AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಭಕ್ತರ ರೂಪದಲ್ಲಿ ದೇವಸ್ಥಾನಕ್ಕೆ ಎಂಟ್ರಿ, ನೋಡ ನೋಡುತ್ತಿದ್ದಂತೆ ದೇವಿಯ ಮಾಂಗಲ್ಯ ಸರ ಕದ್ದು ಎಸ್ಕೇಪ್​

ಕಲಬುರಗಿ ನಗರದಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಅದರಲ್ಲೂ ಇದೀಗ ಹಾಡಹಗಲೇ ದೇವಸ್ಥಾನಗಳನ್ನೆ ಟಾರ್ಗೆಟ್ ಮಾಡಿಕೊಂಡಿರುವ ಕಳ್ಳರು, ದೇವಿಯ ಮಾಂಗಲ್ಯ ಸರವನ್ನು ಕೂಡ ಬಿಡದೆ ಕದ್ದು ಪರಾರಿಯಾಗುತ್ತಿದ್ದಾರೆ. ಭಕ್ತರ ರೂಪದಲ್ಲಿ ದೇವಸ್ಥಾನಕ್ಕೆ ಎಂಟ್ರಿ ನೀಡುತ್ತಿರುವ ಕಳ್ಳರು, ದೇವರ ಮೈಮೇಲಿನ ಚಿನ್ನಾಭರಣಗಳನ್ನು ಕದ್ದು ಪರಾರಿಯಾಗುತ್ತಿದ್ದಾರೆ.

ಕಲಬುರಗಿ: ಭಕ್ತರ ರೂಪದಲ್ಲಿ ದೇವಸ್ಥಾನಕ್ಕೆ ಎಂಟ್ರಿ, ನೋಡ ನೋಡುತ್ತಿದ್ದಂತೆ  ದೇವಿಯ ಮಾಂಗಲ್ಯ ಸರ ಕದ್ದು ಎಸ್ಕೇಪ್​
ಭಕ್ತನ ನೆಪದಲ್ಲಿ ಬಂದು ಕಳ್ಳತನ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Apr 13, 2023 | 8:43 AM

Share

ಕಲಬುರಗಿ: ಇದೇ ಎಪ್ರಿಲ್ 9 ರಂದು ನಗರದ ಗಾಜಿಪುರದಲ್ಲಿರುವ ಹಿಂಗುಲಾಂಬಿಕಾ ದೇವಸ್ಥಾನ(Temple)ದಲ್ಲಿ ಕಳ್ಳತನವಾಗಿದೆ. ಅದು ಕೂಡ ರಾತ್ರಿ ಸಮಯದಲ್ಲಿ ಅಲ್ಲ, ಬದಲಾಗಿ ಹಗಲೊತ್ತಿನಲ್ಲಿ. ಸಂಜೆ 5 ಗಂಟೆ 34 ನಿಮಿಷಕ್ಕೆ ದೇವಸ್ಥಾನಕ್ಕೆ ಭಕ್ತನ ಸೋಗಿನಲ್ಲಿ ಬಂದಿದ್ದ ಯುವಕನೋರ್ವ ಹಿಂಗುಲಾಂಬಿಕಾ ದೇವಿಯ ಕತ್ತಲ್ಲಿದ್ದ 21 ಗ್ರಾಂನ ಚಿನ್ನದ ತಾಳಿಯನ್ನು ಕದ್ದು ಪರಾರಿಯಾಗಿದ್ದಾನೆ. ನಂತರ ದೇವಸ್ಥಾನದ ಅರ್ಚಕ ಎಚ್ಚೆತ್ತುಕೊಂಡು ಕಳ್ಳನನ್ನು ನೋಡಲು ಬಂದರೂ ಕೂಡ ಭಕ್ತನ ವೇಷದಲ್ಲಿದ್ದ ಕಳ್ಳ, ಕ್ಷಣಾರ್ಧದಲ್ಲಿಯೇ ಅಲ್ಲಿಂದ ಪರಾರಿಯಾಗಿದ್ದಾನೆ.

