AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kalaburagi Accident: ಕಲಬುರಗಿಯ ಚಿತ್ತಾಪುರದಲ್ಲಿ ಭೀಕರ ರಸ್ತೆ ಅಪಘಾತ, ಒಂದೇ ಕುಟುಂಬದ ಐವರ ದುರ್ಮರಣ

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಬಳಿ ಶುಕ್ರವಾರ ಮಧ್ಯರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಕ್ರೂಸರ್ ವಾಹನ ಮತ್ತು ಲಾರಿ ನಡುವಿನ ಮುಖಾಮುಖಿ ಡಿಕ್ಕಿಯಿಂದ ಇಂಗಳಗಿ ಗ್ರಾಮದ ನಿವಾಸಿಗಳಾದ ತೋಲುಸಾಬ್, ಹುಸೇನ್ ಷಾ, ಮೈಬೂಬ್ ಅಲಿ, ರಸೂಲ್ ಬೀ ಮತ್ತು ಫಾತೀಮಾ ಅಲಿ ಪ್ರಾಣ ಕಳೆದುಕೊಂಡಿದ್ದಾರೆ. ಘಟನೆಯಿಂದ ಇಂಗಳಗಿ ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದೆ.

Kalaburagi Accident: ಕಲಬುರಗಿಯ ಚಿತ್ತಾಪುರದಲ್ಲಿ ಭೀಕರ ರಸ್ತೆ ಅಪಘಾತ, ಒಂದೇ ಕುಟುಂಬದ ಐವರ ದುರ್ಮರಣ
ಕಲಬುರಗಿ ಅಪಘಾತ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: May 23, 2026 | 7:48 AM

Share

ಕಲಬುರಗಿ, ಮೇ 23: ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಮಧ್ಯರಾತ್ರಿ ಸಂಭವಿಸಿದ ಭೀಕರ ಅಪಘಾತ(Accident)ದಲ್ಲಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಮೃತರೆಲ್ಲರೂ ಚಿತ್ತಾಪುರ ತಾಲೂಕಿನ ಇಂಗಳಗಿ ಗ್ರಾಮದ ನಿವಾಸಿಗಳಾಗಿದ್ದಾರೆ. ಕುಟುಂಬದ ಸದಸ್ಯರೆಲ್ಲರೂ ವೈಯಕ್ತಿಕ ಕೆಲಸದ ನಿಮಿತ್ತ ಯಾದಗಿರಿಗೆ ತೆರಳಿದ್ದರು. ಕೆಲಸ ಮುಗಿಸಿಕೊಂಡು ಮಧ್ಯರಾತ್ರಿ ಕ್ರೂಸರ್ ವಾಹನದಲ್ಲಿ ತಮ್ಮ ಊರಾದ ಇಂಗಳಗಿಗೆ ವಾಪಸ್ ಆಗುತ್ತಿದ್ದರು. ಈ ವೇಳೆ ಲಾಡ್ಲಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬಂದ ಲಾರಿ ಹಾಗೂ ಇವರ ಕ್ರೂಸರ್ ವಾಹನದ ನಡುವೆ ಮುಖಾಮುಖಿ ಭೀಕರ ಡಿಕ್ಕಿಯಾಗಿದೆ.

ಸ್ಥಳದಲ್ಲೇ ಐವರ ಸಾವು, ನುಜ್ಜುಗುಜ್ಜಾದ ವಾಹನ ಡಿಕ್ಕಿಯ ರಭಸ ಎಷ್ಟಿತ್ತೆಂದರೆ ಕ್ರೂಸರ್ ವಾಹನವು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ವಾಹನದಲ್ಲಿದ್ದ ಇಂಗಳಗಿ ಗ್ರಾಮದ ನಿವಾಸಿಗಳಾದ ತೋಲುಸಾಬ್ ಕ್ಯಾಶ್ವಾರ್ (27), ಹುಸೇನ್ ಷಾ (48), ಮೈಬೂಬ್ ಅಲಿ (45), ರಸೂಲ್ ಬೀ (42) ಮತ್ತು ಫಾತೀಮಾ ಅಲಿ (38) ಅವರು ತೀವ್ರ ರಕ್ತಸ್ರಾವದಿಂದಾಗಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಮತ್ತಷ್ಟು ಓದಿ: ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ

ಪೊಲೀಸ್ ಅಧಿಕಾರಿಗಳ ಭೇಟಿ ಮಧ್ಯರಾತ್ರಿ ಹೆದ್ದಾರಿಯಲ್ಲಿ ನಡೆದ ಈ ಭೀಕರ ದುರಂತದ ಮಾಹಿತಿ ಸಿಗುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಧಾವಿಸಿದ್ದಾರೆ. ಅಪಘಾತ ನಡೆದ ಜಾಗವನ್ನು ಪರಿಶೀಲನೆ ನಡೆಸಲಾಗಿದ್ದು, ನುಜ್ಜುಗುಜ್ಜಾದ ವಾಹನದಿಂದ ಮೃತದೇಹಗಳನ್ನು ಹೊರತೆಗೆದು ಮುಂದಿನ ಕಾನೂನು ಪ್ರಕ್ರಿಯೆಗಳನ್ನು ಕೈಗೊಳ್ಳಲಾಗಿದೆ. ಒಂದೇ ಕುಟುಂಬದ ಐವರು ಜತೆಯಾಗಿಯೇ ಪ್ರಾಣ ಕಳೆದುಕೊಂಡಿರುವುದರಿಂದ ಇಂಗಳಗಿ ಗ್ರಾಮದಲ್ಲಿ ಸದ್ಯ ಸೂತಕದ ಛಾಯೆ ಆವರಿಸಿದೆ.

ಕರ್ನಾಟಕದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Dattatraya Patil
Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More