ಕಲಬುರಗಿ: ಬಾಲಕಿಯರ ಹಾಸ್ಟೆಲ್​ಗೆ ನುಗ್ಗಿದ ಹಳ್ಳದ ನೀರು; ಟೆರೇಸ್ ಏರಿ ಕುಳಿತ ವಿದ್ಯಾರ್ಥಿನಿಯರು

ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ವಿದ್ಯಾರ್ಥಿನಿಯರ‌ನ್ನು ರಕ್ಷಿಸಿದರು. ಸದ್ಯ ವಿದ್ಯಾರ್ಥಿನಿಯರನ್ನು ಬೇರೆ ಹಾಸ್ಟೆಲ್‌ಗೆ ಸ್ಥಳಾಂತರಿಸಲಾಗಿದೆ.

ಕಲಬುರಗಿ: ಬಾಲಕಿಯರ ಹಾಸ್ಟೆಲ್​ಗೆ ನುಗ್ಗಿದ ಹಳ್ಳದ ನೀರು; ಟೆರೇಸ್ ಏರಿ ಕುಳಿತ ವಿದ್ಯಾರ್ಥಿನಿಯರು
ವಿದ್ಯಾರ್ಥಿನಿಯರನ್ನು ರಕ್ಷಿಸಿದ ದೃಶ್ಯಗಳು
Follow us
TV9 Web
| Updated By: guruganesh bhat

Updated on:Sep 27, 2021 | 7:44 PM

ಕಲಬುರಗಿ: ಹಳ್ಳದ ನೀರು ನುಗ್ಗಿ ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ಶಹಾಬಾದ್ ರಸ್ತೆಯಲ್ಲಿರುವ ಬಾಲಕಿಯರ ವಸತಿ ನಿಲಯ ಜಲಾವೃತಗೊಂಡಿತ್ತು. ಹಾಸ್ಟೆಲ್​ನಲ್ಲಿದ್ದ ವಿದ್ಯಾರ್ಥಿಗಳ ಬೆಡ್, ಹಾಸಿಗೆ, ಬಟ್ಟೆ, ಎಲ್ಲ ವಸ್ತು ನೀರುಪಾಲಾಗಿದ್ದು, ಜೀವರಕ್ಷಣೆಗೆ ಹಾಸ್ಟೆಲ್​ನಲ್ಲಿ ತಂಗಿದ್ದ ವಿದ್ಯಾರ್ಥಿನಿಯರು ಮಹಡಿಯ ಮೇಲೇರಿ ಕುಳಿತುಕೊಂಡಿದ್ದರು. ನಾಗಾವಿ ಹಳ್ಳದ ಪ್ರವಾಹದಿಂದ ನೀರು ಹಾಸ್ಟೆಲ್‌ಗೆ ನುಗ್ಗಿದ ಕಾರಣ ಈ ಅವಾಂತರ ಸೃಷ್ಟಿಯಾಗಿತ್ತು. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ವಿದ್ಯಾರ್ಥಿನಿಯರ‌ನ್ನು ರಕ್ಷಿಸಿದರು. ಸದ್ಯ ವಿದ್ಯಾರ್ಥಿನಿಯರನ್ನು ಬೇರೆ ಹಾಸ್ಟೆಲ್‌ಗೆ ಸ್ಥಳಾಂತರಿಸಲಾಗಿದೆ. 

ಐಪಿಎಲ್ ಬೆಟ್ಟಿಂಗ್; ಇಬ್ಬರ ಬಂಧನ

ಬೆಂಗಳೂರು: IPL ಕ್ರಿಕೆಟ್ ಬೆಟ್ಟಿಂಗ್​ನಲ್ಲಿ ತೊಡಗಿದ್ದ ಇಬ್ಬರನ್ನು ಬೆಂಗಳೂರಿನ ಕೆ.ಜಿ.ಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಅಕ್ರಮ್ ಶೇಖ್ ಹಾಗೂ ಅನ್ವರ್ ಶರೀಫ್ ಬಂಧಿತರು. ಬಂಧಿತರಿಂದ 16 ಸಾವಿರ ನಗದು, 2 ಮೊಬೈಲ್​ಗಳನ್ನು ಜಪ್ತಿ ಮಾಡಲಾಗಿದ್ದು, ಕೆ.ಜಿ.ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪಘಾತ ಸುದ್ದಿಗಳು ಕಾರವಾರ: ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬೆಟ್ಕುಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಆಕ್ಸಿಜನ್ ಟ್ಯಾಂಕ್‌ಗಳನ್ನು ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿದೆ. ಕುಮಟಾದಿಂದ ಕಾರವಾರಕ್ಕೆ ಆಕ್ಸಿಜನ್ ಟ್ಯಾಂಕ್‌ ಸಾಗಣೆ ಮಾಡುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಲಾರಿಯಲ್ಲಿ ಸಿಲುಕಿಕೊಂಡಿದ್ದ ಚಾಲಕ, ಕ್ಲೀನರ್ರನ್ನು ಸ್ಥಳೀಯರು, ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಆನೇಕಲ್: ಶಾಲಾ ವಾಹನಕ್ಕೆ ಟಿಪ್ಪರ್ ಡಿಕ್ಕಿಯಾಗಿ 7 ಮಕ್ಕಳಿಗೆ ಗಾಯವಾದ ಘಟನೆ ತಮಿಳುನಾಡಿನ ಜೂಜುವಾಡಿ ಬಳಿ ಸಂಭವಿಸಿದೆ. ಜೂಜುವಾಡಿ ಚೆಕ್ಪೋಸ್ಟ್ ಬಳಿ ಟರ್ನಿಂಗ್ ವೇಳೆ ಘಟನೆ ನಡೆದಿದ್ದು ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿ‌ ಚಿಕಿತ್ಸೆ ನೀಡಲಾಗುತ್ತಿದೆ

ಹಾವೇರಿ: ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ದುರ್ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಗುಂಡೂರು ಗ್ರಾಮದಲ್ಲಿ ನಡೆದಿದೆ. ಹಾನಗಲ್ ತಾಲೂಕಿನ ಮಕರವಳ್ಳಿಯ ನಿವಾಸಿ ಗಜೇಂದ್ರ ಪೂಜಾರ(25) ಸಾವನ್ನಪ್ಪಿದ ದುರ್ದೈವಿ. ಗಂಭೀರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಬದುಕಿಸಲು ಸ್ಥಳೀಯರು ಪ್ರಯತ್ನ ಮಾಡಿದರೂ ಅವರು ಬದುಕುಳಿಯಲಿಲ್ಲ. ಹಾನಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ: ಲಾರಿ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಲಾರಿಯ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹೊಸಮನೆ ಗ್ರಾಮದಲ್ಲಿ ಸಂಭವಿಸಿದೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಹೊಸನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: 

ದೇಸಾಯಿವಾಡೆ: ಶಂಕರ್ ನಾಗ್ ಅವರ ಜೋಕುಮಾರ ಸ್ವಾಮಿ ಚಿತ್ರ ಶೂಟಿಂಗ್ ನಡೆದದ್ದು ಇಲ್ಲೇ

ದೆಹಲಿ ಪ್ರವಾಸಿ ತಾಣಗಳ ಮಾಹಿತಿ ನೀಡುವ ಆ್ಯಪ್​ ಬಿಡುಗಡೆ: ದೆಹಲಿಯನ್ನು ಅನುಭವಿಸಿ

(Kalaburagi Chittapur BMC girls hostel flooded with water)

Published On - 4:23 pm, Mon, 27 September 21

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