AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿಯಲ್ಲಿ ಶೀಲ ಶಂಕಿಸಿ ಪತಿಯಿಂದ ಪತ್ನಿಯ ಹತ್ಯೆ: ಕೊಡಲಿಯಿಂದ ಕೊಚ್ಚಿ ಪರಾರಿ

ಕಲಬುರಗಿಯಲ್ಲಿ ಪತ್ನಿಯ ಶೀಲ ಶಂಕಿಸಿ ಪತಿಯೇ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. 32 ವರ್ಷದ ನೀಲಾಬಾಯಿ ರಾಠೋಡ್ ಮೃತರು. ಆರೋಪಿ ಪತಿ ನಾಮದೇವ ರಾಠೋಡ್ ಪರಾರಿಯಾಗಿದ್ದು, ಫರಹತಾಬಾದ್ ಪೊಲೀಸರು ಆತನಿಗಾಗಿ ಶೋಧ ನಡೆಸುತ್ತಿದ್ದಾರೆ. ಘಟನೆಯಿಂದ ಕಲಬುರಗಿ ಜಿಲ್ಲೆಯ ಜನತೆ ಬೆಚ್ಚಿಬೀಳುವಂತಾಗಿದೆ.

ಕಲಬುರಗಿಯಲ್ಲಿ ಶೀಲ ಶಂಕಿಸಿ  ಪತಿಯಿಂದ ಪತ್ನಿಯ ಹತ್ಯೆ: ಕೊಡಲಿಯಿಂದ ಕೊಚ್ಚಿ ಪರಾರಿ
ಸಾಂದರ್ಭಿಕ ಚಿತ್ರ
ದತ್ತಾತ್ರೇಯ ಪಾಟೀಲ್​
| Edited By: |

Updated on: Nov 01, 2026 | 4:31 PM

Share

ಮುಖ್ಯಾಂಶಗಳು

  • ಪತ್ನಿಯ ಶೀಲ ಶಂಕಿಸಿ ಪತಿಯಿಂದ ಭೀಕರ ಹತ್ಯೆ
  • ಮಲಗಿದ್ದ ಪತ್ನಿಯ ಮೇಲೆ ಕೊಡಲಿಯಿಂದ ಹಲ್ಲೆ
  • ಕೊಲೆ ಬಳಿಕ ಪರಾರಿಯಾದ ಪತಿಗೆ ಪೊಲೀಸರ ಶೋಧ

ಕಲಬುರಗಿ, ನವೆಂಬರ್ 1: ಪತ್ನಿಯ ಶೀಲ ಶಂಕಿಸಿ ಪತಿ ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. 32 ವರ್ಷದ ನೀಲಾಬಾಯಿ ರಾಠೋಡ್ ಕೊಲೆಯಾದ ಮಹಿಳೆ. ಆರೋಪಿಯಾಗಿರುವ ಪತಿ ನಾಮದೇವ ರಾಠೋಡ್ ಕೃತ್ಯ ಎಸಗಿ ಪರಾರಿಯಾಗಿದ್ದು, ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಕಾಳಗಿ ತಾಲೂಕಿನ ಕೋಡ್ಲಿ ತಾಂಡಾದ ನೀಲಾಬಾಯಿ ರಾಠೋಡ್ ಅವರನ್ನು ಸುಮಾರು ಒಂಬತ್ತು ವರ್ಷಗಳ ಹಿಂದೆ ಕಲಬುರಗಿ ತಾಲೂಕಿನ ಬಸವನ ತಾಂಡಾದ ನಿವಾಸಿ ನಾಮದೇವ ರಾಠೋಡ್‌ಗೆ ವಿವಾಹ ಮಾಡಿಕೊಡಲಾಗಿತ್ತು. ದಂಪತಿಗೆ ಮೂವರು ಮಕ್ಕಳಿದ್ದಾರೆ. ಕುಟುಂಬದೊಂದಿಗೆ ಜೀವನ ಸಾಗಿಸುತ್ತಿದ್ದ ನೀಲಾಬಾಯಿ, ಕಲಬುರಗಿ ನಗರದ ರಾಮಮಂದಿರ ವೃತ್ತದಲ್ಲಿ ತರಕಾರಿ ವ್ಯಾಪಾರ ಮಾಡುತ್ತಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಪತ್ನಿಯ ಮೇಲೆ ಅನುಮಾನ ಪಡುತ್ತಿದ್ದ ಪತಿ

ಕೆಲ ದಿನಗಳಿಂದ ನಾಮದೇವ ರಾಠೋಡ್ ಪತ್ನಿಯ ನಡವಳಿಕೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿ ಕಿರುಕುಳ ನೀಡುತ್ತಿದ್ದ. ನೀಲಾಬಾಯಿ ಅವರ ಮೊಬೈಲ್‌ಗೆ ಕರೆ ಅಥವಾ ಸಂದೇಶ ಬಂದರೂ ಅನುಮಾನದಿಂದ ನೋಡುತ್ತಿದ್ದ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಇದೇ ವಿಚಾರವಾಗಿ ದಂಪತಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು.

