AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿಯಲ್ಲಿ ಒಂದೇ ಹುದ್ದೆಗಾಗಿ ಇಬ್ಬರು ಅಧಿಕಾರಿಗಳ ನಡುವೆ ಫೈಟ್​: ಗೊಂದಲದಲ್ಲಿ ಸಿಬ್ಬಂದಿ

ಕಲಬುರಗಿ CDPO ಹುದ್ದೆಗೆ ಇಬ್ಬರು ಅಧಿಕಾರಿಗಳ ನಡುವೆ ಜಟಾಪಟಿ ನಡೆದಿದೆ. ಶ್ರೀನಿವಾಸ್ ಬಾಳವಾಳೆ ಮತ್ತು ಶಿವಶರಣಪ್ಪ ಎಂಬುವವರು ಒಂದೇ ಹುದ್ದೆಗೆ ಹಕ್ಕು ಸಾಧಿಸುತ್ತಿದ್ದು, ಸಿಬ್ಬಂದಿ ಗೊಂದಲಕ್ಕೆ ಸಿಲುಕಿದ್ದಾರೆ. ರಾಜ್ಯ ಸರ್ಕಾರದ ವರ್ಗಾವಣೆ ಆದೇಶ ಮತ್ತು ಕೆಎಟಿ ತಡೆಯಾಜ್ಞೆಯಿಂದಾಗಿ ಈ ಸಮಸ್ಯೆ ಉದ್ಭವವಾಗಿದೆ. ಇಂತಹ ಘಟನೆಗಳಿಂದ ಸರ್ಕಾರಿ ಕಚೇರಿಗಳ ಕೆಲಸ ಕಾರ್ಯದಲ್ಲಿ ಸಮಸ್ಯೆ ಉಂಟಾಗುತ್ತಿದೆ.

ಕಲಬುರಗಿಯಲ್ಲಿ ಒಂದೇ ಹುದ್ದೆಗಾಗಿ ಇಬ್ಬರು ಅಧಿಕಾರಿಗಳ ನಡುವೆ ಫೈಟ್​: ಗೊಂದಲದಲ್ಲಿ ಸಿಬ್ಬಂದಿ
ಒಂದೇ ಹುದ್ದೆಗಾಗಿ ಅಧಿಕಾರಿಗಳ ನಡುವೆ ಫೈಟ್​Image Credit source: Tv9 Kannada
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: ಪ್ರಸನ್ನ ಹೆಗಡೆ|

Updated on: Nov 03, 2025 | 4:15 PM

Share

ಕಲಬುರಗಿ, ನವೆಂಬರ್​ 03: ಕರ್ನಾಟಕದ ವಿವಿಧ ಸರ್ಕಾರಿ ಕಚೇರಿಗಳಲ್ಲಿ ಒಂದೇ ಹುದ್ದೆ, ಒಂದೇ ಕುರ್ಚಿಗಾಗಿ ಅಧಿಕಾರಿಗಳ ನಡುವೆ ಕಿತ್ತಾಟ ನಡೆದಿರುವ ಪ್ರಸಂಗಗಳು ಮೇಲಿಂದ ಮೇಲೆ ವರದಿಯಾಗುತ್ತಲೇ ಇವೆ. ಮೇಲಾಧಿಕಾರಿಗಳ ಬೇಜವಾಬ್ದಾರಿಯಿಂದಲೋ, ಇಲಾಖೆಯ ಲೋಪದಿಂದಾಗಿಯೋ ಇಂತಹ ಘಟನೆಗಳು ಮರುಕಳಿಸುತ್ತಲೇ ಇವೆ. ಈ ಸಾಲಿಗೀಗ ಕಲಬುರಗಿಯ ಚೈಲ್ಡ್​ ಡೆವಲಪ್​ಮೆಂಟ್​ ಪ್ರೊಜೆಕ್ಟ್​ ಆಫೀಸರ್​ (CDPO) ಹುದ್ದೆಯೂ ಸೇರ್ಪಡೆಯಾಗಿದೆ.

