ಚಿಕಿತ್ಸೆ ಪಡೆದುಕೊಳ್ಳಲು ಬಂದು ಎಂಬಿಬಿಎಸ್ ವಿದ್ಯಾರ್ಥಿನಿಗೆ ಮರ್ಮಾಂಗ ತೋರಿಸಿದ ಯುವಕ‌

ಕೋಲ್ಕತಾದಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯನ್ನು ರೇಪ್ ಮಾಡಿ ಕೊಲೆ ಮಾಡಿರುವ ಅಮಾನುಷ ಘಟನೆ ಮಾಸುವ ಮುನ್ನವೇ ಇತ್ತ ಕಲಬುರ್ಗಿಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದೆ. ಇದೀಗ ವಿಕೃತಿ ಮೆರೆದ ಅಪರಿಚಿತ ಯುವಕನಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

ಚಿಕಿತ್ಸೆ ಪಡೆದುಕೊಳ್ಳಲು ಬಂದು ಎಂಬಿಬಿಎಸ್ ವಿದ್ಯಾರ್ಥಿನಿಗೆ ಮರ್ಮಾಂಗ ತೋರಿಸಿದ ಯುವಕ‌
ಚಿಕಿತ್ಸೆ ಪಡೆದುಕೊಳ್ಳಲು ಬಂದು ಎಂಬಿಬಿಎಸ್ ವಿದ್ಯಾರ್ಥಿನಿಗೆ ಮರ್ಮಾಂಗ ತೋರಿಸಿದ ಯುವಕ‌
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 20, 2024 | 2:41 PM

ಕಲಬುರಗಿ, ಆ.20: ಎಂಬಿಬಿಎಸ್ ವಿದ್ಯಾರ್ಥಿನಿಯರಿಗೆ ಯುವಕನೊಬ್ಬ ಮರ್ಮಾಂಗ ತೋರಿಸಿ ಅಸಹ್ಯವಾಗಿ ವರ್ತಿಸಿದ ಘಟನೆ ಕಲಬುರಗಿಯ ಇಎಸ್​ಐ ಆಸ್ಪತ್ರೆ(Kalaburagi ESI Hospital)ಯಲ್ಲಿ ಆ.14 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇಎಸ್​ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಓಪಿಡಿ ಚೀಟಿ ತೆಗೆದುಕೊಂಡು ಬಂದಿದ್ದ ಅಪರಿಚಿತ ಯುವಕ, ಎಂಬಿಬಿಎಸ್ ವಿದ್ಯಾರ್ಥಿನಿಯರ ಓಪಿಡಿಗೆ ಎಂಟ್ರಿ ಕೊಟ್ಟಿದ್ದಾನೆ. ಬಳಿಕ ಚಿಕಿತ್ಸೆ ಪಡೆದುಕೊಳ್ಳುವ ಹಾಗೆ ಅವರ ಮುಂದೆ ಕೂತು ಮರ್ಮಾಂಗ ತೋರಿಸಿದ ವಿಕೃತಿ ಮೆರೆದಿದ್ದಾನೆ.

ಗುಲ್ಬರ್ಗಾ ವಿ.ವಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು

ಅಷ್ಟೇ ಅಲ್ಲ, ಹಾಸ್ಟೆಲ್​ನಿಂದ ಆಸ್ಪತ್ರೆಗೆ ಬರುವಾಗಲು ಹಿಂಬಾಲಿಸಿದ ಈ ವ್ಯಕ್ತಿ, ಇ‌ಎಸ್​ಐ ಆಸ್ಪತ್ರೆಯ ವಿಧ್ಯಾರ್ಥಿನಿಯರಿಗೆ ಕಿರುಕುಳ ನೀಡಿದ್ದಾನೆ. ಬಳಿಕ ಎಚ್ಚೆತ್ತ ವಿದ್ಯಾರ್ಥಿನಿಯರು ಇಎಸ್​ಐ ಆಸ್ಪತ್ರೆಯ ಡೀನ್​​ಗೆ ಘಟನೆ ಕುರಿತು ಮಾಹಿತಿ ನೀಡಿದ್ದಾರೆ. ಇದೀಗ ಈ ಕುರಿತು ಗುಲ್ಬರ್ಗಾ ವಿ.ವಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ವಿಕೃತಿ ಮೆರೆದ ಅಪರಿಚಿತ ಯುವಕನಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

ಇದನ್ನೂ ಓದಿ:ಬೆಂಗಳೂರು: ಲಿಫ್ಟ್‌ ಕೇಳಿದ ಯುವತಿ ಮೇಲೆ ಎರಗಿ ಅತ್ಯಾಚಾರ ಎಸಗಿದ್ದ ಕಾಮುಕ ಅರೆಸ್ಟ್, ಸಿಸಿಟಿವಿ ಆಧರಿಸಿ ಆರೋಪಿ ಬಂಧನ