ನಾಮದೇವ ಕೃಷಿ ಕೂಲಿ ಕೆಲಸ ಮಾಡುತ್ತಿದ್ದ. ಆತ ನಿತ್ಯ ಮದ್ಯಪಾನ ಮಾಡಿ ಬಂದು ಪತ್ನಿಗೆ ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡುತ್ತಿದ್ದ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಪತಿಯ ಕಿರುಕುಳ ತಾಳಲಾರದೆ ಕೆಲ ದಿನಗಳ ಹಿಂದೆ ನೀಲಾಬಾಯಿ ತಮ್ಮ ಮೂವರು ಮಕ್ಕಳೊಂದಿಗೆ ತವರು ಮನೆಗೆ ತೆರಳಿದ್ದರು.

ಸಂಧಾನದ ಬಳಿಕ ಮತ್ತೆ ಗಂಡನ ಮನೆಗೆ ತೆರಳಿದ್ದ ನೀಲಾಬಾಯಿ

ಬಳಿಕ ತಾಂಡಾದ ಹಿರಿಯರು ಮತ್ತು ಕುಟುಂಬಸ್ಥರ ಸಮ್ಮುಖದಲ್ಲಿ ದಂಪತಿ ನಡುವೆ ಸಂಧಾನ ನಡೆಸಿ ನೀಲಾಬಾಯಿ ಅವರನ್ನು ಮತ್ತೆ ಗಂಡನ ಮನೆಗೆ ಕಳುಹಿಸಲಾಗಿತ್ತು ಎಂದು ತಿಳಿದುಬಂದಿದೆ. ಆದರೆ, ಪತ್ನಿಯ ಮೇಲಿನ ನಾಮದೇವನ ಅನುಮಾನ ಕಡಿಮೆಯಾಗಿರಲಿಲ್ಲ. ಕುಟುಂಬದ ಆರ್ಥಿಕ ಜವಾಬ್ದಾರಿಯನ್ನು ಹೊತ್ತಿದ್ದ ನೀಲಾಬಾಯಿ, ತಾಂಡಾದಿಂದ ಕಲಬುರಗಿ ನಗರಕ್ಕೆ ಬಂದು ತರಕಾರಿ ಮಾರಾಟ ಮಾಡುತ್ತಾ ಮಕ್ಕಳನ್ನು ಸಾಕುತ್ತಿದ್ದರು ಎಂದು ಕುಟುಂಬಸ್ಥರು ಹೇಳಿದ್ದಾರೆ.

ಮಲಗಿದ್ದ ಪತ್ನಿಯ ಮೇಲೆ ಕೊಡಲಿಯಿಂದ ಹಲ್ಲೆ

ಪತ್ನಿಯ ಮೇಲಿನ ಅನುಮಾನವೇ ಕೊನೆಗೆ ಭೀಕರ ಕೃತ್ಯಕ್ಕೆ ಕಾರಣವಾಗಿದೆ. ಇದೇ ವಿಚಾರವಾಗಿ ಇತ್ತೀಚೆಗೆ ಮನೆಯಲ್ಲಿ ದೊಡ್ಡ ಮಟ್ಟದ ಜಗಳ ನಡೆದಿತ್ತು. ಬಳಿಕ ಮನೆಯಲ್ಲಿ ಮಲಗಿದ್ದ ನೀಲಾಬಾಯಿ ಅವರ ಮೇಲೆ ಪತಿ ನಾಮದೇವ ರಾಠೋಡ್ ಕೊಡಲಿಯಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಕೃತ್ಯ ಎಸಗಿದ ಬಳಿಕ ಆರೋಪಿ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

LIVE TV

ಈ ಸಂಬಂಧ ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಆರೋಪಿ ನಾಮದೇವ ರಾಠೋಡ್ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಪತಿಯ ಅನುಮಾನ ಮತ್ತು ನಿರಂತರ ಕಿರುಕುಳದ ನಡುವೆ ನೀಲಾಬಾಯಿ ಅವರ ಜೀವನ ದುರಂತ ಅಂತ್ಯ ಕಂಡಿದ್ದು, ಅವರ ಮೂವರು ಮಕ್ಕಳು ತಾಯಿಯನ್ನು ಕಳೆದುಕೊಂಡಿದ್ದಾರೆ. ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಮೃತಳ ಕುಟುಂಬಸ್ಥರು ಆಗ್ರಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದತ್ತಾತ್ರೇಯ ಪಾಟೀಲ್​
ದತ್ತಾತ್ರೇಯ ಪಾಟೀಲ್​