ಕಲಬುರಗಿ ನಗರ CDPO ಹುದ್ದೆಗೆ ಇಬ್ಬರು ಅಧಿಕಾರಿಗಳ ನಡುವೆ ಫೈಟ್​ ಶುರುವಾಗಿದ್ದು, ಶ್ರೀನಿವಾಸ್ ಬಾಳವಾಳೆ ಮತ್ತು ಶಿವಶರಣಪ್ಪ ಎಂಬ ಅಧಿಕಾರಿಗಳ ನಡುವೆ ತಿಕ್ಕಾಟ ಶುರುವಾಗಿದೆ. ಶ್ರೀನಿವಾಸ್ ಬಾಳವಾಳೆ ಅವರನ್ನು CDPO ಹುದ್ದೆಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿತ್ತು. ಅದರಂತೆ ಶ್ರೀನಿವಾಸ್​ ಅವರೂ ಕಲಬುರಗಿಯಲ್ಲಿ ಅಧಿಕಾರ ಸ್ವೀಕರಿಸಿದ್ದರು. ಇದಾಗಿ ಒಂದು ತಿಂಗಳಲ್ಲೆ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಆ ಜಾಗಕ್ಕೆ ಶಿವಶರಣಪ್ಪ ಅವರನ್ನ ನೇಮಿಸಿ ಸರ್ಕಾರ ಆದೇಶಿಸಿತ್ತು. ಸರ್ಕಾರದ ಈ ಆದೇಶವನ್ನು ಪ್ರಶ್ನಿಸಿ ಶ್ರೀನಿವಾಸ್​ ಅವರು ಕೆಎಟಿ (Karnataka Appellate Tribunal) ಮೊರೆ ಹೋಗಿದ್ದು, ಆರ್ಡರ್​ಗೆ ಸ್ಟೇ ಕೂಡ ತಂದಿದ್ದರು. ಆ ಬಳಿಕ ಸರ್ಕಾರ ಮೂವ್ಮೆಂಟ್ ಆರ್ಡರ್ ನೀಡದೆ ಇದ್ದರೂ ಕಲಬುರಗಿ CDPO ಆಗಿ ಶ್ರೀನಿವಾಸ್​ ಮರಳಿ ಅಧಿಕಾರ ವಹಿಸಿಕೊಂಡಿದ್ದಾರೆ. ಇತ್ತ ಸರ್ಕಾರ ರಿಲೀವ್ ಆರ್ಡರ್ ನೀಡದ ಹಿನ್ನಲೆ ಶಿವಶರಣಪ್ಪ ‌ಅವರೂ ಅದೇ ಹುದ್ದೆಯಲ್ಲಿ ಮುಂದುವರಿದಿದ್ದಾರೆ.

ಇದನ್ನೂ ಓದಿ: ಆರೇ ವರ್ಷಕ್ಕೇ ಕಲಬುರಗಿ ಬೆಂಗಳೂರು ವಿಮಾನ ಸಂಚಾರ ಬಂದ್‌!

ಇಬ್ಬರಲ್ಲಿ CDPO ಯಾರು?: ಸಿಬ್ಬಂದಿಗೆ ಗೊಂದಲ

ಕಳೆದ 15 ದಿನಗಳಿಂದ ಶ್ರೀನಿವಾಸ್ ಬಾಳವಾಳೆ ಮತ್ತು ಶಿವಶರಣಪ್ಪ ಇಬ್ಬರೂ ಒಂದೇ ಹುದ್ದೆಯಲ್ಲಿ ಅಧಿಕಾರ ಚಲಾವಣೆ ಮಾಡುತ್ತಿದ್ದಾರೆ. ಹೀಗಾಗಿ ಇಬ್ಬರು ಅಧಿಕಾರಿಗಳ ಪೈಕಿ ಯಾರು CDPO ಎಂಬ ಗೊಂದಲದಲ್ಲಿ ಮಹಿಳಾ‌ ಮತ್ತು ಮಕ್ಕಳ ಇಲಾಖೆ ಸಿಬ್ಬಂದಿ ಇದ್ದು, ಯಾರ ಆದೇಶ ಪಾಲಿಸಬೇಕು ಎಂದು ಗೊತ್ತಾಗದೆ ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ಸಮಸ್ಯೆ ಬಗೆಹರಿಸಬೇಕಾದ ಇಲಾಖೆಯ ಹಿರಿಯ ಅಧಿಕಾರಿಗಳೂ ಮೌನಕ್ಕೆ ಶರಣಾಗಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