ದಕ್ಷಿಣ ಕನ್ನಡ: ಜಿಲ್ಲೆಯ ಪುತ್ತೂರು ತಾಲೂಕಿನ ಕೊಂಬೆಟ್ಟು ಸರ್ಕಾರಿ ಕಾಲೇಜಿನಲ್ಲಿ ಅಪ್ರಾಪ್ತ ಮುಸ್ಲಿಂ ವಿದ್ಯಾರ್ಥಿನಿ ಮೇಲೆ ಅಪ್ರಾಪ್ತ ಬಾಲಕ ಇರಿದ ಘಟನೆ ನಡೆದಿದೆ. ಚೂರಿಯಿಂದ ಕೈಗೆ ಇರಿದ ವಿದ್ಯಾರ್ಥಿಯನ್ನ ಸಧ್ಯ ಪೊಲೀಸ್ ವಶಕ್ಕೆ ನೀಡಲಾಗಿದೆ. ಜೊತೆಗೆ ಗಾಯಗೊಂಡ ವಿದ್ಯಾರ್ಥಿನಿಯನ್ನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಆಸ್ಪತ್ರೆಯಲ್ಲಿ ಹೆಸರು ಬದಲಾಯಿಸಿ ಹೇಳುವಂತೆ ಶಿಕ್ಷಕಿ ಒತ್ತಡ ಹೇರಿದ್ದಾರೆ ಎಂದು ಬಾಲಕಿ ಆರೋಪಿಸಿದ್ದಾರೆ. ಆಸ್ಪತ್ರೆಯ ಮುಂದೆ ಜನ ಸೇರಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದಸರಾ ಹಬ್ಬದ ವಿಶೇಷ ಬಸ್​ಗಳು ​ಫುಲ್: ಬಿಬಿಎಂಟಿಸಿ ಬಸ್ ವ್ಯವಸ್ಥೆ
ದಸರಾ ಹಬ್ಬದ ವಿಶೇಷ ಬಸ್​ಗಳು ​ಫುಲ್: ಬಿಬಿಎಂಟಿಸಿ ಬಸ್ ವ್ಯವಸ್ಥೆ
ಇಷ್ಟು ದಿನ ಸ್ವರ್ಗದಲ್ಲಿದ್ದು ಈಗ ನರಕದ ಪಾಲಾದ ಐಶ್ವರ್ಯಾ; ಜಗದೀಶ್​ಗೆ ಖುಷಿ
ಇಷ್ಟು ದಿನ ಸ್ವರ್ಗದಲ್ಲಿದ್ದು ಈಗ ನರಕದ ಪಾಲಾದ ಐಶ್ವರ್ಯಾ; ಜಗದೀಶ್​ಗೆ ಖುಷಿ
ಹಬ್ಬಕ್ಕಾಗಿ ದೂರದ ಊರುಗಳಿಗೆ ಪ್ರಯಾಣಿಸುತ್ತಿರೋರಿಗೆ ಮಳೆ ಕಾಟ!
ಹಬ್ಬಕ್ಕಾಗಿ ದೂರದ ಊರುಗಳಿಗೆ ಪ್ರಯಾಣಿಸುತ್ತಿರೋರಿಗೆ ಮಳೆ ಕಾಟ!
ಆ ಸಮಯದ ಬಳಿಕ ರಜನೀಕಾಂತ್ ನಾಯಕನಾಗಿ ನಟಿಸಲ್ಲ: ಗೆಳೆಯ ಬಹದ್ದೂರ್
ಆ ಸಮಯದ ಬಳಿಕ ರಜನೀಕಾಂತ್ ನಾಯಕನಾಗಿ ನಟಿಸಲ್ಲ: ಗೆಳೆಯ ಬಹದ್ದೂರ್
ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆ ಮುನ್ಸೂಚನೆ: ಎಲ್ಲೆಲ್ಲಿ?
ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆ ಮುನ್ಸೂಚನೆ: ಎಲ್ಲೆಲ್ಲಿ?
ಸಿದ್ದರಾಮಯ್ಯ ಮೇಲಿದ್ದ ವಿಶ್ವಾಸ ಹುಸಿಹೋಗಿದೆ, ರಾಜೀನಾಮೆ ನೀಡಲಿ: ರವಿಕುಮಾರ್
ಸಿದ್ದರಾಮಯ್ಯ ಮೇಲಿದ್ದ ವಿಶ್ವಾಸ ಹುಸಿಹೋಗಿದೆ, ರಾಜೀನಾಮೆ ನೀಡಲಿ: ರವಿಕುಮಾರ್
ದಸರಾ ರಜೆ: ತುಂಬಿ ತುಳುಕುತ್ತಿರೋ ಬೆಂಗಳೂರಿನ KSRTC ಬಸ್​ ನಿಲ್ದಾಣ
ದಸರಾ ರಜೆ: ತುಂಬಿ ತುಳುಕುತ್ತಿರೋ ಬೆಂಗಳೂರಿನ KSRTC ಬಸ್​ ನಿಲ್ದಾಣ
ಚನ್ನಪಟ್ಟಣ: ಬೇರೆ ಅಭ್ಯರ್ಥಿ ಒಪ್ಪಿಕೊಳ್ಳುವುದು ಕುಮಾರಸ್ವಾಮಿಗೆ ಸಾಧ್ಯವಿಲ್ಲ
ಚನ್ನಪಟ್ಟಣ: ಬೇರೆ ಅಭ್ಯರ್ಥಿ ಒಪ್ಪಿಕೊಳ್ಳುವುದು ಕುಮಾರಸ್ವಾಮಿಗೆ ಸಾಧ್ಯವಿಲ್ಲ
ಸುಲಭ ಕ್ಯಾಚ್ ಕೈಚೆಲ್ಲಿದ ಬಾಬರ್; 262 ರನ್ ಚಚ್ಚಿದ ರೂಟ್
ಸುಲಭ ಕ್ಯಾಚ್ ಕೈಚೆಲ್ಲಿದ ಬಾಬರ್; 262 ರನ್ ಚಚ್ಚಿದ ರೂಟ್
ಅದೃಷ್ಟ ಅಂದ್ರೆ ಇದಪ್ಪಾ..! 25 ಕೋಟಿ ರೂ. ಲಾಟರಿ ಗೆದ್ದ ಕನ್ನಡಿಗನ ಮನದ ಮಾತು
ಅದೃಷ್ಟ ಅಂದ್ರೆ ಇದಪ್ಪಾ..! 25 ಕೋಟಿ ರೂ. ಲಾಟರಿ ಗೆದ್ದ ಕನ್ನಡಿಗನ ಮನದ ಮಾತು