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
ಕಿಚ್ಚ ಸುದೀಪ್ ಎದುರಲ್ಲೇ ಬಿಗ್ ಬಾಸ್ ಸ್ಪರ್ಧಿಗಳ ಆರೋಪ, ಪ್ರತ್ಯಾರೋಪ
ಕಿಚ್ಚ ಸುದೀಪ್ ಎದುರಲ್ಲೇ ಬಿಗ್ ಬಾಸ್ ಸ್ಪರ್ಧಿಗಳ ಆರೋಪ, ಪ್ರತ್ಯಾರೋಪ
ಅರಮನೆ ಅಂಗಳದಲ್ಲಿ ಕನ್ನಡಾಂಬೆಗೆ ನಿತ್ಯವೂ ಪೂಜೆ; ಇತಿಹಾಸ ವಿವರಿಸಿದ ಅರ್ಚಕರು
ಅರಮನೆ ಅಂಗಳದಲ್ಲಿ ಕನ್ನಡಾಂಬೆಗೆ ನಿತ್ಯವೂ ಪೂಜೆ; ಇತಿಹಾಸ ವಿವರಿಸಿದ ಅರ್ಚಕರು
ವಿಪಕ್ಷಗಳ ಒಗ್ಗಟ್ಟು ಪ್ರದರ್ಶನ: ರ‍್ಯಾಲಿಯಲ್ಲಿ ಘಟಾನುಘಟಿ ನಾಯಕರು ಭಾಗಿ
ವಿಪಕ್ಷಗಳ ಒಗ್ಗಟ್ಟು ಪ್ರದರ್ಶನ: ರ‍್ಯಾಲಿಯಲ್ಲಿ ಘಟಾನುಘಟಿ ನಾಯಕರು ಭಾಗಿ
ಹಿರೇಮಗಳೂರು ಕೋದಂಡರಾಮ ದೇಗುಲ: ನಿತ್ಯವೂ ಕನ್ನಡದಲ್ಲೇ ಪೂಜೆ, ಮಂತ್ರಘೋಷ!
ಹಿರೇಮಗಳೂರು ಕೋದಂಡರಾಮ ದೇಗುಲ: ನಿತ್ಯವೂ ಕನ್ನಡದಲ್ಲೇ ಪೂಜೆ, ಮಂತ್ರಘೋಷ!
ದೆಹಲಿಯಲ್ಲಿ ಕನ್ನಡ ರಾಜ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಸಿದ್ದರಾಮಯ್ಯ
ದೆಹಲಿಯಲ್ಲಿ ಕನ್ನಡ ರಾಜ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಸಿದ್ದರಾಮಯ್ಯ
ಹಾಸನಾಂಬೆ ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಯಿಂದ ಹರಿದು ಬಂದ ಭಕ್ತರು
ಹಾಸನಾಂಬೆ ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಯಿಂದ ಹರಿದು ಬಂದ ಭಕ್ತರು
ಮೈಸೂರು:ಕನ್ನಡಾಂಬೆ ಭುವನೇಶ್ವರಿ ದೇಗುಲದ ಬಗ್ಗೆ ನಿಮಗೆಷ್ಟು ಗೊತ್ತು?
ಮೈಸೂರು:ಕನ್ನಡಾಂಬೆ ಭುವನೇಶ್ವರಿ ದೇಗುಲದ ಬಗ್ಗೆ ನಿಮಗೆಷ್ಟು ಗೊತ್ತು?
ಲವ್ ಮಾಡೋದು ಬಿಟ್ಟು ಆಟವಾಡು: ಸುದೀಪ್ ಎದುರಲ್ಲೇ ಸೌಂದರ್ಯಾಗೆ ಕಿರಣ್ ಟೀಕೆ
ಲವ್ ಮಾಡೋದು ಬಿಟ್ಟು ಆಟವಾಡು: ಸುದೀಪ್ ಎದುರಲ್ಲೇ ಸೌಂದರ್ಯಾಗೆ ಕಿರಣ್ ಟೀಕೆ
ಬೆಳಗಾವಿಯಲ್ಲಿ ಕಳೆಗಟ್ಟಿದ ಕನ್ನಡ ಹಬ್ಬ
ಬೆಳಗಾವಿಯಲ್ಲಿ ಕಳೆಗಟ್ಟಿದ ಕನ್ನಡ ಹಬ್ಬ
ಇಂದು ಈ ರಾಶಿಯವರಿಗೆ ಗಜಕೇಸರಿ ಯೋಗ!
ಇಂದು ಈ ರಾಶಿಯವರಿಗೆ ಗಜಕೇಸರಿ ಯೋಗ!