫೋನ್, 13 ಬೇಸಿಕ್ ಮೊಬೈಲ್, 1 ಸ್ಮಾರ್ಟ್ ಟಿವಿ, 2 ಲಕ್ಷ ನಗದು ಜಪ್ತಿ ಮಾಡಿದ್ದಾರೆ. ಮತ್ತೋರ್ವ ಆರೋಪಿ ಕರನ್ ರೊಛಲಾನಿಗೆ ಹುಡುಕಾಟ ನಡೆಸಿದ್ದು, ಬೆಳಗಾವಿ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:54 am, Sun, 27 April 25