ಕಲಬುರಗಿ: ಸಿಲಿಂಡರ್ ಸ್ಪೋಟ, ಹೊತ್ತಿ ಉರಿದ ಮನೆ; ಬೆಲೆಬಾಳುವ ವಸ್ತುಗಳು ಬೆಂಕಿಗಾಹುತಿ

ಜಿಲ್ಲೆಯ ಅಫಜಲಪುರ ತಾಲೂಕಿನ ಅಳ್ಳಗಿ ಬಿ ಗ್ರಾಮದಲ್ಲಿ ಸಿಲಿಂಡರ್​ ಸ್ಫೋಟಗೊಂಡು ಮನೆ ಹೊತ್ತಿ ಉರಿದ ಘಟನೆ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಕಲಬುರಗಿ: ಸಿಲಿಂಡರ್ ಸ್ಪೋಟ, ಹೊತ್ತಿ ಉರಿದ ಮನೆ; ಬೆಲೆಬಾಳುವ ವಸ್ತುಗಳು ಬೆಂಕಿಗಾಹುತಿ
ಪ್ರಾತಿನಿಧಿಕ ಚಿತ್ರ
Follow us
ಕಿರಣ್ ಹನುಮಂತ್​ ಮಾದಾರ್
|

Updated on: Apr 05, 2023 | 10:28 AM

ಕಲಬುರಗಿ: ಜಿಲ್ಲೆಯ ಅಫಜಲಪುರ ತಾಲೂಕಿನ ಅಳ್ಳಗಿ ಬಿ ಗ್ರಾಮದಲ್ಲಿ ಸಿಲಿಂಡರ್​ ಸ್ಫೋಟಗೊಂಡು ಮನೆ ಹೊತ್ತಿ ಉರಿದ ಘಟನೆ ನಡೆದಿದೆ. ಅಳ್ಳಗಿ ಗ್ರಾಮದ ಶರಣಪ್ಪ ಎಂಬುವರ ಮನೆಯಲ್ಲಿ ಸಿಲಿಂಡರ್ ಸ್ಫೋಟವಾಗಿದ್ದು, ಮನೆಯಲ್ಲಿದ್ದ ದವಸ ಧಾನ್ಯ, ಬೆಲೆಬಾಳುವ ವಸ್ತುಗಳು ಬೆಂಕಿಗಾಹುತಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಈ ಕುರಿತು ಅಫಜಲಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಟೈರ್​ ಸ್ಫೋಟಗೊಂಡು ಕಾರು ಪಲ್ಟಿ, ನಾಲ್ವರಿಗೆ ಗಾಯ

ವಿಜಯಪುರ: ಟೈರ್​ ಸ್ಫೋಟಗೊಂಡು ಕಾರು ಪಲ್ಟಿಯಾಗಿ ನಾಲ್ವರಿಗೆ ಗಾಯಗಳಾದ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ರಾಂಪುರ ಬಳಿ ನಡೆದಿದೆ. ನಿಂಗಪ್ಪ, ಪಾರ್ವತಿ, ಸಿದ್ಧಾರೂಢ ಕುಡುಕಿ, ಅಯ್ಯಪ್ಪಗೆ ಎಂಬುವವರಿಗೆ ಗಾಯಗಳಾಗಿದ್ದು, ಸಿಂದಗಿ ತಾಲೂಕು ಆಸ್ಪತ್ರೆಗೆ ಸೇರಿಸಲಾಗಿದೆ. ಘಟನಾ ಸ್ಥಳಕ್ಕೆ ಸಿಂದಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಂದಗಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:Gadag cyclist: ಬಡತನದ ಬೆಂಕಿಯಲ್ಲಿ ಪುಟವಿಟ್ಟ ಬಾಲಕಿ ಇದೀಗ ಚಿನ್ನದ ಸೈಕ್ಲಿಸ್ಟ್ ಆಗಿದ್ದಾಳೆ, ಸಿಎಂ ಬೊಮ್ಮಾಯಿ- ಟಿವಿ9 ಸಕಾಲಿಕ ನೆರವನ್ನು ಸ್ಮರಿಸಿದ್ದಾಳೆ!