ಹೌದು ದೇವಸ್ಥಾನದ ಪೂಜಾರಿ ತಮ್ಮ ಕೆಲಸದಲ್ಲಿ ನಿರತರಾಗಿದ್ದಾರೆ. ಕೆಲ ಭಕ್ತರು ದೇವಸ್ಥಾನಕ್ಕೆ ಬಂದು ಹೋಗುತ್ತಿದ್ದಾರೆ. ದೇವಸ್ಥಾನದಲ್ಲಿಯೇ ಇದ್ದ ಅರ್ಚಕ ಭಕ್ತರು ಬಂದಿದ್ದಾರೆ, ದೇವಿ ದರ್ಶನ ಪಡೆದು ಹೋಗುತ್ತಾರೆ ಎಂದು ಸುಮ್ಮನೇ ತಮ್ಮ ಕೆಲಸದಲ್ಲಿ ನಿರತರಾಗಿದ್ದಾರೆ. ಆದರೆ ದೇವಸ್ಥಾನಕ್ಕೆ ಬಂದು ದೇವಿಯ ಮೂರ್ತಿಗೆ ಕೈ ಮುಗಿದ ಓರ್ವ ಭಕ್ತ, ಅತ್ತ ಇತ್ತ ನೋಡಿ ಗರ್ಭಗುಡಿ ಪ್ರದಕ್ಷಿಣೆ ಹಾಕಿ, ದೇವಿಯ ಗರ್ಭಗುಡಿಯೊಳಗೆ ಹೋಗಿ, ದೇವಿಯ ಕತ್ತಲ್ಲಿದ್ದ ಚಿನ್ನದ ಮಾಂಗಲ್ಯ ಸರವನ್ನು ಕದ್ದು ಹೊರಗೆ ಬರುತ್ತಾನೆ. ನಂತರ ಕೂಡ ದೇವಿಗೆ ಮತ್ತೆ ಕೈ ಮುಗಿಯುತ್ತಾನೆ. ಬಳಿಕ ದೇವಸ್ಥಾನದ ಅರ್ಚಕನಿಗೆ ಮಾತಾಡಿಸಿ ಹೋಗುತ್ತಾನೆ.

ಇದನ್ನೂ ಓದಿ:ತುಮಕೂರು: ದೇವಸ್ಥಾನದ ದಲಿತ ಅರ್ಚಕನ ಮೇಲೆ ಸವರ್ಣೀಯರಿಂದ ಮಾರಣಾಂತಿಕ ಹಲ್ಲೆ

ಇನ್ನು ಈ ರೀತಿಯ ಕಳ್ಳತನವಾಗುತ್ತಿರುವುದು ಇದೆ ಮೊದಲೇನಲ್ಲ. ಕೆಲ ತಿಂಗಳ ಹಿಂದಷ್ಟೇ ಇದೇ ದೇವಸ್ಥಾನದಲ್ಲಿ ಇದೇ ರೀತಿ ಕಳ್ಳತನವಾಗಿತ್ತಂತೆ. ಆಗ ಕೂಡ ದೇವಿಯ ಕತ್ತಲ್ಲಿದ್ದ ಮಾಂಗಲ್ಯ ಸರವನ್ನು ಕಳ್ಳರು ಕದ್ದುಕೊಂಡು ಪರಾರಿಯಾಗಿದ್ದಾರೆ. ಇದೇ ಕಾರಣಕ್ಕೆ ದೇವಸ್ಥಾನದ ಸಿಬ್ಬಂಧಿ, ದೇವಸ್ಥಾನದಲ್ಲಿ ಸಿಸಿಟಿವಿ ಕೂಡಾ ಅಳವಡಿಸಿದ್ದಾರೆ. ಆದರೆ ಕಳ್ಳರು ಸಿಸಿಟಿವಿಗಳಿಗೂ ಕೂಡ ಡೋಂಟ್ ಕೇರ್ ಅಂತಿದ್ದಾರೆ. ಯಾರು ನಮ್ಮನ್ನು ಏನು ಮಾಡಲು ಆಗಲ್ಲ ಎಂದು ಭಕ್ತರ ರೂಪದಲ್ಲಿ ದೇವಸ್ಥಾನಕ್ಕೆ ಬಂದು, ಕಳ್ಳತನ ಮಾಡಿಕೊಂಡು ಹೋಗಿದ್ದಾರೆ. ಈ ದೇವಸ್ಥಾನದಲ್ಲಿ ಮಾತ್ರವಲ್ಲ ಕಲಬುರಗಿ ನಗರದ ಅನೇಕ ದೇವಸ್ಥಾನಗಳಲ್ಲಿ ಕಳ್ಳತನವಾಗುತ್ತಿವೆಯಂತೆ.