ಹೊತ್ತಿ ಉರಿದ ಜೆಸ್ಕಾಂ ಪವರ್ ಸ್ಟೇಷನ್: 25 ಗ್ರಾಮಗಳಿಗೆ ವಿದ್ಯುತ್​ ಸ್ಥಗಿತ

ಕಲಬುರಗಿ: ಜಿಲ್ಲೆಯ ಸೇಡಂ ತಾಲೂಕಿನ ಬಟಗೇರಾ ಗ್ರಾಮದಲ್ಲಿನ ಜೆಸ್ಕಾಂ ಪವರ್ ಸ್ಟೇಷನ್ ಹೊತ್ತಿ ಉರಿದಿದೆ. ನಿನ್ನೆ (ಏ.2) ರಂದು ಸಾಯಂಕಾಲ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೆ ವಿದ್ಯುತ್​ ಸರಬರಾಜನ್ನು ಬಂದ್​ ಮಾಡಲಾಗಿದೆ. ಈ ಹಿನ್ನೆಲೆ ​​​ಸೇಡಂ ತಾಲೂಕಿನ 25 ಗ್ರಾಮಗಳಿಗೆ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದೆ. ಇನ್ನು ಬಿಸಿಲಿನ ತಾಪಮಾನ ಹೆಚ್ಚಾಗಿ ಶಾರ್ಟ್ ಸರ್ಕ್ಯೂಟ್​​ನಿಂದ ಬೆಂಕಿ ಅನಾಹುತ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ. ಸೇಡಂ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪುತ್ತೂರಿನಲ್ಲಿ ಬಟ್ಟೆ ಅಂಗಡಿಗೆ ಆಕಸ್ಮಿಕ ಬೆಂಕಿ, ಇತರ ಅಂಗಡಿಗಳಿಗೂ ಹಾನಿ

ಮಂಗಳೂರು: ಬಟ್ಟೆ ಅಂಗಡಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿ ನಡೆದಿದೆ. ಈ ಬೆಂಕಿಯು ಅಕ್ಕ ಪಕ್ಕದಲೇ ಇದ್ದ ಇತರ ಬಟ್ಟೆ ಅಂಗಡಿಗೆ ಹಬ್ಬಿದ್ದು ಅಪಾರ ಪ್ರಮಾಣದ ಹಾನಿ ಉಂಟು ಮಾಡಿದೆ. ಇದೀಗ ಸ್ಥಳಕ್ಕೆ  ಅಗ್ನಿ ಶಾಮಕ ದಳವು ಕೂಡ ದಾವಿಸಿದ್ದು, ಬೆಂಕಿ ಹಾರಿಸುವ ಕಾರ್ಯಚರಣೆಯನ್ನು ಮಾಡಿದೆ.

ಒಂದು ಅಂಗಡಿಗೆ ಬಿದ್ದ ಬೆಂಕಿಯು ಇತರ ಅಂಗಡಿಗಳಿಗೂ ತಗುಳಿದೆ, ಭಾರಿ ಪ್ರಮಾಣದ ಹೊಗೆಯೊಂದಿಗೆ ಇಡಿ ಕಟ್ಟಡ ಹೊತ್ತಿ ಉರಿದಿದೆ. ಘಟನೆ ನಡೆದ ಸ್ಥಳದಲ್ಲಿ ನೂರಾರು ಜನರು ಸೇರಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ಸಹಾಯ ಮಾಡಿದ್ದಾರೆ. ಉಪ್ಪಿನಂಗಡಿ ಠಾಣೆ ಪೊಲೀಸರು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಯಾವುದೇ ಅಪಾಯ ಸಂಭವಿಸಿದಂತೆ ಕಟ್ಟೆಚರ ವಹಿಸಿದ್ದಾರೆ. ಬೆಂಕಿ ಅವಘಡದಿಂದ ಯಾವುದೇ ಪ್ರಾಣ ಅಪಾಯ ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಕಿಗೆ ಅವಘಡಕ್ಕೆ ಕಾರಣ ಏನು? ಎಂದು ಈವರೆಗೂ ತಿಳಿದು ಬಂದಿಲ್ಲ. ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