ಹೌದು ನಗರದ ಚನ್ನವೀರ ನಗರದಲ್ಲಿರುವ ಅಂಬಾ ಭವಾನಿ ದೇವಸ್ಥಾನ ಸೇರಿದಂತೆ ಅನೇಕ ಕಡೆ ಕಳ್ಳರು ಕಳ್ಳತನ ಮಾಡಿದ್ದಾರೆ. ಅದರಲ್ಲೂ ಕೂಡ ಹೆಚ್ಚು ಭಕ್ತರು ಇಲ್ಲದೇ ಇರುವ ಸಮಯದಲ್ಲಿ ದೇವಸ್ಥಾನಕ್ಕೆ ಬರುವ ಈ ಕಳ್ಳರು, ಭಕ್ತರಂತೆ ನಟಿಸಿ, ದೇವರಿಗೆ ನಮಸ್ಕಾರ ಮಾಡಿ ದೇವರ ಮೈಮೇಲೆ ಇರುವ ಚಿನ್ನಾಭರಣಗಳನ್ನು ಕದ್ದು ಪರಾರಿಯಾಗುತ್ತಿದ್ದಾರೆ. ಇನ್ನು ಮೇಲಿಂದ ಮೇಲೆ ದೇವಸ್ಥಾನದಲ್ಲಿ ಕಳ್ಳತನವಾದರೂ ಕೂಡ ಆರೋಪಿಗಳು ಪತ್ತೆಯಾಗುತ್ತಿಲ್ಲ. ಇದು ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ:Canada Hindu Temple Vandalised: ಕೆನಡಾದಲ್ಲಿ ಹಿಂದೂ ದೇವಸ್ಥಾನದ ಮೇಲೆ ಮತ್ತೆ ಕಿಡಿಗೇಡಿಗಳಿಂದ ದಾಳಿ

ಇನ್ನು ಹಿಂಗುಲಾಂಬಿಕಾ ದೇವಸ್ಥಾನದಲ್ಲಿ ನಡೆದ ಕಳ್ಳತನ ಘಟನೆ ಬಗ್ಗೆ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಆದರೆ ಮೇಲಿಂದ ಮೇಲೆ ದೇವಸ್ಥಾನಗಳನ್ನೇ ಕಳ್ಳರು ಟಾರ್ಗೆಟ್ ಮಾಡಿಕೊಂಡು ಕಳ್ಳತನ ಮಾಡುತ್ತಿರುವುದು ಭಕ್ತರ ನೋವಿಗೆ ಕಾರಣವಾಗಿದೆ. ಹೀಗಾಗಿ ಪೊಲೀಸರು ಇನ್ನಷ್ಟು ಕ್ರಮಗಳನ್ನು ಕೈಗೊಂಡು, ದೇವಸ್ಥಾನಗಳನ್ನೇ ಟಾರ್ಗೇಟ್ ಮಾಡುತ್ತಿರುವ ಕಳ್ಳ ಬೆಕ್ಕುಗಳನ್ನು ಪತ್ತೆ ಮಾಡಿ ಅವರನ್ನು ಕಂಬಿ ಹಿಂದೆ ಕಳುಹಿಸುವ ಕೆಲಸ ಮಾಡಬೇಕಿದೆ.

ವರದಿ: ಸಂಜಯ್ ಟಿವಿ9 ಕಲಬುರಗಿ

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್